ಯೆಶಾಯ 44:7 - ಪರಿಶುದ್ದ ಬೈಬಲ್7 ನನ್ನಂತಹ ಬೇರೆ ದೇವರುಗಳಿಲ್ಲ. ಬೇರೆ ದೇವರುಗಳು ಇದ್ದರೆ ಅವು ಈಗ ಮಾತನಾಡಲಿ. ಆ ದೇವರುಗಳು ಬಂದು ತಾವು ನನ್ನಂತಿರುವುದಾಗಿ ರುಜುವಾತು ಮಾಡಲಿ. ಎಂದೆಂದಿಗೂ ಇರುವ ಈ ಜನರನ್ನು ನಾನು ಸೃಷ್ಟಿಸಿದಂದಿನಿಂದ ಏನಾಯಿತೆಂಬುದನ್ನು ನನಗೆ ತಿಳಿಸಬೇಕು. ಆ ದೇವರು ಮುಂದೆ ಸಂಭವಿಸಲಿಕ್ಕಿರುವ ವಿಷಯಗಳನ್ನು ತಿಳಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾನು ಪುರಾತನ ಕಾಲದವರನ್ನು ಸೃಷ್ಟಿಸಿದಂದಿನಿಂದ ನನ್ನ ಹಾಗೆ ಯಾರು ಪ್ರಕಟಿಸಿಕೊಂಡಿದ್ದಾರೆ? ಅಂಥವರಿದ್ದರೆ ನನ್ನೆದುರಿಗೆ ಹೇಳಿ ಸ್ಥಾಪಿಸಲಿ. ಇಲ್ಲವೆ ಮುಂದಿನವುಗಳನ್ನು ಈಗ ತಿಳಿಸಲಿ, ಭವಿಷ್ಯತ್ತುಗಳನ್ನು ಹೇಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನನಗೆ ಸಮಾನರು ಯಾರು? ರುಜುಪಡಿಸಲಿ, ನನ್ನ ಎದುರಿಗೆ ಬಂದು ವಾದಿಸಿ ಸ್ಥಿರಪಡಿಸಲಿ. ನರ ಸೃಷ್ಟಿಯಾದಂದಿನಿಂದ ನಡೆದುದೆಲ್ಲವನು ತಿಳಿಸಲಿ ಮುಂದಿನವುಗಳನು, ಭವಿಷ್ಯತ್ತುಗಳನು, ಈಗ ಊಹಿಸಿ ಹೇಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾನು ಪುರಾತನದವರನ್ನು ಸೃಷ್ಟಿಸಿದಂದಿನಿಂದ ನನ್ನ ಹಾಗೆ ಯಾರು ಪ್ರಕಟಿಸಿಕೊಂಡಿದ್ದಾರೆ? ಅಂಥವರಿದ್ದರೆ ನನ್ನೆದುರಿಗೆ ಹೇಳಿ ಸ್ಥಾಪಿಸಲಿ; ಇಲ್ಲವೆ ಮುಂದಿನವುಗಳನ್ನು ಈಗ ತಿಳಿಸಲಿ, ಭವಿಷ್ಯತ್ತುಗಳನ್ನು ಹೇಳಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾನು ಪುರಾತನ ಕಾಲದವರನ್ನು ಸೃಷ್ಟಿಸಿದಂದಿನಿಂದ ನನ್ನ ಹಾಗೆ ಕರೆದು, ತಿಳಿಸಿ, ಅದನ್ನು ಸರಿಯಾಗಿ ನನಗೋಸ್ಕರ ಸಿದ್ಧಮಾಡಿದವನು ಯಾರು? ಮುಂದೆ ಬರಬೇಕಾದದ್ದನ್ನು ಅವರು ನನಗೆ ತಿಳಿಸಲಿ. ಅಧ್ಯಾಯವನ್ನು ನೋಡಿ |
ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ!