Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:18 - ಪರಿಶುದ್ದ ಬೈಬಲ್‌

18 ಅವರಿಗೆ ತಾವು ಮಾಡುವುದು ಗೊತ್ತಿಲ್ಲ. ಅವರು ಅರ್ಥಮಾಡಿಕೊಳ್ಳುವುದಿಲ್ಲ. ಅವರು ಕಾಣಲಾರದಂತೆ ಅವರ ಕಣ್ಣುಗಳು ಮುಚ್ಚಲ್ಪಟ್ಟಿವೆಯೋ ಎಂಬಂತಿವೆ. ಅವರ ಹೃದಯಗಳು ಅರ್ಥಮಾಡಿಕೊಳ್ಳಲು ಪ್ರಯತ್ನಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು ಏಕೆಂದರೆ ಅವರ ಕಣ್ಣು ಕಾಣದಂತೆಯೂ, ಹೃದಯ ಗ್ರಹಿಸದಂತೆಯೂ ಯೆಹೋವನು ಮುಚ್ಚಿಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇಂಥವರು ಮಂದಮತಿಗಳು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಅವರಿಗೆ ಅಂಟು ಬಳಿಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಯೆಹೋವನು ಅಂಟು ಬಳಿದಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರು ಏನೂ ತಿಳಿಯದವರು ಇಲ್ಲವೆ ಏನೂ ಗ್ರಹಿಸಲಾರದವರು. ಏಕೆಂದರೆ ಆತನು ಅವರ ಕಣ್ಣು ಕಾಣದಂತೆಯೂ, ಹೃದಯಗಳು ಗ್ರಹಿಸದಂತೆಯೂ ಮುಚ್ಚಿಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:18
34 ತಿಳಿವುಗಳ ಹೋಲಿಕೆ  

ಬುದ್ಧಿ ಇಲ್ಲದ ಮೂರ್ಖಜನರೇ, ಈ ಸಂದೇಶವನ್ನು ಕೇಳಿರಿ. ನಿಮಗೆ ಕಣ್ಣುಗಳಿವೆ ಆದರೆ ನೀವು ನೋಡುವದಿಲ್ಲ, ನಿಮಗೆ ಕಿವಿಗಳಿವೆ ಆದರೆ ನೀವು ಕೇಳುವದಿಲ್ಲ.


ಆದ್ದರಿಂದ ತಮ್ಮ ಇಷ್ಟಾನುಸಾರ ಮಾಡಲೆಂದು ಅವರನ್ನು ಬಿಟ್ಟುಕೊಟ್ಟೆ. ಇಸ್ರೇಲ್ ತನ್ನ ಇಷ್ಟಾನುಸಾರ ಮಾಡಿತು.


ನೀವು ಪರಸ್ಪರ ಸನ್ಮಾನವನ್ನು ಬಯಸುತ್ತೀರಿ. ಆದರೆ ಒಬ್ಬನೇ ದೇವರಿಂದ ಬರುವ ಸನ್ಮಾನವನ್ನು ಪಡೆದುಕೊಳ್ಳಲು ನೀವೆಂದೂ ಪ್ರಯತ್ನಿಸುವುದಿಲ್ಲ. ಹೀಗಿರಲು ನೀವು ಹೇಗೆ ನಂಬಬಲ್ಲಿರಿ?


ನಾನು ಹೇಳುವ ಈ ಸಂಗತಿಗಳನ್ನು ನೀವು ಅರ್ಥಮಾಡಿಕೊಳ್ಳುವುದಿಲ್ಲ. ಏಕೆಂದರೆ ನನ್ನ ಉಪದೇಶವನ್ನು ನೀವು ಸ್ವೀಕರಿಸಿಕೊಳ್ಳಲಾರಿರಿ.


ಯೆಹೋವನು ನಿಮಗೆ ತೂಕಡಿಕೆ ಬರಮಾಡುವನು. ಆತನು ನಿಮ್ಮ ಕಣ್ಣುಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ಕಣ್ಣುಗಳಾಗಿದ್ದಾರೆ.) ಯೆಹೋವನು ನಿಮ್ಮ ತಲೆಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ತಲೆಗಳಾಗಿದ್ದಾರೆ.)


ದೇವರ ನಿಜ ಜ್ಞಾನವನ್ನು ಹೊಂದಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ದೇವರು ಅವರನ್ನು ಅವರ ಅಯೋಗ್ಯ ಭಾವಕ್ಕೆ ಒಪ್ಪಿಸಿಕೊಟ್ಟನು. ಆದ್ದರಿಂದ ಅವರು ತಾವು ಮಾಡಬಾರದ ಕೆಲಸಗಳನ್ನು ಮಾಡುತ್ತಾರೆ.


ಅನೇಕ ಜನರು ಶುದ್ಧೀಕರಿಸಲ್ಪಡುವರು; ಅವರು ತಮ್ಮನ್ನು ತಾವು ಶುಭ್ರಗೊಳಿಸಿಕೊಳ್ಳುವರು. ಆದರೆ ದುಷ್ಟರು ದುಷ್ಟರಾಗಿಯೇ ಉಳಿಯುವರು. ಆ ದುಷ್ಟರು ಈ ಸಂಗತಿಗಳನ್ನು ಅರಿತುಕೊಳ್ಳುವದಿಲ್ಲ. ಜ್ಞಾನಿಗಳು ಇವೆಲ್ಲವನ್ನು ಅರಿತುಕೊಳ್ಳುತ್ತಾರೆ.


ಕೆಡುಕರು ನ್ಯಾಯವನ್ನು ಅರ್ಥಮಾಡಿಕೊಳ್ಳಲಾರರು; ಯೆಹೋವನನ್ನು ಪ್ರೀತಿಸುವ ಜನರಾದರೋ ಅದನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವರು.


ಎತ್ತು ತನ್ನ ದಣಿಯನ್ನು ತಿಳಿದದೆ; ಕತ್ತೆಯು ತನ್ನ ದಣಿಯ ಕೊಟ್ಟಿಗೆಯನ್ನು ತಿಳಿದದೆ. ಆದರೆ ಇಸ್ರೇಲರು ನನ್ನನ್ನು ತಿಳಿದೇ ಇಲ್ಲ. ನನ್ನ ಜನರು ನನ್ನನ್ನು ಅರ್ಥಮಾಡಿಕೊಳ್ಳುವುದೇ ಇಲ್ಲ.”


ಜನರು ಬುದ್ಧಿಗೇಡಿಗಳಾಗಿದ್ದಾರೆ. ತಾವು ಕೆತ್ತಿದ ವಿಗ್ರಹಗಳಿಂದ ಅಕ್ಕಸಾಲಿಗರು ಮೋಸಹೋಗುತ್ತಾರೆ. ಆ ವಿಗ್ರಹಗಳು ಕೇವಲ ಸುಳ್ಳಿನ ಕಂತೆಗಳು. ಅವುಗಳಲ್ಲಿ ಜೀವವಿಲ್ಲ.


ಆ ಮನುಷ್ಯನಿಗೆ ತಾನು ಮಾಡುತ್ತಿರುವುದೇ ತಿಳಿಯದು. ಅವನು ಗಲಿಬಿಲಿಗೊಂಡಿದ್ದಾನೆ. ಅವನ ಹೃದಯವು ಅವನನ್ನು ತಪ್ಪುದಾರಿಯಲ್ಲಿ ನಡಿಸುತ್ತದೆ. ಅವನು ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ತಾನು ಮಾಡುತ್ತಿರುವುದು ತಪ್ಪೆಂದು ಅವನು ಕಾಣಲಾರನು. “ನನ್ನ ಕೈಯಲ್ಲಿರುವ ಈ ವಿಗ್ರಹವು ಸುಳ್ಳು ದೇವರಾಗಿದೆ” ಎಂದು ಅವನು ಹೇಳುವದಿಲ್ಲ.


“ಹಿಂದಿನ ಕಾಲದಲ್ಲಿ ದೇವರು ಎಲ್ಲಾ ಜನಾಂಗಗಳನ್ನು ಅವುಗಳ ಇಷ್ಟಕ್ಕನುಸಾರವಾಗಿ ನಡೆಯಲು ಬಿಟ್ಟುಕೊಟ್ಟನು.


“ಬೇರೆ ದೇಶಗಳಿಂದ ಪಾರಾಗಿ ಬಂದ ಜನರೇ, ಒಟ್ಟಾಗಿ ಸೇರಿಕೊಂಡು ನನ್ನ ಮುಂದೆ ಬನ್ನಿರಿ. (ಈ ಜನರು ಮರದ ವಿಗ್ರಹಗಳನ್ನು ಇಟ್ಟುಕೊಂಡಿದ್ದಾರೆ. ತಮ್ಮನ್ನು ರಕ್ಷಿಸಲಾರದ ವಿಗ್ರಹಕ್ಕೆ ಅವರು ಪ್ರಾರ್ಥಿಸುತ್ತಿದ್ದಾರೆ. ಅವರು ಮಾಡುವದು ಅವರಿಗೇ ತಿಳಿಯದು.


ನೀವು ಹಾವುಗಳು! ನೀವು ದುಷ್ಟರು! ಒಳ್ಳೆಯದನ್ನು ನೀವು ಹೇಗೆ ಹೇಳುವಿರಿ? ನಿಮ್ಮ ಹೃದಯದಲ್ಲಿ ತುಂಬಿರುವುದನ್ನೇ ನಿಮ್ಮ ಬಾಯಿ ಮಾತಾಡುತ್ತದೆ.


ಬುದ್ಧಿವಂತ ಮನುಷ್ಯನು ಇವುಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಜಾಣನು ಇದನ್ನು ಕಲಿತುಕೊಳ್ಳುತ್ತಾನೆ. ಯೆಹೋವನ ಮಾರ್ಗವು ಸರಿಯಾದದ್ದು. ಒಳ್ಳೆಯ ಜನರು ಅವರೊಂದಿಗೆ ಜೀವಿಸುವರು. ಪಾಪಿಗಳು ಅವುಗಳಿಂದ ಸಾಯುವರು.


ಬೇರೆ ಜನಾಂಗಗಳ ಎಲ್ಲಾ ಜನರು ಮಂದಬುದ್ಧಿಯವರಾಗಿದ್ದಾರೆ ಮತ್ತು ಮೂರ್ಖರಾಗಿದ್ದಾರೆ; ಅವರ ಉಪದೇಶಗಳು ನಿಷ್ಪ್ರಯೋಜಕವಾದ ಮರದ ಬೊಂಬೆಗಳಿಂದ ಬಂದವುಗಳಾಗಿವೆ.


ಅವರು ಹಸಿದ ನಾಯಿಗಳಂತಿದ್ದಾರೆ. ಅವರು ಎಂದಿಗೂ ತೃಪ್ತಿ ಹೊಂದುವವರಲ್ಲ. ಕುರುಬರಿಗೆ ತಾವು ಮಾಡುವುದೇ ತಿಳಿಯದು. ಅವರು ತಮ್ಮ ಕುರಿಗಳ ಹಾಗೆ ದಾರಿತಪ್ಪಿದ್ದಾರೆ. ಅವರೆಲ್ಲಾ ಅತ್ಯಾಶೆಯುಳ್ಳವರು; ತಮ್ಮನ್ನು ತೃಪ್ತಿಪಡಿಸುವದೇ ಅವರ ಕೆಲಸ.


ನಿನಗೆ ಹೋಲಿಸಿದರೆ, ಜನರು ದಡ್ಡ ಪ್ರಾಣಿಗಳಂತಿದ್ದಾರೆ. ನಾವು ಯಾವುದನ್ನೂ ಅರ್ಥಮಾಡಿಕೊಳ್ಳಲಾಗದ ಮೂಢರಂತಿದ್ದೇವೆ.


ಜನರು ವಿಗ್ರಹಗಳನ್ನು ಮಾಡಿಕೊಳ್ಳುವರು. ಆದರೆ ಅವು ನಿಷ್ಪ್ರಯೋಜಕವಾದ ವಸ್ತುಗಳಾಗಿವೆ. ಜನರು ಆ ವಿಗ್ರಹಗಳನ್ನು ಪ್ರೀತಿಸುತ್ತಾರೆ. ಆದರೆ ಅವುಗಳು ಯಾವ ಪ್ರಯೋಜನಕ್ಕೂ ಬಾರವು. ಆ ಜನರು ಆ ವಿಗ್ರಹದ ಸಾಕ್ಷಿಗಳಾಗಿದ್ದಾರೆ. ಆದರೆ ಅವುಗಳಿಗೆ ದೃಷ್ಟಿ ಇಲ್ಲ. ಅವುಗಳಿಗೆ ಏನೂ ಗೊತ್ತಿಲ್ಲ. ತಮ್ಮ ಕಾರ್ಯಗಳು ನಾಚಿಕೆಗೆಟ್ಟವುಗಳೆಂಬ ತಿಳುವಳಿಕೆಯೂ ಅವರಲ್ಲಿಲ್ಲ.


ಅವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರಾಗಿದ್ದಾರೆ. ಅವರು ದುರ್ಬಲರನ್ನು ಪಾಪವೆಂಬ ಉರುಲಿನಲ್ಲಿ ಬೀಳಿಸುತ್ತಾರೆ. ಅವರು ತಮ್ಮ ಹೃದಯಗಳಿಗೆ ಸ್ವಾರ್ಥವನ್ನೇ ಕಲಿಸಿದ್ದಾರೆ. ಅವರು ಶಾಪಗ್ರಸ್ತರಾಗಿದ್ದಾರೆ.


ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ ಅವರು ಅದನ್ನು ನೋಡುವರು. ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ. ಆಗ ಅವರು ಅವಮಾನ ಹೊಂದುವರು. ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.


“ನಾನು ಆ ಮರದ ತುಂಡುಗಳನ್ನು ಬೆಂಕಿಯಲ್ಲಿ ಉರಿಸಿ ಚಳಿಕಾಯಿಸಿಕೊಂಡೆನು; ಅದರ ಕೆಂಡದಲ್ಲಿ ರೊಟ್ಟಿ ಸುಟ್ಟೆನು; ಮಾಂಸ ಬೇಯಿಸಿದೆನು; ಆ ಮಾಂಸವನ್ನು ತಿಂದೆನು; ಉಳಿದ ಮರದ ತುಂಡಿನಿಂದ ಅಸಹ್ಯವಾದ ಈ ವಿಗ್ರಹವನ್ನು ಮಾಡಿದೆನು; ನಾನು ಮರದ ತುಂಡನ್ನು ಪೂಜಿಸುತ್ತೇನೆ” ಎಂದು ಅವರೆಂದೂ ಯೋಚಿಸುವದಿಲ್ಲ.


ಆದರೆ ಜನರು ಬುದ್ಧಿಹೀನರಾಗಿ ದೇವರ ಕಾರ್ಯವನ್ನು ತಿಳಿಯದವರಾಗಿದ್ದಾರೆ. ಕುಶಲಕೆಲಸಗಾರರು ಸುಳ್ಳುದೇವರುಗಳ ಪ್ರತಿಮೆಗಳನ್ನು ಮಾಡುತ್ತಾರೆ. ಆ ಪ್ರತಿಮೆಗಳು ಕೇವಲ ಸುಳ್ಳುದೇವರುಗಳೇ. ಆ ಕೆಲಸಗಾರರು ಎಷ್ಟು ಮೂರ್ಖರೆಂಬುದನ್ನು ಅವು ತೋರಿಸುತ್ತವೆ. ಆ ಪ್ರತಿಮೆಗಳು ಜೀವಂತವಾಗಿರುವದಿಲ್ಲ.


ದ್ರಾಕ್ಷಿಬಳ್ಳಿ ಒಣಗಿಹೋಗುವದು. ಅದರ ಕೊಂಬೆಗಳು ಮುರಿದುಬೀಳುವವು. ಹೆಂಗಸರು ಆ ಕೊಂಬೆಗಳನ್ನು ಸೌದೆಯಾಗಿ ಉಪಯೋಗಿಸುವರು. ಜನರು ತಿಳಿದುಕೊಳ್ಳುವದಕ್ಕೆ ಮನಸ್ಸು ಕೊಡುವದಿಲ್ಲ. ಆದ್ದರಿಂದ ಅವರ ನಿರ್ಮಾಣಿಕನಾದ ದೇವರು ಅವರನ್ನು ಸಂತೈಸುವದಿಲ್ಲ. ಅವರ ನಿರ್ಮಾಣಿಕನು ಅವರಿಗೆ ದಯೆ ತೋರುವದಿಲ್ಲ.


“ನರಪುತ್ರನೇ, ನೀನು ದಂಗೆಕೋರರ ಮಧ್ಯೆ ವಾಸಿಸುತ್ತೀ. ಅವರಿಗೆ ಕಣ್ಣಿದ್ದರೂ ನೋಡುವದಿಲ್ಲ; ಅವರಿಗೆ ಕಿವಿಗಳಿದ್ದರೂ ಕೇಳುವದಿಲ್ಲ; ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು