ಯೆಶಾಯ 45:1 - ಪರಿಶುದ್ದ ಬೈಬಲ್1 ತಾನು ಆರಿಸಿರುವ ಅರಸನಾದ ಸೈರಸನಿಗೆ ಯೆಹೋವನು ಹೇಳುವುದೇನೆಂದರೆ: “ನಾನು ಸೈರಸನ ಬಲಗೈಯನ್ನು ಹಿಡಿಯುವೆನು. ಅರಸರುಗಳಿಂದ ಅವರ ಅಧಿಕಾರವನ್ನು ತೆಗೆದುಬಿಡುವಂತೆ ಅವನಿಗೆ ಸಹಾಯ ಮಾಡುವೆನು. ನಗರದ್ವಾರಗಳು ಅವನ ಮುನ್ನುಗ್ಗುವಿಕೆಯನ್ನು ನಿಲ್ಲಿಸದು. ನಗರದ್ವಾರವನ್ನು ತೆರೆದು ಸೈರಸನು ಒಳಗೆ ಪ್ರವೇಶಿಸುವಂತೆ ಮಾಡುವೆನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಯಾರ ಕೈಹಿಡಿದು, ಯಾರ ಎದುರಿಗೆ ಜನಾಂಗಗಳನ್ನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಯಾರ ಮುಂದೆ ಹೆಬ್ಬಾಗಿಲುಗಳನ್ನು ತೆರೆದು, ಮುಚ್ಚಲ್ಲಿಲ್ಲವೋ, ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇಂತೆಂದರು ಸರ್ವೇಶ್ವರ ತಾನು ಅಭಿಷೇಕಿಸಿದ ಕೋರೆಷನಿಗೆ “ರಾಷ್ಟ್ರಗಳನ್ನು ನೀ ಸದೆಬಡಿಯುವಂತೆ ರಾಜಮಹಾರಾಜರನು ನಿಶ್ಯಸ್ತ್ರರನ್ನಾಗಿ ಮಾಡುವಂತೆ ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯುವಂತೆ ನಾ ನಿನ್ನ ಕೈಹಿಡಿದು ನಡೆಸುವೆನು ಮುಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಯಾವನ ಕೈಹಿಡಿದು ಯಾವನೆದುರಿಗೆ ಜನಾಂಗಗಳನ್ನು ತುಳಿದು ರಾಜರ ನಡುಕಟ್ಟನ್ನು ಬಿಚ್ಚಿ ಯಾವನ ಮುಂದೆ ಬಾಗಿಲುಹೆಬ್ಬಾಗಿಲುಗಳನ್ನು ತೆರೆದು ಮುಚ್ಚಲೀಸನೋ ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಯೆಹೋವ ದೇವರು ತಾವೇ ಅಭಿಷೇಕಿಸಿದ ಕೋರೆಷನಿಗೆ ಹೇಳುವುದೇನೆಂದರೆ: ರಾಷ್ಟ್ರಗಳನ್ನು ನೀನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯಲು ನಾನು ನಿನ್ನ ಬಲಗೈಯನ್ನು ಹಿಡಿದು ನಡೆಸುವೆನು. ಅಧ್ಯಾಯವನ್ನು ನೋಡಿ |
ನಿಮ್ಮ ಬಾಣಗಳನ್ನು ಮಸೆಯಿರಿ. ನಿಮ್ಮ ಕವಚಗಳನ್ನು ಧರಿಸಿರಿ. ಯೆಹೋವನು ಮೇದ್ಯರ ರಾಜರನ್ನು ಪ್ರಚೋದಿಸಿದ್ದಾನೆ. ಬಾಬಿಲೋನನ್ನು ನಾಶಪಡಿಸಬೇಕೆಂಬ ಉದ್ದೇಶದಿಂದ ಆತನು ಅವರನ್ನು ಪ್ರಚೋದಿಸಿದ್ದಾನೆ. ಯೆಹೋವನು ಬಾಬಿಲೋನಿನ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಾನೆ. ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿದ್ದ ಯೆಹೋವನ ಪವಿತ್ರ ಆಲಯವನ್ನು ನಾಶಮಾಡಿತು. ಆದ್ದರಿಂದ ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುವನು.
ನಿನ್ನನ್ನು ನೋಡುತ್ತಿದ್ದ ಆ ಯೆಹೂದ್ಯರಿಗೆ ಹೀಗೆ ಹೇಳು: ‘ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಇಲ್ಲಿಗೆ ಕರೆಸುತ್ತೇನೆ. ಅವನು ನನ್ನ ಸೇವಕನಾಗಿದ್ದಾನೆ. ನಾನು ಈ ಸ್ಥಳದಲ್ಲಿ ಹೂಳಿದ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಸ್ಥಾಪಿಸುತ್ತೇನೆ. ನೆಬೂಕದ್ನೆಚ್ಚರನು ಈ ಕಲ್ಲುಗಳ ಮೇಲೆ ತನ್ನ ಗುಡಾರವನ್ನು ಹಾಕುವನು.
ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಬಾಬಿಲೋನಿನ ಅಗಲವಾದ ಮತ್ತು ಸುಭದ್ರವಾದ ಗೋಡೆಯನ್ನು ಬೀಳಿಸಲಾಗುವುದು. ಅದರ ಎತ್ತರವಾದ ಬಾಗಿಲುಗಳನ್ನು ಸುಟ್ಟುಹಾಕಲಾಗುವುದು. ಬಾಬಿಲೋನಿನ ಜನರು ನಗರವನ್ನು ರಕ್ಷಿಸಲು ಬಹಳ ಕಷ್ಟಪಡುವರು. ಆದರೆ ಅದು ನಿಷ್ಪ್ರಯೋಜಕವಾಗುವುದು. ನಗರವನ್ನು ರಕ್ಷಿಸುವ ಪ್ರಯತ್ನದಲ್ಲಿ ಅವರು ತುಂಬಾ ಶ್ರಮವಹಿಸುವರು. ಆದರೆ ಅವರು ಕೇವಲ ಅಗ್ನಿಗೆ ಆಹುತಿಯಾಗುವರು.”