Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:19 - ಪರಿಶುದ್ದ ಬೈಬಲ್‌

19 “ನಾನು ಆ ಮರದ ತುಂಡುಗಳನ್ನು ಬೆಂಕಿಯಲ್ಲಿ ಉರಿಸಿ ಚಳಿಕಾಯಿಸಿಕೊಂಡೆನು; ಅದರ ಕೆಂಡದಲ್ಲಿ ರೊಟ್ಟಿ ಸುಟ್ಟೆನು; ಮಾಂಸ ಬೇಯಿಸಿದೆನು; ಆ ಮಾಂಸವನ್ನು ತಿಂದೆನು; ಉಳಿದ ಮರದ ತುಂಡಿನಿಂದ ಅಸಹ್ಯವಾದ ಈ ವಿಗ್ರಹವನ್ನು ಮಾಡಿದೆನು; ನಾನು ಮರದ ತುಂಡನ್ನು ಪೂಜಿಸುತ್ತೇನೆ” ಎಂದು ಅವರೆಂದೂ ಯೋಚಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿ ಮಾಡಿ ಮಾಂಸವನ್ನು ಸುಟ್ಟು ತಿಂದೆನಲ್ಲಾ, ಉಳಿದ ಭಾಗದಿಂದ ಅಸಹ್ಯವಾದ ವಿಗ್ರಹವನ್ನು ನಾನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆ ತಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದ್ದೇನೆ. ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ, ಮಾಂಸ ಸುಟ್ಟು ತಿಂದಿದ್ದೇನೆ; ಮಿಕ್ಕಿದ್ದರಿಂದ ವಿಗ್ರಹಮಾಡುವುದು ಸರಿಯೇ? ಆ ಮರದ ತುಂಡಿಗೆ ಅಡ್ಡಬೀಳುವುದು ಅಸಹ್ಯವಲ್ಲವೆ?” ಎಂದುಕೊಳ್ಳುವಷ್ಟು ವಿವೇಕ ಯಾರಿಗೂ ಇಲ್ಲ; ಯಾರೂ ಇದನ್ನು ಮನಸ್ಸಿನಲ್ಲಿ ಅರ್ಥೈಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು, ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸ ಸುಟ್ಟು ತಿಂದೆನಲ್ಲಾ; ವಿುಕ್ಕದ್ದನ್ನು ನಾನು ಬೊಂಬೆ ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ, ಅಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆ ತಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ, ಮಾಂಸವನ್ನು ಸುಟ್ಟು ತಿಂದೆನಲ್ಲಾ. ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿನಲ್ಲಿ ಅರ್ಥೈಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:19
16 ತಿಳಿವುಗಳ ಹೋಲಿಕೆ  

“‘ಸುಳ್ಳುದೇವರನ್ನು ಮಾಡಿ ಗುಪ್ತ ಸ್ಥಳದಲ್ಲಿಡುವವನು ಶಾಪಗ್ರಸ್ತನಾಗಲಿ; ಆ ದೇವರುಗಳು ಮನುಷ್ಯನ ಕೈಕೆಲಸವೇ; ಕಲ್ಲು, ಮರ, ಹಿತ್ತಾಳೆಗಳಿಂದ ಮಾಡಿದವುಗಳೇ. ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.’ “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


ಸೊಲೊಮೋನನು ಕೆಮೋಷನನ್ನು ಆರಾಧಿಸಲು ಒಂದು ಸ್ಥಳವನ್ನು ನಿರ್ಮಿಸಿದನು. ಮೋವಾಬ್ಯರ ಭಯಂಕರ ವಿಗ್ರಹವೇ ಕೆಮೋಷ್. ಜೆರುಸಲೇಮಿನ ಪಕ್ಕದಲ್ಲಿದ್ದ ಬೆಟ್ಟದ ಮೇಲೆ ಸೊಲೊಮೋನನು ಆರಾಧನೆಯ ಸ್ಥಳವನ್ನು ನಿರ್ಮಿಸಿದನು. ಆ ಬೆಟ್ಟದ ಮೇಲೆಯೇ ಸೊಲೊಮೋನನು ಮೋಲೆಕ್ ದೇವತೆಯ ಪೂಜಾಸ್ಥಳವನ್ನು ನಿರ್ಮಿಸಿದನು. ಅಮ್ಮೋನಿಯರ ಭಯಂಕರ ವಿಗ್ರಹವೇ ಮೋಲೆಕ್.


ಸೊಲೊಮೋನನು ಅಷ್ಟೋರೆತ್ ದೇವತೆಯನ್ನು ಪೂಜಿಸಿದನು. ಇದು ಚೀದೋನ್ಯರ ದೇವತೆ. ಸೊಲೊಮೋನನು ಮಿಲ್ಕೋಮನನ್ನು ಆರಾಧಿಸಿದನು. ಇದು ಅಮ್ಮೋನಿಯರ ಭಯಂಕರ ವಿಗ್ರಹ.


ನಾನು ಅವರ ದುಷ್ಟತ್ವವನ್ನು ನೆನಪಿನಲ್ಲಿಟ್ಟಿರುತ್ತೇನೆಂಬುದನ್ನು ಅವರು ನಂಬುವದಿಲ್ಲ. ಅವರು ಮಾಡಿದ ದುಷ್ಟತನವು ಸುತ್ತಲೂ ಕಾಣಿಸುವದು. ನಾನು ಅವರ ಪಾಪಗಳನ್ನು ಸ್ಪಷ್ಟವಾಗಿ ನೋಡುತ್ತೇನೆ.


ಆಗ ಅವನು ಹೀಗೆ ಹೇಳಿದನು, “ನರಪುತ್ರನೇ, ನೀನು ನಿನ್ನ ಕಣ್ಣು, ಕಿವಿಗಳನ್ನು ಉಪಯೋಗಿಸು, ಇವೆಲ್ಲವನ್ನೂ ಗಮನಿಸಿ ನನ್ನ ಮಾತುಗಳನ್ನು ಕೇಳು. ನಾನು ತೋರಿಸುವ ಪ್ರತಿಯೊಂದು ವಸ್ತುಗಳ ಮೇಲೆ ಚೆನ್ನಾಗಿ ಲಕ್ಷ್ಯವಿಡು. ಯಾಕೆಂದರೆ ಈ ವಿಷಯಗಳನ್ನು ನಿನಗೆ ತೋರಿಸಬೇಕೆಂದೇ ನಿನ್ನನ್ನು ಇಲ್ಲಿಗೆ ತಂದಿರುವೆ. ನೀನು ನೋಡಿದ್ದೆಲ್ಲವನ್ನೂ ಇಸ್ರೇಲ್ ವಂಶದವರಿಗೆ ತಿಳಿಸಬೇಕು.”


“ಬೇರೆ ದೇಶಗಳಿಂದ ಪಾರಾಗಿ ಬಂದ ಜನರೇ, ಒಟ್ಟಾಗಿ ಸೇರಿಕೊಂಡು ನನ್ನ ಮುಂದೆ ಬನ್ನಿರಿ. (ಈ ಜನರು ಮರದ ವಿಗ್ರಹಗಳನ್ನು ಇಟ್ಟುಕೊಂಡಿದ್ದಾರೆ. ತಮ್ಮನ್ನು ರಕ್ಷಿಸಲಾರದ ವಿಗ್ರಹಕ್ಕೆ ಅವರು ಪ್ರಾರ್ಥಿಸುತ್ತಿದ್ದಾರೆ. ಅವರು ಮಾಡುವದು ಅವರಿಗೇ ತಿಳಿಯದು.


ಯೆಹೋವನು ಹೇಳುವುದೇನೆಂದರೆ: “ನನ್ನ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು. ಯಾಕೆಂದರೆ ಅವರು ನಿಜವಾಗಿಯೂ ನನ್ನನ್ನು ಅರಿತಿಲ್ಲ. ಇಸ್ರೇಲಿನಲ್ಲಿ ವಾಸಿಸುವ ಕೆಲವು ಜನರು ಈಗ ಪ್ರಮುಖರಾಗಿದ್ದಾರೆ. ತಮ್ಮ ಸುಖಜೀವಿತದಲ್ಲಿ ಆನಂದಿಸುತ್ತಾರೆ. ಆದರೆ ಆ ಗಣ್ಯವ್ಯಕ್ತಿಗಳೆಲ್ಲಾ ಬಾಯಾರಿಕೆಯಿಂದಲೂ ಹಸಿವೆಯಿಂದಲೂ ನರಳುವರು.


ಪೂರ್ವಕಾಲದಲ್ಲಿ, ರಾಜನಾದ ಸೊಲೊಮೋನನು ಜೆರುಸಲೇಮಿನ ಬಳಿಯಲ್ಲಿದ್ದ ವಿಘ್ನಪರ್ವತದ ಮೇಲೆ ಕೆಲವು ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆ ಉನ್ನತಸ್ಥಳಗಳು ಪರ್ವತದ ದಕ್ಷಿಣದಿಕ್ಕಿನ ಮೇಲಿದ್ದವು. ರಾಜನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಆ ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆದರೆ ರಾಜನಾದ ಯೋಷೀಯನು ಆ ಪೂಜಾಸ್ಥಳಗಳನ್ನೆಲ್ಲಾ ನಾಶಪಡಿಸಿದನು.


ಹೀಗೆ ಹೇಳಿದನು: “ನಾನು ಈ ದಿನ ಹೇಳಿದ ಎಲ್ಲಾ ಆಜ್ಞೆಗಳನ್ನು ಅನುಸರಿಸಲು ಜಾಗರೂಕರಾಗಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ ತಿಳಿಸಿ; ಕಟ್ಟಳೆಗಳನ್ನು ಸಂಪೂರ್ಣವಾಗಿ ಕೈಗೊಳ್ಳುವಂತೆ ಅವರಿಗೆ ಬೋಧಿಸಿರಿ, ಕಲಿಸಿರಿ.


ಫರೋಹನು ತನ್ನ ಮನೆಗೆ ಹೊರಟುಹೋದನು. ಮೋಶೆ ಆರೋನರು ಮಾಡಿದ ಮಹತ್ಕಾರ್ಯಗಳನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ‘ಏನು ನಡೆಯುತ್ತಿದೆಂಬುದರ ಬಗ್ಗೆ ಯೋಚಿಸಿರಿ.


“ನೀವು ಪಾಪಮಾಡಿದ್ದೀರಿ. ನೀವು ಈ ವಿಚಾರವಾಗಿ ಮತ್ತೆ ಆಲೋಚಿಸಬೇಕು. ಈ ವಿಚಾರವನ್ನು ನಿಮ್ಮ ನೆನಪಿಗೆ ತಂದುಕೊಂಡು ಬಲಶಾಲಿಗಳಾಗಿರಿ.


ರಾಜನಾದ ಯೋಷೀಯನು ಎಲ್ಲಾ ಸ್ಮಾರಕಕಲ್ಲುಗಳನ್ನು ಮತ್ತು ಅಶೇರಸ್ತಂಭಗಳನ್ನು ಒಡೆದು ಹಾಕಿಸಿದನು. ಆಮೇಲೆ ಅವನು ಆ ಸ್ಥಳದ ಮೇಲೆ ಸತ್ತವರ ಎಲುಬುಗಳನ್ನು ಹರಡಿದನು.


ಅವರಿಗೆ ತಾವು ಮಾಡುವುದು ಗೊತ್ತಿಲ್ಲ. ಅವರು ಅರ್ಥಮಾಡಿಕೊಳ್ಳುವುದಿಲ್ಲ. ಅವರು ಕಾಣಲಾರದಂತೆ ಅವರ ಕಣ್ಣುಗಳು ಮುಚ್ಚಲ್ಪಟ್ಟಿವೆಯೋ ಎಂಬಂತಿವೆ. ಅವರ ಹೃದಯಗಳು ಅರ್ಥಮಾಡಿಕೊಳ್ಳಲು ಪ್ರಯತ್ನಿಸುವುದಿಲ್ಲ.


ಕೆಲವರು ಒಂದು ಕಡೆಯಲ್ಲಿ ಹೋರಿಯನ್ನು ಯಜ್ಞಮಾಡುವರು. ಇನ್ನೊಂದು ಕಡೆಯಲ್ಲಿ ಜನರಿಗೆ ಹಿಂಸೆ ಕೊಡುವರು. ಅವರು ಬಲಿಯರ್ಪಿಸಲು ಕುರಿಗಳನ್ನು ಕೊಯ್ಯುವರು, ಅದೇ ಸಮಯದಲ್ಲಿ ನಾಯಿಗಳ ಕುತ್ತಿಗೆಗಳನ್ನು ಮುರಿಯುವರು. ಅವರು ನನಗೆ ಹಂದಿಗಳ ರಕ್ತವನ್ನು ಅರ್ಪಿಸುವರು. ನನಗೆ ಧೂಪವನ್ನು ಹಾಕಲು ಯಾವಾಗಲೂ ತಯಾರಿರುವರು. ಅದೇ ಸಮಯದಲ್ಲಿ ಅಯೋಗ್ಯವಾದ ತಮ್ಮ ವಿಗ್ರಹಗಳನ್ನು ಪ್ರೀತಿಸುವರು. ಅವರು ನನ್ನ ಮಾರ್ಗವನ್ನು ಅನುಸರಿಸದೆ ತಮ್ಮ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಅವರು ತಮ್ಮ ಭಯಂಕರವಾದ ವಿಗ್ರಹಗಳನ್ನು ಪೂಜಿಸುತ್ತಾರೆ.


ನನ್ನ ಜನರು ಮರದ ತುಂಡುಗಳಿಂದ ಸಲಹೆಗಳನ್ನು ಕೇಳುವರು. ಆ ಮರದ ತುಂಡುಗಳು ಅವರಿಗೆ ಉತ್ತರಿಸುವವು ಎಂದು ಅವರು ನೆನಸುತ್ತಾರೆ. ಯಾಕೆಂದರೆ, ವೇಶ್ಯೆಯರಂತೆ ಅವರು ಆ ಸುಳ್ಳು ದೇವರುಗಳನ್ನು ಹಿಂದಟ್ಟಿಕೊಂಡು ಹೋಗುವರು. ಅವರು ತಮ್ಮ ದೇವರುಗಳನ್ನು ಬಿಟ್ಟು ವೇಶ್ಯೆಯರಂತೆ ವರ್ತಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು