Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:17 - ಪರಿಶುದ್ದ ಬೈಬಲ್‌

17 ಅದರಲ್ಲಿ ಸ್ವಲ್ಪ ಮರದ ತುಂಡು ಉಳಿದಿರುತ್ತದೆ. ಅದನ್ನು ನೋಡಿ ಆ ಮನುಷ್ಯನು ಅದರಿಂದ ವಿಗ್ರಹವನ್ನು ತಯಾರಿಸುವನು. ಅದನ್ನು ದೇವರೆಂದು ಕರೆಯುವನು. ಅದರ ಮುಂದೆ ಅಡ್ಡಬಿದ್ದು ಆರಾಧಿಸುವನು. ಅದರ ಮುಂದೆ ಪ್ರಾರ್ಥಿಸಿ, “ನೀನೇ ನನ್ನ ದೇವರು, ನನ್ನನ್ನು ರಕ್ಷಿಸು” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅದರಲ್ಲಿ ಉಳಿದ ಭಾಗವನ್ನು ತನ್ನ ದೇವರನ್ನಾಗಿಯೂ, ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ, “ನೀನೇ ನನ್ನ ದೇವರು, ನನ್ನನ್ನು ರಕ್ಷಿಸು” ಎಂದು ಪ್ರಾರ್ಥಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಉಳಿದ ಭಾಗದಿಂದ ತನ್ನ ದೇವತೆಯ ವಿಗ್ರಹವನ್ನು ಕೆತ್ತಿ, ಅದಕ್ಕೆ ಎರಗಿ ಅಡ್ಡಬೀಳುತ್ತಾನೆ; “ನೀನೇ ನನ್ನ ದೇವರು; ನನ್ನನ್ನು ರಕ್ಷಿಸು,” ಎಂದು ಪ್ರಾರ್ಥಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಉಳಿದ ಭಾಗವನ್ನು ತನ್ನ ದೇವರನ್ನಾಗಿ ಬೊಂಬೆ ಕೆತ್ತಿ ಅದಕ್ಕೆ ಎರಗಿ ಅಡ್ಡಬಿದ್ದು - ನೀನೇ ನನ್ನ ದೇವರು, ನನ್ನನ್ನು ರಕ್ಷಿಸು ಎಂದು ಪ್ರಾರ್ಥಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ, ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ, ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ, “ನೀನೇ ನನ್ನ ದೇವರು, ನನ್ನನ್ನು ಕಾಪಾಡು,” ಎಂದು ಬೇಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:17
19 ತಿಳಿವುಗಳ ಹೋಲಿಕೆ  

“ಬೇರೆ ದೇಶಗಳಿಂದ ಪಾರಾಗಿ ಬಂದ ಜನರೇ, ಒಟ್ಟಾಗಿ ಸೇರಿಕೊಂಡು ನನ್ನ ಮುಂದೆ ಬನ್ನಿರಿ. (ಈ ಜನರು ಮರದ ವಿಗ್ರಹಗಳನ್ನು ಇಟ್ಟುಕೊಂಡಿದ್ದಾರೆ. ತಮ್ಮನ್ನು ರಕ್ಷಿಸಲಾರದ ವಿಗ್ರಹಕ್ಕೆ ಅವರು ಪ್ರಾರ್ಥಿಸುತ್ತಿದ್ದಾರೆ. ಅವರು ಮಾಡುವದು ಅವರಿಗೇ ತಿಳಿಯದು.


ದೇವರು ಜನರಿಗೆ ಸಹಾಯ ಮಾಡುತ್ತಾನೆ ಮತ್ತು ರಕ್ಷಿಸುತ್ತಾನೆ. ದೇವರು ಭೂಮ್ಯಾಕಾಶಗಳಲ್ಲಿ ಅದ್ಭುತಕಾರ್ಯಗಳನ್ನು ಮಾಡುತ್ತಾನೆ. ದೇವರು ದಾನಿಯೇಲನನ್ನು ಸಿಂಹಗಳಿಂದ ರಕ್ಷಿಸಿದನು.


ರಾಜನಾದ ದಾರ್ಯಾವೆಷನು ಆಜ್ಞೆಯನ್ನು ಕೊಟ್ಟನು. ಅವರು ದಾನಿಯೇಲನನ್ನು ಸಿಂಹಗಳ ಗುಹೆಯಲ್ಲಿ ಎಸೆದರು. ಅರಸನು ದಾನಿಯೇಲನಿಗೆ, “ನೀನು ಸೇವೆ ಮಾಡುತ್ತಲೇ ಇರುವ ದೇವರು ನಿನ್ನನ್ನು ರಕ್ಷಿಸುವನೆಂದು ನನಗೆ ಗೊತ್ತಿದೆ” ಎಂದನು.


ನಾನು ಈಗ ಸಕಲ ಜನಾಂಗ, ಕುಲ, ಭಾಷೆಗಳ ಜನರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್‌ನೆಗೋ ಇವರ ದೇವರ ವಿರುದ್ಧವಾಗಿ ಮಾತನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ. ಬೇರೆ ಯಾವ ದೇವರೂ ತನ್ನ ಭಕ್ತರನ್ನು ಈ ರೀತಿ ರಕ್ಷಿಸಲಾರನು” ಎಂದು ಹೇಳಿದನು.


ನೀನು ನಮ್ಮನ್ನು ಉರಿಯುವ ಕೊಂಡದಲ್ಲಿ ಎಸೆದರೆ ನಾವು ಆರಾಧಿಸುವ ದೇವರು ನಮ್ಮನ್ನು ರಕ್ಷಿಸಬಲ್ಲನು. ಆತನು ಇಚ್ಛಿಸಿದರೆ ನಮ್ಮನ್ನು ನಿನ್ನ ಕೈಯಿಂದ ಬಿಡಿಸಬಲ್ಲನು.


ಒಂದು ದಿವಸ ಸನ್ಹೇರೀಬನು ತನ್ನ ದೇವರಾದ ನಿಸ್ರೋಕನ ಮಂದಿರದಲ್ಲಿ ಪೂಜಿಸುತ್ತಿರುವಾಗ ಅವನ ಇಬ್ಬರು ಮಕ್ಕಳಾದ ಅದ್ರಮ್ಮೆಲೆಕ್ ಮತ್ತು ಸರೆಚರ್ ಎಂಬವರು ಅವನನ್ನು ಕತ್ತಿಯಿಂದ ಸಂಹರಿಸಿ ಅರರಾಟ್‌ಗೆ ಪಲಾಯನಗೈದರು. ಅನಂತರ ಸನ್ಹೇರೀಬನ ಮಗ ಏಸರ್‌ಹದ್ದೋನನು ಅಶ್ಶೂರದ ಹೊಸ ಅರಸನಾದನು.


ಪ್ರವಾದಿಗಳು ತಾವು ತಂದಿದ್ದ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. ಅವರು ಬಾಳನನ್ನು ಮಧ್ಯಾಹ್ನದವರೆಗೆ ಪ್ರಾರ್ಥಿಸಿದರು. “ಬಾಳನೇ, ದಯವಿಟ್ಟು ನಮಗೆ ಉತ್ತರ ನೀಡು!” ಎಂದು ಅವರು ಪ್ರಾರ್ಥಿಸಿದರು. ಆದರೆ ಯಾವ ಶಬ್ದವೂ ಆಗಲಿಲ್ಲ: ಯಾರೊಬ್ಬರೂ ಉತ್ತರಿಸಲಿಲ್ಲ; ಪ್ರವಾದಿಗಳು ತಾವು ನಿರ್ಮಿಸಿದ್ದ ಯಜ್ಞವೇದಿಕೆಯ ಸುತ್ತಲೂ ನರ್ತಿಸಿದರು. ಆದರೆ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ.


ಇದರಿಂದಾಗಿ ಜನರು ನಮ್ಮ ಕೆಲಸದ ವಿರುದ್ಧ ರೊಚ್ಚಿಗೇಳಬಹುದು. ಅಷ್ಟೇ ಅಲ್ಲ, ಮಹಾದೇವತೆಯಾದ ಅರ್ತೆಮಿಯ ಗುಡಿಯನ್ನು ಜನರು ಕಡೆಗಣಿಸುವ ಸಾಧ್ಯತೆಯೂ ಇದೆ. ಆಗ, ಏಷ್ಯಾದಲ್ಲಿ ಮತ್ತು ಇಡೀ ಪ್ರಪಂಚದಲ್ಲಿ ಪೂಜಿಸಲ್ಪಡುತ್ತಿರುವ ಅರ್ತೆಮಿಯ ದೇವತೆಯ ವೈಭವ ಅಳಿದುಹೋಗುವುದು” ಎಂದನು.


ಪ್ರವಾದಿಗಳು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿದರು. ಅವರು ಖಡ್ಗ ಮತ್ತು ಬರ್ಜಿಗಳಿಂದ ತಮ್ಮನ್ನು ತಾವೇ ತಿವಿದುಕೊಂಡರು. (ಅವರು ಆರಾಧಿಸುವ ರೀತಿಯೇ ಇದು.) ರಕ್ತವು ತಮ್ಮ ದೇಹದ ಮೇಲೆ ಚಿಮ್ಮುವತನಕ ಅವರು ತಮ್ಮನ್ನು ತಾವು ತಿವಿದುಕೊಂಡರು.


ನಿಮ್ಮ ದೇಶವು ಕೈಯಿಂದ ಮಾಡಿದ ವಿಗ್ರಹಗಳಿಂದ ತುಂಬಿದ್ದು ಜನರು ಅವುಗಳನ್ನು ಆರಾಧಿಸುತ್ತಾರೆ.


ಅವನು ಮರವನ್ನು ಕಡಿದು, ತನ್ನನ್ನು ಬೆಚ್ಚಗೆ ಮಾಡಲು ಅಗ್ಗಿಷ್ಟಿಕೆಗಾಗಿ ಉಪಯೋಗಿಸುತ್ತಾನೆ; ಸಣ್ಣಸಣ್ಣ ತುಂಡುಗಳನ್ನಾಗಿ ಮಾಡಿ ಆಹಾರವನ್ನು ಬೇಯಿಸುತ್ತಾನೆ; ತನ್ನನ್ನು ಬೆಚ್ಚಗೆ ಮಾಡಿಕೊಳ್ಳುತ್ತಾನೆ. ರೊಟ್ಟಿಯನ್ನು ಸುಡುತ್ತಾನೆ; ಉಳಿದ ಮರದ ತುಂಡಿನಿಂದ ಒಂದು ವಿಗ್ರಹವನ್ನು ಕೆತ್ತುತ್ತಾನೆ. ಆ ವಿಗ್ರಹಕ್ಕೆ ದೇವರೆಂದು ಹೇಳುತ್ತಾನೆ; ಆ ದೇವರು ಮನುಷ್ಯನು ತಯಾರಿಸಿದ ವಿಗ್ರಹ. ಆದರೆ ಅವನು ಆ ವಿಗ್ರಹದ ಮುಂದೆ ಅಡ್ಡಬೀಳುವನು.


ಮರದ ಅರ್ಧಭಾಗವನ್ನು ಬೆಂಕಿಯಲ್ಲಿ ಉರಿಸುವನು; ಆ ಬೆಂಕಿಯಲ್ಲಿ ಮಾಂಸವನ್ನು ಬೇಯಿಸಿ ಹೊಟ್ಟೆತುಂಬಾ ತಿನ್ನುವನು; ಆ ಮರದ ಸೌದೆಯನ್ನು ಸುಟ್ಟು ಚಳಿಕಾಯಿಸಿಕೊಳ್ಳುವನು. ಆಗ ಅವನು, “ಈಗ ನನಗೆ ಬೆಚ್ಚಗಾಯಿತು. ಬೆಂಕಿಯ ಪ್ರಕಾಶದಲ್ಲಿ ನಾನು ನೋಡಬಲ್ಲೆನು!” ಎಂದು ಹೇಳುವನು.


ಕೆಲವರು ಬೆಳ್ಳಿಬಂಗಾರಗಳಲ್ಲಿ ಐಶ್ವರ್ಯವಂತರಾಗಿದ್ದಾರೆ. ಅವರ ಕೈಚೀಲಗಳಿಂದ ಬಂಗಾರವು ಉದುರುತ್ತವೆ, ಅವರು ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗುತ್ತಾರೆ; ಕುಶಲಕರ್ಮಿಗಳಿಗೆ ಹಣಕೊಟ್ಟು ಮರದಿಂದ ವಿಗ್ರಹವನ್ನು ಮಾಡಿಸಿಕೊಳ್ಳುತ್ತಾರೆ. ಆಮೇಲೆ ಅವರು ಆ ವಿಗ್ರಹಕ್ಕೆ ಅಡ್ಡಬಿದ್ದು ಪೂಜೆ ಮಾಡುತ್ತಾರೆ.


ಈಗ ಇಸ್ರೇಲರು ಹೆಚ್ಚೆಚ್ಚಾಗಿ ಪಾಪ ಮಾಡುತ್ತಿರುತ್ತಾರೆ. ತಮಗಾಗಿ ವಿಗ್ರಹಗಳನ್ನು ಮಾಡಿಕೊಳ್ಳುತ್ತಾರೆ. ಅಕ್ಕಸಾಲಿಗರು ಬೆಳ್ಳಿಯಿಂದ ವಿಗ್ರಹಗಳನ್ನು ಮಾಡುವರು. ತಾವು ಮಾಡಿದ ಮೂರ್ತಿಗಳೊಂದಿಗೆ ಮಾತನಾಡುವರು. ಆ ವಿಗ್ರಹಗಳಿಗೆ ಯಜ್ಞವನ್ನರ್ಪಿಸುವರು. ಬಂಗಾರದ ಬಸವನ ವಿಗ್ರಹಕ್ಕೆ ಮುದ್ದು ಕೊಡುವರು.


ಅವರು ಮರದ ತುಂಡುಗಳೊಡನೆ ಮಾತನಾಡಿ, ‘ನೀನು ನಮ್ಮ ತಂದೆ’ ಎಂದು ಹೇಳುವರು. ಆ ಜನರು ಕಲ್ಲುಬಂಡೆಯೊಂದಿಗೆ ಮಾತನಾಡಿ, ‘ನೀನು ನಮಗೆ ಜನ್ಮಕೊಟ್ಟ ತಾಯಿ’ ಎಂದು ಹೇಳುವರು. ಆ ಜನರೆಲ್ಲರು ನಾಚಿಕೆಪಡುವರು. ಅವರು ನನ್ನ ಕಡೆಗೆ ನೋಡುವದಿಲ್ಲ. ಅವರು ನನಗೆ ವಿಮುಖರಾಗಿದ್ದಾರೆ. ಆದರೆ ಯೆಹೂದದ ಜನರು ಕಷ್ಟದಲ್ಲಿ ಸಿಕ್ಕಿಹಾಕಿಕೊಂಡಾಗ, ‘ಬಾ ನಮ್ಮನ್ನು ರಕ್ಷಿಸು’ ಎಂದು ನನ್ನನ್ನು ಕೇಳುತ್ತಾರೆ.


ನೀನು ಮಾಟಮಂತ್ರಗಳನ್ನು ಇನ್ನು ಮುಂದೆ ಮಾಡದಿರುವೆ. ಭವಿಷ್ಯ ಮತ್ತು ಕಣಿ ಹೇಳುವ ಜನರು ಇನ್ನು ಮುಂದೆ ನಿನ್ನಲ್ಲಿ ಇರುವುದಿಲ್ಲ.


ಆ ಮೂರ್ತಿಗೆ “ಎದ್ದೇಳು” ಎಂದು ಹೇಳುವವನಿಗೆ ಕೇಡಾಗುವುದು! ಮಾತಾಡಲಾಗದ ಒಂದು ಕಲ್ಲಿಗೆ “ಎಚ್ಚರವಾಗು” ಎಂದು ಹೇಳುವವನಿಗೆ ಕೇಡಾಗುವುದು! ಅವುಗಳು ಅವನಿಗೆ ಸಹಾಯ ಮಾಡುವದಿಲ್ಲ. ಮಾಡಲಿಕ್ಕಾಗುವದೂ ಇಲ್ಲ. ಆ ವಿಗ್ರಹಗಳನ್ನು ಬೆಳ್ಳಿಬಂಗಾರದಿಂದ ಹೊದಿಸಿದರೂ ಆ ವಿಗ್ರಹಗಳಲ್ಲಿ ಜೀವವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು