ಯೆಶಾಯ 43:9 - ಪರಿಶುದ್ದ ಬೈಬಲ್9 ಎಲ್ಲಾ ಜನಾಂಗದವರೂ ಎಲ್ಲಾ ಜನರೂ ಒಟ್ಟುಗೂಡಬೇಕು. ಅವರ ಸುಳ್ಳುದೇವರಲ್ಲಿ ಒಬ್ಬನು ಆದಿಯಲ್ಲಿ ಸಂಭವಿಸಿದ್ದನ್ನು ಹೇಳುವದಾಗಿದ್ದರೆ ತನ್ನ ಸಾಕ್ಷಿಗಳನ್ನು ಕರೆದು ತರಲಿ. ಆ ಸಾಕ್ಷಿಗಳು ಸತ್ಯವನ್ನಾಡಲಿ. ಆಗ ಅವರು ಸತ್ಯವಂತರೋ ಇಲ್ಲವೋ ಎಂದು ಗೊತ್ತಾಗುವದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು? ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವುದಕ್ಕೆ ಸಾಕ್ಷಿಗಳನ್ನು ಕರೆದುತರಲಿ. ಆ ಸಾಕ್ಷಿಗಳು ಇವರ ಮಾತನ್ನು ಕೇಳಿ ‘ಇದು ನಿಜ’ ಎಂದು ಹೇಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಬರಲಿ, ಎಲ್ಲಾ ಜನಾಂಗಗಳು ಒಟ್ಟಿಗೆ ನೆರೆಯಲಿ, ಸಕಲ ದೇಶಿಯರು ಇಲ್ಲಿಯೇ. ಅವರ ದೇವರುಗಳಲ್ಲಿ ಭವಿಷ್ಯವನ್ನು ನುಡಿಯಬಲ್ಲವರು ಯಾರು? ಗತಿಸಿದ ಘಟನೆಗಳನ್ನು ಮುಂತಿಳಿಸಿದವರಾರು? ಕರೆತರಲಿ, ಆ ದೇವರುಗಳು ಸಾಕ್ಷಿಗಳನು ಸ್ಥಾಪಿಸಿಕೊಳ್ಳಲಿ, ತಾವು ಸತ್ಯವಂತರೆಂಬುದನು; ರುಜುಪಡಿಸಲಿ ಕೇಳುವವರಿಗೆ ತಮ್ಮ ಮಾತು ನಿಜವೆಂಬುದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು? ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವದಕ್ಕೆ ಸಾಕ್ಷಿಗಳನ್ನು ಕರತರಲಿ; ಆ ಸಾಕ್ಷಿಗಳು [ಇವರ ಮಾತನ್ನು] ಕೇಳಿ ನಿಜವೆಂದು ಹೇಳಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಎಲ್ಲಾ ಜನಾಂಗಗಳು ಒಟ್ಟಿಗೆ ಕೂಡಿಕೊಳ್ಳಲಿ. ಎಲ್ಲಾ ಜನರೂ ಸೇರಿಕೊಳ್ಳಲಿ. ಅವರ ದೇವರುಗಳಲ್ಲಿ ಭವಿಷ್ಯವನ್ನು ನುಡಿಯಬಲ್ಲವರು ಯಾರು? ಗತಿಸಿದ ಸಂಗತಿಗಳನ್ನು ಮುಂತಿಳಿಸುವವರು ಯಾರು? ನಾವು ನೀತಿವಂತರೆಂದು ಸ್ಥಾಪಿಸುವುದಕ್ಕೆ ಸಾಕ್ಷಿಗಳನ್ನು ಕರೆತರಲಿ. ಆ ಸಾಕ್ಷಿಗಳು ಇದನ್ನು ಕೇಳಿ, ನಿಜವೆಂದು ಹೇಳಲಿ. ಅಧ್ಯಾಯವನ್ನು ನೋಡಿ |