ಯೆಶಾಯ 43:27 - ಪರಿಶುದ್ದ ಬೈಬಲ್27 ನಿನ್ನ ಮೊದಲನೆ ತಂದೆಯು ಪಾಪದಲ್ಲಿ ಬಿದ್ದನು. ನಿನ್ನ ವಕೀಲರು ನನಗೆ ವಿರುದ್ಧವಾಗಿ ಕಾರ್ಯ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನಿನ್ನ ಮೂಲಪಿತೃ ಪಾಪಮಾಡಿದ್ದಾನೆ, ನಿನ್ನ ಬೋಧಕರು ನನಗೆ ದ್ರೋಹಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಪಾಪಿಷ್ಟನಾಗಿದ್ದನು ನಿನ್ನ ಮೂಲಪಿತೃವು ನನಗೆ ದ್ರೋಹಿಗಳಾಗಿದ್ದರು ನಿನ್ನ ಪರವಾದಿಗಳು ನನ್ನ ಪವಿತ್ರಾಲಯವನ್ನು ಹೊಲೆಮಾಡಿದರು ನಿನ್ನ ಅಧಿಪತಿಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನಿನ್ನ ಮೂಲಪಿತೃವು ಪಾಪಿಷ್ಠನು, ನಿನ್ನ ಮಧ್ಯಸ್ಥರು ನನಗೆ ದ್ರೋಹಮಾಡಿದವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನಿನ್ನ ಮೂಲಪಿತೃ ಪಾಪಮಾಡಿದ್ದಾನೆ. ನಿನ್ನ ಬೋಧಕರು ನನಗೆ ವಿರೋಧವಾಗಿ ದ್ರೋಹ ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |
ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.
ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.