ಯೆಶಾಯ 45:10 - ಪರಿಶುದ್ದ ಬೈಬಲ್10 ತಂದೆಯು ಮಕ್ಕಳನ್ನು ಹುಟ್ಟಿಸುತ್ತಾನೆ. ಮಕ್ಕಳು ತಂದೆಯನ್ನು, ‘ನನಗೆ ಜೀವ ಯಾಕೆ ಕೊಟ್ಟೆ?’ ಎಂದು ಕೇಳಲಾಗುವುದಿಲ್ಲ. ಮಕ್ಕಳು ತಮ್ಮ ತಾಯಿಗೆ, ‘ನನ್ನನ್ನು ಯಾಕೆ ಹೆತ್ತದ್ದು ಎಂದು ಕೇಳಲಾಗುವುದಿಲ್ಲ.’” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ‘ನೀನು ಹುಟ್ಟಿಸುವುದೇನು’ ಎಂದು ತಂದೆಯನ್ನು ಕೇಳುವವನ ಪಾಡು ಪಾಡೇ! ‘ನೀನು ಹೆರುವುದೇನು’ ಎಂದು ಸ್ತ್ರೀಯನ್ನು ಕೇಳುವವನ ಗತಿ ಗತಿಯೇ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ‘ನೀನು ಹುಟ್ಟಿಸುವುದೇನು’ ಎಂದು ತಂದೆಯನು ಕೇಳುವವನಿಗೆ ಧಿಕ್ಕಾರ ! ‘ನೀನು ಹೆರುವುದೇನು’ ಎಂದು ತಾಯಿಯನು ಕೇಳುವವನಿಗೆ ಧಿಕ್ಕಾರ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀನು ಹುಟ್ಟಿಸುವದೇನು ಎಂದು ತಂದೆಯನ್ನು ಕೇಳುವವನ ಪಾಡು ಪಾಡೇ! ನೀನು ಹೆರುವದೇನು ಎಂದು ಹೆಂಗಸನ್ನು ಕೇಳುವವನ ಗತಿ ಗತಿಯೇ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀನು ಹುಟ್ಟಿಸಿದ್ದು ಏಕೆ? ಎಂದು ತನ್ನ ತಂದೆಯನ್ನು ಕೇಳುವವನಿಗೂ, ‘ನೀನು ಹಡೆದದ್ದು ಏಕೆ?’ ಎಂದು ತಾಯಿಗೆ ಕೇಳುವವನಿಗೂ ಶಾಪ! ಅಧ್ಯಾಯವನ್ನು ನೋಡಿ |
ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.
“ಈ ಜನರನ್ನು ನೋಡು. ತಮ್ಮನ್ನು ಸೃಷ್ಟಿದಾತನೊಂದಿಗೆ ವಾದಿಸುತ್ತಿದ್ದಾರೆ. ನನ್ನೊಂದಿಗೆ ವಾದಿಸುವದನ್ನು ನೋಡಿರಿ! ಅವರು ಒಡೆಯಲ್ಪಟ್ಟ ಮಣ್ಣಿನ ಮಡಿಕೆಯ ತುಂಡುಗಳಂತಿದ್ದಾರೆ. ಒಬ್ಬನು ಮೃದುವಾದ ಜೇಡಿಮಣ್ಣಿನಿಂದ ಮಡಿಕೆಯನ್ನು ಮಾಡುತ್ತಾನೆ. ಆ ಮಡಿಕೆಯು ಕುಂಬಾರನಿಗೆ, ‘ನೀನು ಮಾಡುತ್ತಿರುವುದೇನು?’ ಎಂದು ಪ್ರಶ್ನಿಸುವದಿಲ್ಲ. ತಯಾರಿಸಲ್ಪಟ್ಟ ವಸ್ತುಗಳಿಗೆ ತಯಾರಿಸಿದವನನ್ನು ಪ್ರಶ್ನಿಸುವ ಅಧಿಕಾರವಿಲ್ಲ. ಜನರು ಈ ಜೇಡಿಮಣ್ಣಿನಂತೆ ಇದ್ದಾರೆ.