ಯೆಶಾಯ 44:22 - ಪರಿಶುದ್ದ ಬೈಬಲ್22 ನಿನ್ನ ಪಾಪಗಳು ದೊಡ್ಡ ಮೋಡದಂತಿವೆ. ಆದರೆ ನಾನು ಅವುಗಳನ್ನು ಅಳಿಸಿಬಿಟ್ಟಿದ್ದೇನೆ. ನಿನ್ನ ಪಾಪಗಳನ್ನು ಗಾಳಿಯಲ್ಲಿ ಹಾರಿಹೋದ ಮೋಡದಂತೆ ಹಾರಿಸಿಬಿಟ್ಟಿದ್ದೇನೆ. ನಾನು ನಿನ್ನನ್ನು ರಕ್ಷಿಸಿದೆನು. ಆದ್ದರಿಂದ ನನ್ನ ಬಳಿಗೆ ಹಿಂತಿರುಗಿ ಬಾ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನಿನ್ನ ದ್ರೋಹಗಳನ್ನು ಮೋಡದಂತೆ ನಿವಾರಿಸಿದ್ದೇನೆ. ನಿನ್ನ ಪಾಪಗಳನ್ನು ಮಂಜಿನಂತೆ ಕರಗಿಸಿದ್ದೇನೆ, ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಪರಿಹರಿಸಿದೆ ನಿನ್ನ ದ್ರೋಹಗಳನ್ನು ಮಂಜಿನಂತೆ ಚದರಿಸಿದ್ದೇನೆ ನಿನ್ನ ಪಾಪಗಳನು ಮೋಡದಂತೆ ವಿಮೋಚಿಸಿದ್ದೇನೆ ನೀ ನನಗೆ ಅಭಿಮುಖನಾಗಬೇಕೆಂದೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನಿನ್ನ ದ್ರೋಹಗಳನ್ನು ಮಂಜಿನಂತೆ ಪರಿಹರಿಸಿದ್ದೇನೆ, ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನಾನು ನಿನ್ನ ದ್ರೋಹಗಳನ್ನು ಮೋಡದಂತೆ ಅಳಿಸಿಬಿಟ್ಟಿದ್ದೇನೆ. ನಿನ್ನ ಪಾಪಗಳನ್ನು ಮುಂಜಾನೆಯ ಮಂಜಿನಂತೆ ಹಾರಿಸಿದ್ದೇನೆ. ನನ್ನ ಕಡೆಗೆ ತಿರುಗಿಕೋ. ಏಕೆಂದರೆ ನಾನು ನಿನ್ನನ್ನು ವಿಮೋಚಿಸಿದ್ದೇನೆ.” ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.