ಯೆಶಾಯ 44:5 - ಪರಿಶುದ್ದ ಬೈಬಲ್5 “ಒಬ್ಬನು: ‘ನಾನು ಯೆಹೋವನಿಗೆ ಸೇರಿದವನು’ ಎಂದು ಹೇಳುತ್ತಾನೆ. ಇನ್ನೊಬ್ಬನು ಯಾಕೋಬನ ಹೆಸರನ್ನು ಬಳಸುವನು. ಮತ್ತೊಬ್ಬನು, ‘ನಾನು ಯೆಹೋವನವನು’ ಎಂದು ಸಹಿ ಹಾಕುವನು. ಮತ್ತೊಬ್ಬನು, ನಾನು ‘ಇಸ್ರೇಲನು’ ಎಂಬ ಹೆಸರನ್ನು ಬಳಸಿಕೊಳ್ಳುವನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 (ಅನ್ಯಜನರಲ್ಲಿ) ಒಬ್ಬನು, ‘ನಾನು ಯೆಹೋವನ ಭಕ್ತನು’ ಎಂದು ಹೇಳಿಕೊಳ್ಳುವನು. ಇನ್ನೊಬ್ಬನು, ‘ನಾನು ಯಾಕೋಬ್ಯನ ಹೆಸರಿನವನು’ ಮತ್ತೊಬ್ಬನು ತನ್ನ ಕೈಯ ಮೇಲೆ, ‘ದಾಸನು’ ಎಂದು ಬರೆದುಕೊಂಡು ಇಸ್ರಾಯೇಲ್ ಎಂಬ ಬಿರುದನ್ನು ಧರಿಸಿಕೊಳ್ಳುವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹೇಳಿಕೊಳ್ಳುವನೊಬ್ಬನು ತಾನು ಸರ್ವೇಶ್ವರನ ಶರಣನೆಂದು ಹೆಸರಿಸಿಕೊಳ್ಳುವನು ಇನ್ನೊಬ್ಬನು ತಾನು ಯಕೋಬ್ಯನೆಂದು ಕೈಯಲ್ಲಿ ಹಚ್ಚೆ ಹೊಯ್ದುಕೊಳ್ಳುವನು ಮತ್ತೊಬ್ಬನು ಸರ್ವೇಶ್ವರನ ದಾಸನೆಂದು ಬಿರುದನ್ನು ಧರಿಸಿಕೊಳ್ಳುವನವನು ತಾನು ಇಸ್ರಯೇಲ್ಯನೆಂದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 [ಅನ್ಯಜನರಲ್ಲಿ] ಒಬ್ಬನು - ನಾನು ಯೆಹೋವನ ಭಕ್ತನು ಎಂದು ಹೇಳಿಕೊಳ್ಳುವನು; ಇನ್ನೊಬ್ಬನು ಯಾಕೋಬ್ಯನು ಎನಿಸಿಕೊಳ್ಳುವನು; ಮತ್ತೊಬ್ಬನು ತನ್ನ ಕೈಯ ಮೇಲೆ ಯೆಹೋವದಾಸನು ಎಂದು ಬರೆದುಕೊಂಡು ಇಸ್ರಾಯೇಲ್ಯನೆಂಬ ಬಿರುದನ್ನು ಧರಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಒಬ್ಬನು, ‘ನಾನು ಯೆಹೋವನವನು,’ ಅನ್ನುವನು, ಇನ್ನೊಬ್ಬನು ನಾನು, ‘ಯಾಕೋಬನ ಹೆಸರಿನವನು,’ ಎಂದು ಹೇಳಿಕೊಳ್ಳುವನು. ಮತ್ತೊಬ್ಬನು ತನ್ನ ಕೈಯ ಮೇಲೆ, ‘ಯೆಹೋವ ದೇವರಿಗೆ ಸ್ವಂತ,’ ಎಂದು ಬರೆಯಿಸಿಕೊಂಡು, ತನ್ನಷ್ಟಕ್ಕೆ ತಾನೇ ಇಸ್ರಾಯೇಲಿನ ಅಡ್ಡಹೆಸರನ್ನು ಇಟ್ಟುಕೊಳ್ಳುವನು. ಅಧ್ಯಾಯವನ್ನು ನೋಡಿ |
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”
ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.