ಯೆಶಾಯ 43:4 - ಪರಿಶುದ್ದ ಬೈಬಲ್4 ನೀನು ನನಗೆ ಅಮೂಲ್ಯನಾದುದರಿಂದ ನಾನು ನಿನ್ನನ್ನು ಗೌರವಿಸಿ ಪ್ರೀತಿಸುವೆನು. ನೀನು ವಾಸಿಸುವಂತೆ ನಾನು ನಿನಗೆ ಎಲ್ಲಾ ಜನರನ್ನು ಮತ್ತು ಜನಾಂಗಗಳನ್ನು ಕೊಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ, ಪ್ರಿಯನೂ ಆಗಿರುವುದರಿಂದ, ನಾನು ನಿನ್ನ ಬದಲಾಗಿ ಮನುಷ್ಯರನ್ನೂ, ನಿನ್ನ ಪ್ರಾಣಕ್ಕೆ ಪ್ರತಿಯಾಗಿ ಜನಾಂಗಗಳನ್ನೂ ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನೀನೆನ್ನ ದೃಷ್ಟಿಗೆ ಅಮೂಲ್ಯನು, ಘನವಂತನು, ಅತಿಪ್ರಿಯನು. ಎಂದೇ ನಿನ್ನ ಪ್ರಾಣರಕ್ಷಣೆಗಾಗಿ ತ್ಯಜಿಸುವೆನು ಜನರನ್ನೂ ಜನಾಂಗಗಳನ್ನೂ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ ಮಾನ್ಯನೂ ಪ್ರಿಯನೂ ಆಗಿರುವದರಿಂದ ನಾನು ನಿನಗೆ ಬದಲಾಗಿ ಮನುಷ್ಯರನ್ನೂ ನಿನ್ನ ಪ್ರಾಣಕ್ಕೆ ಪ್ರತಿಯಾಗಿ ಜನಾಂಗಗಳನ್ನೂ ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ, ಪ್ರಿಯನೂ ಆಗಿರುವುದರಿಂದ ನಾನು ನಿನಗೋಸ್ಕರ ಮನುಷ್ಯರನ್ನೂ, ನಿನ್ನ ಪ್ರಾಣಕ್ಕೆ ಜನಾಂಗಗಳನ್ನೂ ಕೊಡುವೆನು. ಅಧ್ಯಾಯವನ್ನು ನೋಡಿ |
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.