ಯೆಶಾಯ 44:8 - ಪರಿಶುದ್ದ ಬೈಬಲ್8 “ನೀವು ಭಯಪಡಬೇಡಿ, ಚಿಂತಿಸಬೇಡಿ. ನಾನು ಭವಿಷ್ಯದ ಸಂಭವಗಳನ್ನು ಯಾವಾಗಲೂ ನಿಮಗೆ ತಿಳಿಸುತ್ತಾ ಬಂದಿದ್ದೇನೆ. ನೀವೇ ನನ್ನ ಸಾಕ್ಷಿಗಳು. ನನ್ನ ಹೊರತು ಬೇರೆ ದೇವರುಗಳಿಲ್ಲ. ನನ್ನ ಹೊರತು ಬೇರೆ ಯಾವ ‘ಬಂಡೆ’ಯೂ ಇಲ್ಲ. ನಾನೊಬ್ಬನೇ!” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹೆದರಬೇಡಿರಿ, ಭಯಪಡಬೇಡಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಹೆದರಬೇಡಿ, ಅಂಜದಿರಿ, ನನ್ನ ಜನರೇ, ನನಗೆ ಸಾಕ್ಷಿಗಳು ನೀವೇ; ಪೂರ್ವಕಾಲದಿಂದ ನಡೆದವುಗಳನು ನಾ ನಿಮಗೆ ಮುಂತಿಳಿಸಿ ಶ್ರುತಪಡಿಸಿಲ್ಲವೆ? ನನ್ನ ಹೊರತು ಬೇರೆ ದೇವನಿರುವನೆ? ನನ್ನ ಹೊರತು ಬೇರೆ ಸೇನಾಧೀಶ್ವರನಿರುವನೆ? ಅಂಥವನಾರೋ ನಾನರಿಯೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹೆದರಬೇಡಿರಿ, ಅಂಜದಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಹೆದರಬೇಡ, ಇಲ್ಲವೆ ಭಯಪಡಬೇಡ! ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ ಮತ್ತು ಅದನ್ನು ಪ್ರಕಟಿಸಲಿಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಇಲ್ಲ, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.” ಅಧ್ಯಾಯವನ್ನು ನೋಡಿ |
ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.
ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.
“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.