ಯೆಶಾಯ 43:28 - ಪರಿಶುದ್ದ ಬೈಬಲ್28 ಪರಿಶುದ್ಧವಾಗಿ ಆಳುವ ನಿನ್ನವರನ್ನು ನಾನು ಅಪರಿಶುದ್ಧ ಮಾಡುವೆನು. ಯಾಕೋಬನನ್ನು ಸಂಪೂರ್ಣವಾಗಿ ನಾಶಮಾಡುವೆನು. ಇಸ್ರೇಲಿಗೆ ಕೆಟ್ಟ ವಿಷಯಗಳು ಸಂಭವಿಸುವವು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆದಕಾರಣ ನಾನು ಪವಿತ್ರಾಲಯದ ಪ್ರಧಾನರನ್ನು ಹೊಲಸಿಗೆ ತಂದು ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗೂ ಒಪ್ಪಿಸಿಬಿಟ್ಟಿದ್ದೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಎಂದೇ ಗುರಿಮಾಡಿದೆ ಯಕೋಬನ್ನು ಶಾಪಕ್ಕೆ ಈಡುಪಡಿಸಿದೆ ಇಸ್ರಯೇಲನ್ನು ನಿಂದೆದೂಷಣೆಗೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆದಕಾರಣ ನಾನು ಪವಿತ್ರಾಲಯದ ಅಧಿಪತಿಗಳನ್ನು ಹೊಲಸಿಗೆ ತಂದು ಯಾಕೋಬನ್ನು ಶಾಪಕ್ಕೂ ಇಸ್ರಾಯೇಲನ್ನು ದೂಷಣೆಗೂ ಗುರಿಮಾಡಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆದಕಾರಣ ಪವಿತ್ರಾಲಯದ ಪ್ರಧಾನರನ್ನು ನಾಚಿಕೆಪಡಿಸಿ, ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |
ಇಸ್ರೇಲಿನ ಜನರಲ್ಲಿ ಒಬ್ಬರೂ ಸಹ ನಿನ್ನ ಉಪದೇಶವನ್ನು ಪಾಲಿಸಲಿಲ್ಲ. ಅವರೆಲ್ಲರೂ ಅದರಿಂದ ದೂರಾದರು. ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಶಾಪಗಳ ಮತ್ತು ವಾಗ್ದಾನಗಳ ಬಗ್ಗೆ ಹೇಳಲಾಗಿದೆ. (ಮೋಶೆಯು ದೇವರ ಸೇವಕನಾಗಿದ್ದನು) ಆ ಶಾಪಗಳು ಧರ್ಮಶಾಸ್ತ್ರವನ್ನು ಪಾಲಿಸದಿದ್ದವರಿಗೆ ಆಗುವ ಶಿಕ್ಷೆಯಾಗಿದೆ. ಆ ಎಲ್ಲಾ ಶಿಕ್ಷೆಗಳು ನಮಗೆ ಆಗಿವೆ. ನಾವು ಯೆಹೋವನಾದ ನಿನ್ನ ವಿರುದ್ಧ ಪಾಪ ಮಾಡಿದ್ದರಿಂದ ನಮಗೆ ಹೀಗಾಯಿತು.
ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.