ಯೆಶಾಯ 44:28 - ಪರಿಶುದ್ದ ಬೈಬಲ್28 ಸೈರಸನಿಗೆ ಯೆಹೋವನು ಹೀಗೆನ್ನುತ್ತಾನೆ, “ನೀನೇ ನನ್ನ ಕುರುಬನು. ನಾನು ಬಯಸುವ ಕಾರ್ಯಗಳನ್ನು ನೀನು ಮಾಡುವೆ. ನೀನು ಜೆರುಸಲೇಮಿಗೆ, ‘ನೀನು ಕಟ್ಟಲ್ಪಡುವೆ’ ಎಂದೂ ದೇವಾಲಯಕ್ಕೆ ‘ನಿನ್ನ ಅಸ್ತಿವಾರವು ಮತ್ತೆ ಹಾಕಲ್ಪಡುವದು’ ಎಂದೂ ಹೇಳುವೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಕೋರೆಷನ ವಿಷಯವಾಗಿ, ‘ಅವನು ನನ್ನ ಮಂದೆಯನ್ನು ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ’ ಎಂದು ಹೇಳಿ, ‘ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು’” ಎಂಬುದಾಗಿ ಮಾತನಾಡುವವನು ನಾನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಕೋರೆಷನಿಗೆ ಇಂತೆನ್ನುವೆನು ನಾನು : ನನ್ನ ಮಂದೆ ಕಾಯುವವನು ನೀನು ನನ್ನ ಇಷ್ಟಾರ್ಥವನು ನೆರವೇರಿಸುವವನು ನೀನು; 'ಪುನಃ ನಿರ್ಮಾಣವಾಗುವೆ' ಎನ್ನುವೆ ಜೆರುಸಲೇಮಿಗೆ, ನೀನು; ‘ಪುನಃ ನಿನಗೆ ಅಸ್ತಿವಾರ ಹಾಕಿಸುವೆ’ ಎನ್ನುವೆ ಆ ದೇವಾಲಯಕೆ ನೀನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಮತ್ತು ಕೋರೆಷನ ವಿಷಯವಾಗಿ - ಅವನು ನನ್ನ ಮಂದೆ ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ ಎಂದು ಹೇಳಿ ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು ಎಂಬದಾಗಿ ಮಾತಾಡುವವನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಕೋರೆಷನ ವಿಷಯವಾಗಿ ಹೀಗೆ ಹೇಳುವೆನು, ‘ನನ್ನ ಕುರುಬನು, ನನ್ನ ಇಷ್ಟವನ್ನೆಲ್ಲಾ ಪೂರೈಸುವವನು, ಯೆರೂಸಲೇಮಿಗೆ, “ನೀನು ಪುನಃ ನಿರ್ಮಾಣವಾಗುವೆ,” ದೇವಾಲಯಕ್ಕೆ, “ನಿನಗೆ ಅಸ್ತಿವಾರವು ಹಾಕಲಾಗುವುದು,” ಎಂದು ಅನ್ನುವವನೂ ನಾನೇ.’ ಅಧ್ಯಾಯವನ್ನು ನೋಡಿ |
ನಾನು ಸೈರಸನಿಗೆ ಸುಕಾರ್ಯಗಳನ್ನು ಮಾಡಲು ಶಕ್ತಿಯನ್ನು ಕೊಟ್ಟಿದ್ದೇನೆ. ಅವನ ಕೆಲಸಗಳನ್ನೆಲ್ಲಾ ಸುಲಭಗೊಳಿಸುತ್ತೇನೆ. ಸೈರಸನು ನನ್ನ ಪಟ್ಟಣವನ್ನು ಮತ್ತೆ ಕಟ್ಟುವನು; ನನ್ನ ಜನರಿಗೆ ಸ್ವಾತಂತ್ರ್ಯವನ್ನು ಕೊಡುವನು. ನನ್ನ ಜನರನ್ನು ಸೈರಸನು ನನಗೆ ಮಾರಿಬಿಡುವದಿಲ್ಲ. ಈ ಕಾರ್ಯಗಳನ್ನೆಲ್ಲ ಮಾಡುವದಕ್ಕೆ ನಾನು ಅವನಿಗೆ ಹಣ ಕೊಡುವ ಅವಶ್ಯವಿಲ್ಲ. ಜನರು ಸ್ವತಂತ್ರರಾಗುವರು. ಇದಕ್ಕಾಗಿ ನನಗೇನೂ ಖರ್ಚು ಇಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ನಿನ್ನನ್ನು ನೋಡುತ್ತಿದ್ದ ಆ ಯೆಹೂದ್ಯರಿಗೆ ಹೀಗೆ ಹೇಳು: ‘ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಇಲ್ಲಿಗೆ ಕರೆಸುತ್ತೇನೆ. ಅವನು ನನ್ನ ಸೇವಕನಾಗಿದ್ದಾನೆ. ನಾನು ಈ ಸ್ಥಳದಲ್ಲಿ ಹೂಳಿದ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಸ್ಥಾಪಿಸುತ್ತೇನೆ. ನೆಬೂಕದ್ನೆಚ್ಚರನು ಈ ಕಲ್ಲುಗಳ ಮೇಲೆ ತನ್ನ ಗುಡಾರವನ್ನು ಹಾಕುವನು.
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.