ಯೆಶಾಯ 45:11 - ಪರಿಶುದ್ದ ಬೈಬಲ್11 ದೇವರಾದ ಯೆಹೋವನು ಇಸ್ರೇಲರ ಪರಿಶುದ್ಧನಾಗಿದ್ದಾನೆ. ಆತನು ಇಸ್ರೇಲನ್ನು ಸೃಷ್ಟಿಸಿದನು. ಯೆಹೋವನು ಹೇಳುವುದೇನೆಂದರೆ, “ನಾನು ಕೈಯಾರೆ ಮಾಡಿದ ಮಕ್ಕಳ ಬಗ್ಗೆ ನೀನು ಪ್ರಶ್ನಿಸುವಿಯಾ? ನಾನು ಏನು ಮಾಡಬೇಕೆಂದು ನೀನು ನನಗೆ ಆಜ್ಞಾಪಿಸುವಿಯೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದರೂ ಇಸ್ರಾಯೇಲರ ಸದಮಲಸ್ವಾಮಿಯೂ, ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ, ‘ಭವಿಷ್ಯತ್ತಿನ ವಿಷಯವಾಗಿ ನನ್ನನ್ನು ವಿಚಾರಿಸಿರಿ. ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸರ್ವೇಶ್ವರ ಇಸ್ರಯೇಲಿನ ಪರಮಪಾವನ ಸ್ವಾಮಿ, ಅದರ ಸೃಷ್ಟಿಕರ್ತ. ಆ ಸರ್ವೇಶ್ವರನ ನುಡಿಯಿದು : “ನನ್ನ ಮಕ್ಕಳ ಬಗ್ಗೆ ನೀ ಕೇಳುವುದೆಂತು? ನನ್ನ ಕೈಯ ಕೃತಿಗಳ ಬಗ್ಗೆ ನೀ ವಿಧಿಸುವುದೆಂತು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 [ಆದರೂ] ಇಸ್ರಾಯೇಲ್ಯರ ಸದಮಲಸ್ವಾವಿುಯೂ ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ - ಭವಿಷ್ಯತ್ತುಗಳ ವಿಷಯವಾಗಿ ನನ್ನನ್ನು ವಿಚಾರಿಸಿರಿ, ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ಇಸ್ರಾಯೇಲಿನ ಪರಿಶುದ್ಧನೂ, ಅದನ್ನು ರೂಪಿಸಿದವನೂ ಆಗಿರುವ ಯೆಹೋವ ದೇವರು, ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ, ನನ್ನ ಕೈಕೆಲಸದ ವಿಷಯವಾಗಿಯೂ ನೀವು ನನಗೆ ಆಜ್ಞಾಪಿಸುವುದೇನು? ಅಧ್ಯಾಯವನ್ನು ನೋಡಿ |
ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”