ಯೆಶಾಯ 44:25 - ಪರಿಶುದ್ದ ಬೈಬಲ್25 ಸುಳ್ಳುಪ್ರವಾದಿಗಳು ಸುಳ್ಳನ್ನೇ ಹೇಳುತ್ತಾರೆ. ಅವರು ಹೇಳಿದ್ದೆಲ್ಲವೂ ಸುಳ್ಳು ಎಂದು ಯೆಹೋವನು ತೋರಿಸಿಕೊಡುತ್ತಾನೆ. ಮಂತ್ರಗಾರರನ್ನು ದೇವರು ಮೂರ್ಖರನ್ನಾಗಿ ಮಾಡುತ್ತಾನೆ. ಆತನು ಜ್ಞಾನಿಗಳನ್ನು ಗಲಿಬಿಲಿಗೊಳಿಸುತ್ತಾನೆ. ಅವರು ತಮಗೆ ಎಲ್ಲವೂ ಗೊತ್ತಿದೆ ಎಂದು ತಿಳಿದುಕೊಳ್ಳುತ್ತಾರೆ. ಆದರೆ ದೇವರು ಅವರನ್ನು ಮೂಢರನ್ನಾಗಿ ಮಾಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ, ಕಣಿಹೇಳುವವರನ್ನು ಮರುಳುಗೊಳಿಸಿ, ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳಿವಳಿಕೆಯನ್ನು ಹುಚ್ಚುತನವಾಗ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಸುಳ್ಳುಶಕುನ ಹೇಳುವವರನು ನಿರರ್ಥಕಗೊಳಿಸುವವನು ನಾನೆ ಕಣಿ ಹೇಳುವವರನು ಮರುಳುಗೊಳಿಸುವವನು ನಾನೆ ವಿವೇಕಿಗಳೊಡನೆ ವಾದಿಸಿ ಅವರ ವಿವೇಕವೇ ಅವಿವೇಕವೆಂದು ತೋರಿಸಿದವನು ನಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ ಕಣಿಹೇಳುವವರನ್ನು ಮರುಳುಗೊಳಿಸಿ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಹುಚ್ಚುತನವಾಗಮಾಡಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಸುಳ್ಳುಗಾರರ ಗುರುತುಗಳನ್ನು ನಿರರ್ಥಕ ಮಾಡುವವನೂ ಮತ್ತು ಕಣಿ ಹೇಳುವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ, ಅವರ ತಿಳುವಳಿಕೆಯನ್ನು ಬುದ್ಧಿಹೀನವಾಗ ಮಾಡುವವನೂ ಅಧ್ಯಾಯವನ್ನು ನೋಡಿ |
ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”
ಜನರು ಭವಿಷ್ಯವನ್ನು ತಿಳಿಯುವುದಕ್ಕೆ ತಮ್ಮ ಸಣ್ಣ ಬೊಂಬೆಗಳನ್ನೋ ಮಂತ್ರಜಾಲವನ್ನೋ ಉಪಯೋಗಿಸುವರು. ಆದರೆ ಅವೆಲ್ಲಾ ನಿಷ್ಪ್ರಯೋಜಕ. ಆ ಜನರು ದರ್ಶನವನ್ನು ನೋಡುವರು ಮತ್ತು ಕನಸುಗಳ ಬಗ್ಗೆ ಹೇಳುವರು. ಆದರೆ ಅವುಗಳೆಲ್ಲಾ ನಿಷ್ಪ್ರಯೋಜಕ ಸುಳ್ಳುಗಳಾಗಿವೆ. ಆದ್ದರಿಂದ ಜನರು ಸಹಾಯಕ್ಕಾಗಿ ಕೂಗುತ್ತಾ ಅತ್ತಿಂದಿತ್ತ ತಿರುಗಾಡುವ ಕುರಿಗಳಂತಿದ್ದಾರೆ. ಅವುಗಳನ್ನು ನಡಿಸಲು ಕುರುಬರೇ ಇಲ್ಲ.