Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:2 - ಪರಿಶುದ್ದ ಬೈಬಲ್‌

2 ಯೆಹೋವನಾದ ನಾನೇ ನಿನ್ನನ್ನು ನಿರ್ಮಿಸಿದಾತನು. ನೀನು ತಾಯಿಯ ಗರ್ಭದಲ್ಲಿರುವಾಗಲೇ ನಾನು ನಿನಗೆ ಸಹಾಯ ಮಾಡಿದೆನು. ಯಾಕೋಬೇ, ನನ್ನ ಸೇವಕನೇ, ಹೆದರದಿರು. ಯೆಶುರೂನೇ (ಇಸ್ರೇಲೇ), ನಾನು ನಿನ್ನನ್ನು ಆರಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನನ್ನು ನಿರ್ಮಾಣಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಿನ್ನನ್ನು ಸೃಷ್ಟಿಸಿದ ಸರ್ವೇಶ್ವರ ನಾನೆ ತಾಯ ಗರ್ಭದಿಂದ ನಿನ್ನನ್ನು ರೂಪಿಸಿದವನು ನಾನೆ ಅಂದಿನಿಂದ ನಿನಗೆ ನೆರವಾಗುತ್ತಾ ಬಂದವನು ನಾನೆ. ಭಯಪಡಬೇಡ, ನನ್ನ ದಾಸ ಯಕೋಬನೇ, ಅಂಜಬೇಡ, ನಾನು ಆರಿಸಿಕೊಂಡ ಯೆಶುರೂನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನ್ನನ್ನು ನಿರ್ಮಾಣಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ - ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿನ್ನ ನಿರ್ಮಾಣ ಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು, ನಿನಗೆ ಸಹಾಯ ಮಾಡುವವರಾದ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಸೇವಕನಾದ ಯಾಕೋಬೇ, ನಾನು ಆಯ್ದುಕೊಂಡ ಯೆಶುರೂನೇ, ಭಯಪಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:2
29 ತಿಳಿವುಗಳ ಹೋಲಿಕೆ  

“ನಾನು ನಿನ್ನನ್ನು ನಿನ್ನ ತಾಯಿಯ ಗರ್ಭದಲ್ಲಿ ರೂಪಿಸುವ ಮುಂಚೆಯೇ ನಿನ್ನನ್ನು ಬಲ್ಲವನಾಗಿದ್ದೆನು. ನೀನು ಹುಟ್ಟುವದಕ್ಕಿಂತ ಮುಂಚೆಯೇ ನಾನು ನಿನ್ನನ್ನು ಒಂದು ವಿಶೇಷವಾದ ಕೆಲಸಕ್ಕೆ ಅಂದರೆ ಜನಾಂಗಗಳಿಗೆ ಪ್ರವಾದಿಯನ್ನಾಗಿ ಆರಿಸಿಕೊಂಡಿದ್ದೆನು.”


ಯಾಕೋಬೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಇಸ್ರೇಲೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಈಗ ಆತನು ಹೇಳುವುದೇನೆಂದರೆ: “ಭಯಪಡಬೇಡ. ನಾನೇ ನಿನ್ನನ್ನು ರಕ್ಷಿಸಿದ್ದೇನೆ. ನಾನು ನಿನಗೆ ಹೆಸರಿಟ್ಟೆನು. ನೀನು ನನ್ನವನೇ.


ಯೆಹೋವನು ನಿನ್ನನ್ನು ರೂಪಿಸಿದನು. ನೀನು ನಿನ್ನ ತಾಯಿಯ ಗರ್ಭದಲ್ಲಿರುವಾಗಲೇ ಆತನು ನಿನ್ನನ್ನು ರೂಪಿಸಿದನು. ಆತನು ಹೇಳುವುದೇನೆಂದರೆ, “ಯೆಹೋವನಾದ ನಾನು ಸಮಸ್ತವನ್ನೂ ಸೃಷ್ಟಿಸಿದೆನು. ಆಕಾಶಮಂಡಲವನ್ನು ಅದರ ಸ್ಥಳದಲ್ಲಿ ಇಟ್ಟೆನು; ಭೂಮಿಯನ್ನು ನನ್ನ ಮುಂದೆ ಹರಡಿದೆನು.”


ನನ್ನ ಹೆಸರನ್ನು ಹೊಂದಿರುವ ನನ್ನ ಜನರನ್ನೆಲ್ಲಾ ನನ್ನ ಬಳಿಗೆ ಕರೆದುಕೊಂಡು ಬಾ. ನನಗಾಗಿಯೇ ನಿರ್ಮಿಸಿದ ನನ್ನ ಜನರನ್ನು ನನ್ನ ಬಳಿಗೆ ಕರೆದುಕೊಂಡು ಬಾ. ಅವರನ್ನು ನಿರ್ಮಿಸಿದಾತನು ನಾನೇ, ಅವರು ನನ್ನವರೇ!


ದೂರದೇಶದಲ್ಲಿರುವ ಜನರೇ, ನನ್ನ ಮಾತುಗಳಿಗೆ ಕಿವಿಗೊಡಿರಿ; ಭೂಮಿಯ ಮೇಲೆ ವಾಸಿಸುವ ಜನರೇ, ನನ್ನ ಮಾತುಗಳನ್ನು ಕೇಳಿರಿ. ನಾನು ಹುಟ್ಟುವ ಮೊದಲೇ ಯೆಹೋವನು ನನ್ನನ್ನು ತನ್ನ ಸೇವೆಗಾಗಿ ಕರೆದನು. ನಾನು ತಾಯಿಯ ಗರ್ಭದಲ್ಲಿರುವಾಗಲೇ ಯೆಹೋವನು ನನ್ನ ಹೆಸರೆತ್ತಿ ಕರೆದನು.


ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡನು. ತನ್ನ ಸನ್ನಿಧಿಯಲ್ಲಿ ನಾವು ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂಬುದು ಆತನ ಉದ್ದೇಶವಾಗಿತ್ತು.


ನಾನೇ ನಿನ್ನ ಸಂಗಡವಿದ್ದೇನೆ. ಆದ್ದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದ್ದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ನೀತಿಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು.


ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂಬ ತನ್ನ ಯೋಜನೆಗನುಸಾರವಾಗಿ ದೇವರು ಅವರನ್ನು ಕರೆದು, ನೀತಿವಂತರನ್ನಾಗಿ ಮಾಡಿ, ಅವರಿಗೆ ತನ್ನ ಮಹಿಮೆಯನ್ನು ಕೊಟ್ಟನು.


ನಾನು ಹುಟ್ಟಿದಂದಿನಿಂದಲೂ ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ. ನಾನು ಜನಿಸಿದಂದಿನಿಂದಲೂ ನೀನೇ ನನಗೆ ಆಧಾರವಾಗಿರುವೆ. ನಾನು ನಿನ್ನನ್ನು ಕೊಂಡಾಡುತ್ತಲೇ ಇರುವೆನು.


ನಾನು ನಿರ್ಮಿಸಿದ ಈ ಜನರು ನನಗೆ ಸ್ತೋತ್ರಗಾನ ಹಾಡುವರು.


ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಪ್ರೀತಿಸುತ್ತಾನೆ. ಆತನು ನಿಮ್ಮನ್ನು ತನ್ನವರನ್ನಾಗಿ ಆರಿಸಿಕೊಂಡಿದ್ದಾನೆಂಬುದೂ ನಮಗೆ ತಿಳಿದಿದೆ.


“ಚಿಕ್ಕ ಮಂದೆಯೇ, ಹೆದರಬೇಡ, ನಿಮಗೆ ರಾಜ್ಯವನ್ನು ಕೊಡಲು ನಿಮ್ಮ ತಂದೆ ಬಯಸಿದ್ದಾನೆ.


ಆದ್ದರಿಂದ ದೇವರ ಕೃಪಾಸಿಂಹಾಸನದ ಬಳಿಗೆ ಸಂಕೋಚಪಡದೆ ಬರೋಣ. ಕೊರತೆಯಲ್ಲಿರುವಾಗ ನಮಗೆ ಬೇಕಾದ ಸಹಾಯಕ್ಕಾಗಿ ಕೃಪೆಯನ್ನೂ ಕರುಣೆಯನ್ನೂ ಅಲ್ಲಿ ಹೊಂದಿಕೊಳ್ಳುವೆವು.


“ಯಾಕೋಬೇ, ಈ ವಿಷಯಗಳನ್ನು ನೆನಪಿನಲ್ಲಿಟ್ಟುಕೊ! ಇಸ್ರೇಲೇ, ನೀನು ನನ್ನ ಸೇವಕನೆಂಬುದನ್ನು ನೆನಪಿನಲ್ಲಿಟ್ಟುಕೊ! ನಾನೇ ನಿನ್ನನ್ನು ನಿರ್ಮಿಸಿದೆನು; ನೀನೇ ನನ್ನ ಸೇವಕನು. ಆದ್ದರಿಂದ ಇಸ್ರೇಲೇ, ನನ್ನನ್ನು ಮರೆತುಬಿಡಬೇಡ.


ದೇವರು ಆ ಪಟ್ಟಣದಲ್ಲಿದ್ದಾನೆ, ಆದ್ದರಿಂದ ಅದೆಂದಿಗೂ ನಾಶವಾಗುವುದಿಲ್ಲ. ಸೂರ್ಯೋದಯಕ್ಕಿಂತ ಮೊದಲೇ ದೇವರು ಅದರ ಸಹಾಯಕ್ಕಾಗಿ ಬರುವನು.


“ಆದ್ದರಿಂದ ಭಯಪಡಬೇಡ, ನಾನೇ ನಿನ್ನೊಂದಿಗಿದ್ದೇನೆ. ನಾನು ನಿನ್ನ ಮಕ್ಕಳನ್ನು ಒಟ್ಟುಗೂಡಿಸಿ ನಿನ್ನ ಬಳಿಗೆ ಕರೆತರುವೆನು. ನಾನು ಪೂರ್ವಪಶ್ಚಿಮ ದಿಕ್ಕುಗಳಿಂದ ಅವರನ್ನು ಒಟ್ಟುಗೂಡಿಸುವೆನು.


ನನಗೆ ಅಮೂಲ್ಯವಾದ ಯಾಕೋಬೇ, ಭಯಪಡಬೇಡ. ನನ್ನ ಪ್ರಿಯ ಇಸ್ರೇಲೇ, ಹೆದರಬೇಡ. ನಾನು ನಿಜವಾಗಿಯೂ ನಿನಗೆ ಸಹಾಯ ಮಾಡುತ್ತೇನೆ.” ಇದು ಯೆಹೋವನ ನುಡಿ. “ಇಸ್ರೇಲರ ಪರಿಶುದ್ಧನೂ ನಿನ್ನನ್ನು ರಕ್ಷಿಸುವಾತನೂ ಈ ಮಾತುಗಳನ್ನು ಹೇಳಿದ್ದಾನೆ:


ಆಗ ಇಸ್ರೇಲಿನ ಜನರು ತಮ್ಮ ನಾಯಕರೊಂದಿಗೆ ಒಟ್ಟಾಗಿ ಸೇರಿದರು. ಯೆಹೋವನು ತಾನೇ ಯೆಶುರೂನಿನಲ್ಲಿ ಅರಸನಾದನು.


“ಆದರೆ ಯೆಶುರೂನು ಕೊಬ್ಬಿದನು; ಕೊಬ್ಬಿದ ಹೋರಿಯಂತೆ ಒದ್ದನು; ಅವನು ಚೆನ್ನಾಗಿ ತಿಂದು ಕೊಬ್ಬಿ ಊದಿಕೊಂಡನು; ತನ್ನ ನಿರ್ಮಾಣಿಕನಾದ ಯೆಹೋವನನ್ನು ತೊರೆದನು; ತನ್ನನ್ನು ಸಂರಕ್ಷಿಸಿದ ಬಂಡೆಯಿಂದ ಓಡಿಹೋದನು;


“ಯೆಶುರೂನೇ, ನಮ್ಮ ದೇವರ ಹಾಗೆ ಬೇರೆ ದೇವರುಗಳಿಲ್ಲ. ಆತನು ಮೋಡಗಳ ಮೇಲೆ ಮಹಿಮಾರೂಢನಾಗಿ ಸವಾರಿ ಮಾಡುತ್ತಾ ಆಕಾಶದಿಂದ ನಿಮ್ಮ ಸಹಾಯಕ್ಕೆ ಬರುವನು.


ದ್ರಾಕ್ಷಿಬಳ್ಳಿ ಒಣಗಿಹೋಗುವದು. ಅದರ ಕೊಂಬೆಗಳು ಮುರಿದುಬೀಳುವವು. ಹೆಂಗಸರು ಆ ಕೊಂಬೆಗಳನ್ನು ಸೌದೆಯಾಗಿ ಉಪಯೋಗಿಸುವರು. ಜನರು ತಿಳಿದುಕೊಳ್ಳುವದಕ್ಕೆ ಮನಸ್ಸು ಕೊಡುವದಿಲ್ಲ. ಆದ್ದರಿಂದ ಅವರ ನಿರ್ಮಾಣಿಕನಾದ ದೇವರು ಅವರನ್ನು ಸಂತೈಸುವದಿಲ್ಲ. ಅವರ ನಿರ್ಮಾಣಿಕನು ಅವರಿಗೆ ದಯೆ ತೋರುವದಿಲ್ಲ.


ಯೆಹೋವನು ಹೀಗೆನ್ನುತ್ತಾನೆ, “ಇಸ್ರೇಲೇ, ನೀನು ನನ್ನ ಸೇವಕನಾಗಿರುವೆ. ಯಾಕೋಬೇ, ನಾನು ನಿನ್ನನ್ನು ಆರಿಸಿಕೊಂಡೆನು. ನೀನು ನನ್ನ ಸ್ನೇಹಿತನಾದ ಅಬ್ರಹಾಮನ ಕುಟುಂಬದವನಾಗಿರುವೆ.


ದೇವರಾದ ಯೆಹೋವನು ಇಸ್ರೇಲರ ಪರಿಶುದ್ಧನಾಗಿದ್ದಾನೆ. ಆತನು ಇಸ್ರೇಲನ್ನು ಸೃಷ್ಟಿಸಿದನು. ಯೆಹೋವನು ಹೇಳುವುದೇನೆಂದರೆ, “ನಾನು ಕೈಯಾರೆ ಮಾಡಿದ ಮಕ್ಕಳ ಬಗ್ಗೆ ನೀನು ಪ್ರಶ್ನಿಸುವಿಯಾ? ನಾನು ಏನು ಮಾಡಬೇಕೆಂದು ನೀನು ನನಗೆ ಆಜ್ಞಾಪಿಸುವಿಯೋ?


ನಾನು ಯೆಹೋವನ ಸೇವಕನಾಗಿರಬೇಕೆಂದು ಆತನು ನನ್ನನ್ನು ನನ್ನ ತಾಯಿಯ ಗರ್ಭದಲ್ಲಿಯೇ ರೂಪಿಸಿದನು. ಇಸ್ರೇಲರನ್ನೂ ಯಾಕೋಬನನ್ನೂ ಆತನ ಬಳಿಗೆ ಮತ್ತೆ ಕರೆದುಕೊಂಡು ಬರಲು ಆತನು ನನ್ನನ್ನು ರೂಪಿಸಿದನು. ಯೆಹೋವನು ನನ್ನನ್ನು ಸನ್ಮಾನಿಸುವನು. ನಾನು ಆತನಿಂದ ಬಲವನ್ನು ಹೊಂದುವೆನು.


ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.


ಬನ್ನಿರಿ, ಆತನಿಗೆ ಅಡ್ಡಬಿದ್ದು ಆರಾಧಿಸೋಣ. ನಮ್ಮನ್ನು ಸೃಷ್ಟಿಸಿದ ಯೆಹೋವನನ್ನು ಕೊಂಡಾಡೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು