Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:14 - ಪರಿಶುದ್ದ ಬೈಬಲ್‌

14 ಅವನು ತನ್ನ ಕೆಲಸಕ್ಕಾಗಿ ದೇವದಾರು ಮರಗಳನ್ನು, ತುರಾಯಿ ಮರಗಳನ್ನು, ಓಕ್ ಮರಗಳನ್ನು ಕಡಿಯುತ್ತಾನೆ. (ಅವನು ಆ ಮರಗಳನ್ನು ಬೆಳೆಯಿಸಲಿಲ್ಲ. ಅವು ತಾವಾಗಿಯೇ ಅಡವಿಯಲ್ಲಿ ಬೆಳೆದವು. ಅವನು ಮರದ ಸಸಿಯನ್ನು ನೆಟ್ಟರೆ ಮಳೆಯು ಆ ಸಸಿಯನ್ನು ಮರವನ್ನಾಗಿ ಬೆಳೆಯಿಸುವುದು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನು ತನ್ನ ಕೆಲಸಕ್ಕಾಗಿ ದೇವದಾರುಗಳನ್ನು ಕಡಿಯುವನು, ತುರಾಯಿ, ಅಲ್ಲೋನ್ ಮರಗಳನ್ನು ತೆಗೆದುಕೊಳ್ಳುವನು. ವನವೃಕ್ಷಗಳನ್ನು ತನಗೋಸ್ಕರ ಬೆಳೆಯುವನು. ಅವನು ಪೀತದಾರವನ್ನು ನೆಡಲು, ಮಳೆಯು ಅದನ್ನು ಬೆಳೆಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ತನ್ನ ಕೆಲಸಕ್ಕಾಗಿ ದೇವದಾರುಗಳನ್ನು ಕಡಿಯುತ್ತಾನೆ, ತುರಾಯಿ ಅಲ್ಲೋನ್ ಮರಗಳನ್ನು ಆರಿಸಿಕೊಳ್ಳುತ್ತಾನೆ; ಅವುಗಳನ್ನು ವನವೃಕ್ಷಗಳ ನಡುವೆ ಬೆಳೆಸುತ್ತಾನೆ; ಪೀತದಾರ ಮರವನ್ನು ನೆಟ್ಟು, ಮಳೆ ಸುರಿದು ಬೆಳೆಯುವವರೆಗೂ ಕಾಯುತ್ತಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನು ತನ್ನ ಕೆಲಸಕ್ಕಾಗಿ ದೇವದಾರುಗಳನ್ನು ಕಡಿಯುವನು, ತುರಾಯಿ ಅಲ್ಲೋನ್ ಮರಗಳನ್ನು ತೆಗೆದುಕೊಳ್ಳುವನು, ವನವೃಕ್ಷಗಳಲ್ಲಿ ಒಂದನ್ನು ತನಗೋಸ್ಕರ ಸಲಹುವನು; ಅವನು ಪೀತದಾರವನ್ನು ನೆಡಲು ಮಳೆಯು ಅದನ್ನು ಬೆಳೆಯಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅರಣ್ಯದ ಮಧ್ಯದಲ್ಲಿ ಇರುವ ಮರಗಳಲ್ಲಿ ದೇವದಾರುಗಳನ್ನು ಕಡಿದು, ತುರಾಯಿ, ಸೈಪ್ರಸ್ ಮತ್ತು ಏಲಾ ಮರಗಳನ್ನು ತನ್ನ ಕೆಲಸಕ್ಕೋಸ್ಕರ ತೆಗೆದುಕೊಳ್ಳುತ್ತಾನೆ. ಪೀತದಾರ ಮರವನ್ನು ಅವನು ನೆಡಲು, ಮಳೆಯು ಅದನ್ನು ಬೆಳೆಯಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:14
6 ತಿಳಿವುಗಳ ಹೋಲಿಕೆ  

ಅದರ ಪೀಠಕ್ಕಾಗಿ ವಿಶೇಷ ಜಾತಿಯ ಮರವನ್ನು ಆರಿಸುವನು. ಈ ಬಗೆಯ ಮರವು ಕೊಳೆತುಹೋಗುವದಿಲ್ಲ. ಆ ಬಳಿಕ ಅವನು ಒಳ್ಳೆಯ ಬಡಗಿಯನ್ನು ನೇಮಿಸುವನು. ಆ ಬಡಗಿಯು ವಿಗ್ರಹ ನಿಲ್ಲಿಸಿದಾಗ ಅದು ಪಕ್ಕಕ್ಕೆ ವಾಲಿ ಬೀಳದಂತೆ ಮಾಡುವನು.


ಆ ಮೂರ್ತಿಗೆ “ಎದ್ದೇಳು” ಎಂದು ಹೇಳುವವನಿಗೆ ಕೇಡಾಗುವುದು! ಮಾತಾಡಲಾಗದ ಒಂದು ಕಲ್ಲಿಗೆ “ಎಚ್ಚರವಾಗು” ಎಂದು ಹೇಳುವವನಿಗೆ ಕೇಡಾಗುವುದು! ಅವುಗಳು ಅವನಿಗೆ ಸಹಾಯ ಮಾಡುವದಿಲ್ಲ. ಮಾಡಲಿಕ್ಕಾಗುವದೂ ಇಲ್ಲ. ಆ ವಿಗ್ರಹಗಳನ್ನು ಬೆಳ್ಳಿಬಂಗಾರದಿಂದ ಹೊದಿಸಿದರೂ ಆ ವಿಗ್ರಹಗಳಲ್ಲಿ ಜೀವವಿಲ್ಲ.


ನನ್ನ ಜನರು ಮರದ ತುಂಡುಗಳಿಂದ ಸಲಹೆಗಳನ್ನು ಕೇಳುವರು. ಆ ಮರದ ತುಂಡುಗಳು ಅವರಿಗೆ ಉತ್ತರಿಸುವವು ಎಂದು ಅವರು ನೆನಸುತ್ತಾರೆ. ಯಾಕೆಂದರೆ, ವೇಶ್ಯೆಯರಂತೆ ಅವರು ಆ ಸುಳ್ಳು ದೇವರುಗಳನ್ನು ಹಿಂದಟ್ಟಿಕೊಂಡು ಹೋಗುವರು. ಅವರು ತಮ್ಮ ದೇವರುಗಳನ್ನು ಬಿಟ್ಟು ವೇಶ್ಯೆಯರಂತೆ ವರ್ತಿಸುತ್ತಾರೆ.


ಇನ್ನೊಬ್ಬ ಕುಶಲಕರ್ಮಿಯು ತನ್ನ ನೂಲಿನಿಂದಲೂ ಅಡಿಕೋಲುಗಳಿಂದಲೂ ಮರದ ಮೇಲೆ ಗುರುತು ಮಾಡುವನು. ತಾನು ಎಲ್ಲಿ ಮರವನ್ನು ತುಂಡುಮಾಡಬೇಕೆಂದು ಇದರಿಂದ ಗೊತ್ತುಪಡಿಸಿಕೊಳ್ಳುತ್ತಾನೆ. ಅವನು ತನ್ನ ಉಳಿಗಳಿಂದ ಒಂದು ವಿಗ್ರಹವನ್ನು ಮನುಷ್ಯಾಕಾರದಲ್ಲಿ ಕೆತ್ತುತ್ತಾನೆ. ಈ ವಿಗ್ರಹವು ಬೇರೆ ಏನೂ ಮಾಡದೆ ಮನೆಯೊಳಗೆ ಇಟ್ಟ ಸ್ಥಳದಲ್ಲಿಯೇ ಇರುವದು.


ಅವನು ಮರವನ್ನು ಕಡಿದು, ತನ್ನನ್ನು ಬೆಚ್ಚಗೆ ಮಾಡಲು ಅಗ್ಗಿಷ್ಟಿಕೆಗಾಗಿ ಉಪಯೋಗಿಸುತ್ತಾನೆ; ಸಣ್ಣಸಣ್ಣ ತುಂಡುಗಳನ್ನಾಗಿ ಮಾಡಿ ಆಹಾರವನ್ನು ಬೇಯಿಸುತ್ತಾನೆ; ತನ್ನನ್ನು ಬೆಚ್ಚಗೆ ಮಾಡಿಕೊಳ್ಳುತ್ತಾನೆ. ರೊಟ್ಟಿಯನ್ನು ಸುಡುತ್ತಾನೆ; ಉಳಿದ ಮರದ ತುಂಡಿನಿಂದ ಒಂದು ವಿಗ್ರಹವನ್ನು ಕೆತ್ತುತ್ತಾನೆ. ಆ ವಿಗ್ರಹಕ್ಕೆ ದೇವರೆಂದು ಹೇಳುತ್ತಾನೆ; ಆ ದೇವರು ಮನುಷ್ಯನು ತಯಾರಿಸಿದ ವಿಗ್ರಹ. ಆದರೆ ಅವನು ಆ ವಿಗ್ರಹದ ಮುಂದೆ ಅಡ್ಡಬೀಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು