Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:6 - ಪರಿಶುದ್ದ ಬೈಬಲ್‌

6 ನಾನು ಉತ್ತರಕ್ಕೆ ‘ನನ್ನ ಜನರನ್ನು ಬಿಟ್ಟುಕೊಡು’ ಎಂದು ಹೇಳುವೆನು. ದಕ್ಷಿಣಕ್ಕೆ, ‘ನನ್ನ ಜನರನ್ನು ಸೆರೆಮನೆಯಲ್ಲಿರಿಸಬೇಡ’ ಎಂದು ಹೇಳುವೆನು. ಬಹುದೂರ ದೇಶಗಳಿಂದ ನನ್ನ ಮಕ್ಕಳನ್ನು ನನ್ನ ಬಳಿಗೆ ಕರೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ‘ಅವರನ್ನು ಒಪ್ಪಿಸಿಬಿಡು’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ’ ಎಂದು ದಕ್ಷಿಣಕ್ಕೂ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾನಪ್ಪಣೆ ಕೊಡುವೆ ‘ಬೀಳ್ಕೊಡು’ ಎಂದು ಬಡಗಲಿಗೆ ‘ತಡೆಯಬೇಡ’ ಎಂದು ನಾನೇ ಹೇಳುವೆ ತೆಂಕಲಿಗೆ. ಹೀಗೆ ಬರಮಾಡುವೆ ನನ್ನ ಕುವರರನ್ನು ದೂರದಿಂದ ಬರಮಾಡುವೆ ನನ್ನ ಕುವರಿಯರನ್ನು ದಿಗಂತಗಳಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಒಪ್ಪಿಸಿಬಿಡು ಎಂದು ಬಡಗಲಿಗೂ ತಡೆಯಬೇಡ ಎಂದು ತೆಂಕಲಿಗೂ ಹೇಳಿ ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ‘ನಾನು ಒಪ್ಪಿಸಿಬಿಡು,’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ,’ ಎಂದು ದಕ್ಷಿಣದಿಕ್ಕಿಗೂ ಹೇಳಿ, ದೂರದಲ್ಲಿರುವ ನನ್ನ ಪುತ್ರರನ್ನೂ, ದಿಗಂತಗಳಲ್ಲಿರುವ ನನ್ನ ಪುತ್ರಿಯರನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:6
26 ತಿಳಿವುಗಳ ಹೋಲಿಕೆ  

“ವಿಶ್ವಾಸದ್ರೋಹಿಗಳಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ” ಇದು ಯೆಹೋವನ ನುಡಿಯಾಗಿತ್ತು. “ನಾನೇ ನಿಮ್ಮ ಒಡೆಯನು. ನಾನು ಪ್ರತಿಯೊಂದು ನಗರದಿಂದ ಒಬ್ಬ ವ್ಯಕ್ತಿಯನ್ನು ಮತ್ತು ಪ್ರತಿಯೊಂದು ಕುಲದಿಂದ ಇಬ್ಬರನ್ನು ಆರಿಸಿ ಚೀಯೋನಿಗೆ ಕರೆದು ತರುವೆನು.


ಆ ಸಮಯದಲ್ಲಿ ಸರ್ವಶಕ್ತನಾದ ಯೆಹೋವನಿಗೆ ವಿಶೇಷವಾದ ಕಾಣಿಕೆಯು ಸಮರ್ಪಿಸಲ್ಪಡುವದು. ಆ ಕಾಣಿಕೆಯು ಉನ್ನತವಾಗಿರುವ ಬಲಶಾಲಿಗಳಾದ ಜನರಿಂದ ಬರುವದು. ಎಲ್ಲಾ ದೇಶಗಳ ಜನರು ಈ ಉನ್ನತವಾದ ಈ ಬಲಿಷ್ಠರಿಗೆ ಹೆದರುವರು. ಅವರು ಬಲಾಢ್ಯ ಜನಾಂಗವಾಗಿದ್ದಾರೆ. ಅವರ ಜನಾಂಗವು ಇತರ ಜನಾಂಗಗಳನ್ನು ಸೋಲಿಸುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿದೆ. ಈ ಕಾಣಿಕೆಯನ್ನು ಚೀಯೋನ್ ಪರ್ವತದಲ್ಲಿರುವ ಯೆಹೋವನ ಸ್ಥಳಕ್ಕೆ ತರುವರು.


ಯೆಹೋವನು ತನ್ನ ಜನರನ್ನು ಅನೇಕ ದೇಶಗಳಿಂದ ಒಟ್ಟುಗೂಡಿಸಿದನು; ಪೂರ್ವಪಶ್ಚಿಮಗಳಿಂದಲೂ ಉತ್ತರ ದಕ್ಷಿಣಗಳಿಂದಲೂ ಬರಮಾಡಿದನು.


ಲೋಕದ ಕಟ್ಟಕಡೆಯ ಸ್ಥಳಕ್ಕೆ ನೀವು ಚದರಿಹೋದರೂ ಅಲ್ಲಿಂದ ನಿಮ್ಮನ್ನು ಹಿಂದಕ್ಕೆ ತರುವನು.


ದೂರದೇಶದಲ್ಲಿರುವ ಜನರೇ, ನೀವು ಸುಳ್ಳುದೇವರನ್ನು ಅವಲಂಬಿಸುವದನ್ನು ನಿಲ್ಲಿಸಿರಿ. ನನ್ನನ್ನು ಹಿಂಬಾಲಿಸಿ ರಕ್ಷಣೆ ಹೊಂದಿರಿ. ನಾನೇ ದೇವರು, ಬೇರೆ ದೇವರುಗಳೇ ಇಲ್ಲ. ನಾನೊಬ್ಬನೇ ದೇವರು.


“ಇಗೋ, ದೂರದೇಶಗಳಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ. ಉತ್ತರ, ಪಶ್ಚಿಮ ದಿಕ್ಕುಗಳಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ. ಈಜಿಪ್ಟಿನ ಅಸ್ವಾನಿನಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ.”


ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನಾನು ಜನಾಂಗಗಳಿಗೆ ಕೈಬೀಸಿ ಸನ್ನೆ ಮಾಡುವೆನು. ಎಲ್ಲಾ ಜನರು ನೋಡುವಂತೆ ನಾನು ನನ್ನ ಧ್ವಜವನ್ನು ಎತ್ತುವೆನು. ಆಗ ಅವರು ನಿನ್ನ ಮಕ್ಕಳನ್ನು ನಿನಗೆ ತಂದೊಪ್ಪಿಸುವರು. ಅವರು ನಿನ್ನ ಮಕ್ಕಳನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ತರುವರು. ತಮ್ಮ ಕೈಗಳಲ್ಲಿ ಅವರನ್ನು ಎತ್ತಿಕೊಂಡು ಬರುವರು.


ಯಾಕೆಂದರೆ ನೀನು ಅಧಿಕವಾಗಿ ಬೆಳೆಯುವಿ. ನಿನ್ನ ಮಕ್ಕಳು ಅನೇಕ ಜನಾಂಗಗಳನ್ನು ವಶಮಾಡಿಕೊಳ್ಳುವರು. ಕೆಡವಿಹಾಕಿದ ಪಟ್ಟಣಗಳಲ್ಲಿ ನಿನ್ನ ಮಕ್ಕಳು ತಿರಿಗಿ ವಾಸಿಸುವರು.


ನಿನ್ನ ಸುತ್ತಲೂ ನೋಡು. ಜನರು ಸುತ್ತಲೂ ನಿನ್ನ ಬಳಿಗೆ ಬಂದು ಸೇರುವದನ್ನು ನೋಡು. ಅವರು ದೂರ ಪ್ರಾಂತ್ಯದಿಂದ ಬರುವ ನಿನ್ನ ಗಂಡುಮಕ್ಕಳಾಗಿದ್ದಾರೆ. ನಿನ್ನ ಕುಮಾರಿಯರು ಅವರೊಂದಿಗೆ ಬರುತ್ತಿದ್ದಾರೆ.


ದೂರ ಪ್ರಾಂತ್ಯಗಳು ನನಗಾಗಿ ಕಾದಿವೆ. ದೊಡ್ಡ ಸರಕು ಸಾಗಿಸುವ ಹಡಗುಗಳು ಹೊರಡಲು ತಯಾರಾಗಿವೆ. ಈ ಹಡಗುಗಳು ದೂರ ಪ್ರಾಂತ್ಯದಲ್ಲಿರುವ ನಿನ್ನ ಮಕ್ಕಳನ್ನು ಕರೆತರಲು ತಯಾರಾಗಿವೆ. ಅವರು ಬೆಳ್ಳಿಬಂಗಾರಗಳನ್ನು ತಮ್ಮೊಂದಿಗೆ ತಂದು ಇಸ್ರೇಲಿನ ಪರಿಶುದ್ಧನಾದ ಯೆಹೋವನನ್ನು ಘನಪಡಿಸುವರು. ಯೆಹೋವನು ನಿನಗೆ ಆಶ್ಚರ್ಯಕರವಾದ ಸಂಗತಿಗಳನ್ನು ಮಾಡುವನು.


ಅವರು ನಿಮ್ಮ ಸಹೋದರಸಹೋದರಿಯರನ್ನು ಎಲ್ಲಾ ಜನಾಂಗಗಳೊಳಗಿಂದ ಕರೆದುಕೊಂಡು ನನ್ನ ಪವಿತ್ರ ಪರ್ವತವಾದ ಜೆರುಸಲೇಮಿಗೆ ಬರುವರು. ನಿನ್ನ ಸಹೋದರಸಹೋದರಿಯರು ಕುದುರೆ, ಕತ್ತೆ, ಒಂಟೆ, ರಥ ಮತ್ತು ಗಾಡಿಗಳಲ್ಲಿ ಕುಳಿತುಕೊಂಡು ಬರುವರು. ಯೆಹೋವನ ಮಂದಿರದೊಳಗೆ ಶುದ್ಧವಾದ ತಟ್ಟೆಯ ಮೇಲೆ ಕಾಣಿಕೆಗಳನ್ನು ತರುವಂತೆಯೇ ನಿನ್ನ ಸಹೋದರಸಹೋದರಿಯರಾದ ಇಸ್ರೇಲರು ಬರುವರು.


ಆದರೆ ಹೊಸ ಕಾಲ ಬರಲಿದೆ. ಆಗ, ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಅವರನ್ನು ಚದರಿಸಿಬಿಟ್ಟಿದ್ದ ಎಲ್ಲ ದೇಶಗಳಿಂದಲೂ ಹೊರತಂದ ಯೆಹೋವನಾಣೆ’ ಎಂದು ಹೇಳುವರು. ಆಗ ಇಸ್ರೇಲರು ಸ್ವದೇಶದಲ್ಲಿ ನೆಲಸುವರು.”


ನಾನು ನಿಮಗೆ ದೊರೆಯುವೆನು.” ಇದು ಯೆಹೋವನ ನುಡಿ. “ನಾನು ನಿಮ್ಮನ್ನು ನಿಮ್ಮ ಬಂಧನದಿಂದ ಬಿಡಿಸಿ ಕರೆದುತರುವೆನು. ನಾನು ಈ ಸ್ಥಳವನ್ನು ಬಿಡಲು ನಿಮಗೆ ಒತ್ತಾಯಿಸಿದೆ. ಆದರೆ ನಾನು ನಿಮ್ಮನ್ನು ಕಳುಹಿಸಿದ್ದ ಎಲ್ಲಾ ಜನಾಂಗಗಳಿಂದ ಮತ್ತು ಎಲ್ಲಾ ಸ್ಥಳಗಳಿಂದ ನಿಮ್ಮನ್ನು ಒಟ್ಟುಗೂಡಿಸಿ ಈ ಸ್ಥಳಕ್ಕೆ ಕರೆದು ತರುವೆನು.” ಇದು ಯೆಹೋವನ ನುಡಿ.


ನಾನು ಇಸ್ರೇಲರನ್ನು ಉತ್ತರದ ದೇಶದಿಂದ ತರುವೆನು. ನಾನು ಜಗತ್ತಿನ ದೂರದೂರದ ಸ್ಥಳಗಳಿಂದ ಇಸ್ರೇಲರನ್ನು ಒಟ್ಟುಗೂಡಿಸುವೆನೆಂದು ತಿಳಿದುಕೊಳ್ಳಿರಿ. ಅವರಲ್ಲಿ ಕೆಲವರು ಕುರುಡರಾಗಿರುವರು; ಕುಂಟರಾಗಿರುವರು, ಕೆಲವು ಸ್ತ್ರೀಯರು ಗರ್ಭಿಣಿಯರಾಗಿದ್ದು ಹೆರಿಗೆಯ ದಿನಗಳು ತುಂಬಿದವರಾಗಿರುತ್ತಾರೆ. ಬಹಳಷ್ಟು ಜನರು ಹಿಂತಿರುಗಿಬರುತ್ತಾರೆ.


ದೇವರು ಹೇಳಿದ್ದೇನೆಂದರೆ, “ನಾನು ಆ ದೇಶಗಳಿಂದ ನಿಮ್ಮನ್ನು ತೆಗೆದು, ನಿಮ್ಮನ್ನು ಒಟ್ಟುಗೂಡಿಸಿ ನಿಮ್ಮ ಸ್ವದೇಶಕ್ಕೆ ತಿರುಗಿ ಬರಮಾಡುವೆನು.


ಯೆಹೋವನು ಹೀಗೆ ಹೇಳುತ್ತಾನೆ ಎಂದು ಆ ಜನರಿಗೆ ಹೇಳು: ‘ನಾನು ಇಸ್ರೇಲ್ ಜನರನ್ನು ಅವರು ಚದರಿದ ದೇಶಗಳಿಂದಲೂ ಸುತ್ತಲಿರುವ ದೇಶಗಳಿಂದಲೂ ಅವರನ್ನು ಒಟ್ಟುಗೂಡಿಸಿ ಅವರ ಸ್ವದೇಶಕ್ಕೆ ತರುವೆನು.


ಆ ದೂರದ ಸ್ಥಳಗಳಿಗೆ ನನ್ನ ಜನರನ್ನು ಕಳುಹಿಸಿದಿರಿ, ಆದರೆ ನಾನು ಅವರನ್ನು ಹಿಂದೆ ತರುವೆನು. ಮತ್ತು ನೀವು ಮಾಡಿದ ಕೃತ್ಯಕ್ಕೆ ನಾನು ನಿಮ್ಮನ್ನು ಶಿಕ್ಷಿಸುವೆನು.


ಕಪ್ಪು ಕುದುರೆಗಳು ಉತ್ತರದಿಕ್ಕಿಗೆ ಹೋಗುವವು. ಕೆಂಪು ಕುದುರೆಗಳು ಪೂರ್ವದಿಕ್ಕಿಗೆ ಹೋಗುವವು. ಬಿಳಿ ಕುದುರೆಗಳು ಪಶ್ಚಿಮಕ್ಕೂ ಮಚ್ಚೆಯಿರುವ ಕುದುರೆಗಳು ದಕ್ಷಿಣ ದಿಕ್ಕಿಗೂ ಹೋಗುವವು.”


ದೇವರು ಜನಾಂಗಗಳಿಗೆ ಒಂದು ಗುರುತಾಗಿ ಧ್ವಜವನ್ನೆತ್ತುವನು. ಇಸ್ರೇಲ್ ಮತ್ತು ಯೆಹೂದದ ಜನರು ತಮ್ಮ ಸ್ಥಳಗಳಿಂದ ಕಡ್ಡಾಯವಾಗಿ ತೆಗೆದುಹಾಕಲ್ಪಡುವರು. ಆ ಜನರು ಪ್ರಪಂಚದ ಬಹುದೂರದ ಸ್ಥಳಗಳಿಗೆ ಚದರಿ ಹೋಗುವರು. ಆದರೆ ದೇವರು ಅವರನ್ನು ಒಟ್ಟಾಗಿ ಸೇರಿಸುವನು.


ನನ್ನ ಜನರಲ್ಲಿ ಹೆಚ್ಚಿನವರು ಅಶ್ಶೂರದಲ್ಲಿ ಈಗ ಕಳೆದುಹೋಗಿರುತ್ತಾರೆ; ಕೆಲವರು ಈಜಿಪ್ಟಿಗೆ ಓಡಿಹೋಗಿದ್ದಾರೆ. ಆ ಸಮಯದಲ್ಲಿ ಮಹಾದೊಡ್ಡ ತುತ್ತೂರಿಯ ಶಬ್ದವು ಕೇಳಿಸುವದು. ಆಗ ಆ ಜನರೆಲ್ಲರೂ ಜೆರುಸಲೇಮಿಗೆ ಹಿಂತಿರುಗುವರು. ಆ ಜನರು ಪರಿಶುದ್ಧ ಪರ್ವತದ ಮೇಲೆ ಯೆಹೋವನ ಮುಂದೆ ಅಡ್ಡಬೀಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು