Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:13 - ಪರಿಶುದ್ದ ಬೈಬಲ್‌

13 ನಾನು ಸೈರಸನಿಗೆ ಸುಕಾರ್ಯಗಳನ್ನು ಮಾಡಲು ಶಕ್ತಿಯನ್ನು ಕೊಟ್ಟಿದ್ದೇನೆ. ಅವನ ಕೆಲಸಗಳನ್ನೆಲ್ಲಾ ಸುಲಭಗೊಳಿಸುತ್ತೇನೆ. ಸೈರಸನು ನನ್ನ ಪಟ್ಟಣವನ್ನು ಮತ್ತೆ ಕಟ್ಟುವನು; ನನ್ನ ಜನರಿಗೆ ಸ್ವಾತಂತ್ರ್ಯವನ್ನು ಕೊಡುವನು. ನನ್ನ ಜನರನ್ನು ಸೈರಸನು ನನಗೆ ಮಾರಿಬಿಡುವದಿಲ್ಲ. ಈ ಕಾರ್ಯಗಳನ್ನೆಲ್ಲ ಮಾಡುವದಕ್ಕೆ ನಾನು ಅವನಿಗೆ ಹಣ ಕೊಡುವ ಅವಶ್ಯವಿಲ್ಲ. ಜನರು ಸ್ವತಂತ್ರರಾಗುವರು. ಇದಕ್ಕಾಗಿ ನನಗೇನೂ ಖರ್ಚು ಇಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಕೋರೆಷನನ್ನು ಧರ್ಮೋದ್ದೇಶದಿಂದ ಉನ್ನತಿಗೆ ತಂದು ನೇಮಿಸಿದ್ದೇನೆ. ಅವನ ಮಾರ್ಗಗಳನ್ನೆಲ್ಲಾ ಸರಾಗಮಾಡುವೆನು. ಅವನು ನನ್ನ ಪಟ್ಟಣವನ್ನು ತಿರುಗಿ ಕಟ್ಟಿ ಕ್ರಯವನ್ನಾಗಲೀ, ಬಹುಮಾನವನ್ನಾಗಲೀ ಕೇಳಿಕೊಳ್ಳದೆ ಸೆರೆಯಾದ ನನ್ನ ಜನರನ್ನು ಬಿಡುಗಡೆ ಮಾಡುವೆನು’” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಧರ್ಮಸಾಧನೆಗಾಗಿ ಕೋರೆಷನನ್ನು ಉದಯಗೊಳಿಸಿರುವೆನು ಅವನ ಮಾರ್ಗಗಳನ್ನು ನಾನೇ ಸರಾಗಮಾಡುವೆನು ನನ್ನ ನಗರವನು ಪುನರ್ ನಿರ್ಮಾಣಮಾಡುವನು ಅವನು ಸೆರೆಯಾದ ನನ್ನ ಜನರನು ಬಿಡುಗಡೆ ಮಾಡುವನು ಸಂಬಳವನ್ನಾಗಲಿ ಸಂಭಾವನೆಯನ್ನಾಗಲಿ ಸ್ವೀಕರಿಸನು. ಇದ ನುಡಿದಿರುವೆನು ಸೇನಾಧೀಶ್ವರ ಸರ್ವೇಶ್ವರನಾದ ನಾನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಕೋರೆಷನನ್ನು ಧರ್ಮೋದ್ದೇಶದಿಂದ ಉನ್ನತಿಗೆ ತಂದು ನೇವಿುಸಿದ್ದೇನೆ, ಅವನ ಮಾರ್ಗಗಳನ್ನೆಲ್ಲಾ ಸರಾಗಮಾಡುವೆನು; ಅವನು ನನ್ನ ಪಟ್ಟಣವನ್ನು ತಿರಿಗಿ ಕಟ್ಟಿ ಕ್ರಯವನ್ನಾಗಲಿ ಬಹುಮಾನವನ್ನಾಗಲಿ ಕೇಳಿಕೊಳ್ಳದೆ ಸೆರೆಯಾದ ನನ್ನ ಜನರನ್ನು ಬಿಡುಗಡೆ ಮಾಡುವನು ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನೇ, ಅವನನ್ನು ನೀತಿಯಲ್ಲಿ ಎಬ್ಬಿಸಿದ್ದೇನೆ. ಅವನ ಮಾರ್ಗಗಳನ್ನು ಸರಾಗ ಮಾಡುತ್ತೇನೆ. ಅವನು ನನ್ನ ಪಟ್ಟಣವನ್ನು ಕಟ್ಟಿ, ಕ್ರಯವನ್ನಾಗಲೀ, ಬಹುಮಾನವನ್ನಾಗಲೀ ಕೇಳಿಕೊಳ್ಳದೆ, ನನ್ನ ಸೆರೆಯವರನ್ನು ಕಳುಹಿಸಿಬಿಡುವನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:13
19 ತಿಳಿವುಗಳ ಹೋಲಿಕೆ  

ಈ ಪ್ರಶ್ನೆಗಳಿಗೆ ಉತ್ತರಿಸಿರಿ: ಪೂರ್ವದಿಕ್ಕಿನಿಂದ ಬರುವ ಮನುಷ್ಯನನ್ನು ಎಚ್ಚರಿಸಿದವರು ಯಾರು? ಅವನು ಒಳ್ಳೆಯತನವನ್ನು ತನ್ನೊಂದಿಗಿರಲು ಕೇಳುತ್ತಾನೆ. ತನ್ನ ಖಡ್ಗವನ್ನು ಉಪಯೋಗಿಸಿ ಜನಾಂಗಗಳನ್ನು ಸೋಲಿಸುವನು. ಅವರನ್ನು ಧೂಳಿನಂತೆ ಮಾಡುವನು. ತನ್ನ ಬಿಲ್ಲನ್ನು ಉಪಯೋಗಿಸಿ ರಾಜರನ್ನು ವಶಪಡಿಸಿಕೊಳ್ಳುತ್ತಾನೆ. ಅವರು ಗಾಳಿಯಲ್ಲಿ ತೂರಾಡುವ ಹುಲ್ಲಿನಂತೆ ಓಡಿಹೋಗುವರು.


ಆದರೆ ಯೆಹೋವನು ಹೇಳುವುದೇನೆಂದರೆ, “ಕೈದಿಗಳು ತಪ್ಪಿಸಿಕೊಳ್ಳುವರು. ಬಲಿಷ್ಠ ಸೈನಿಕನಿಂದ ಯಾರೋ ಒಬ್ಬನು ಕೈದಿಯನ್ನು ಬಿಡಿಸಿಕೊಳ್ಳುವನು. ಇದು ಹೇಗೆ ಸಾಧ್ಯ? ಹೇಗೆಂದರೆ, ನಾನೇ ನಿನ್ನ ಬದಲಾಗಿ ಯುದ್ಧ ಮಾಡುವೆನು; ನಿನ್ನ ಮಕ್ಕಳನ್ನು ರಕ್ಷಿಸುವೆನು.


“ಉತ್ತರದಿಕ್ಕಿನಲ್ಲಿರುವ ಒಬ್ಬ ಮನುಷ್ಯನನ್ನು ನಾನು ಎಚ್ಚರಪಡಿಸಿದೆನು. ಅವನು ಪೂರ್ವದಿಕ್ಕಿನಿಂದ ಬರುವನು. ನನ್ನ ನಾಮವನ್ನು ಅವನು ಆರಾಧಿಸುವನು. ಕುಂಬಾರನು ಜೇಡಿಮಣ್ಣನ್ನು ತುಳಿದು ಹದಗೊಳಿಸುವಂತೆ ಅವನು ಅರಸರುಗಳ ಮೇಲೆ ತುಳಿದಾಡುವನು.


ದೇವರು ಹೇಳುವುದೇನೆಂದರೆ: “ಮೇದ್ಯರ ಸೈನ್ಯವು ಬಾಬಿಲೋನನ್ನು ಮುತ್ತುವಂತೆ ಮಾಡುವೆನು. ಮೇದ್ಯರ ಸೈನ್ಯಕ್ಕೆ ಬೆಳ್ಳಿಬಂಗಾರ ಸುರಿಸಿದರೂ ಅವರು ಬಾಬಿಲೋನಿನ ಮೇಲೆ ಧಾಳಿ ಮಾಡುವದನ್ನು ನಿಲ್ಲಿಸುವದಿಲ್ಲ.


ಪೂರ್ವದಿಕ್ಕಿನಿಂದ ಒಬ್ಬನನ್ನು ಕರೆಯುತ್ತೇನೆ. ಅವನು ಗಿಡುಗನಂತಿರುವನು. ಅವನು ಬಹು ದೂರದೇಶದಿಂದ ಬಂದು ನನ್ನ ಬಯಕೆಯನ್ನು ಈಡೇರಿಸುವನು. ನಾನು ಹೇಳಿದ ಸಂಗತಿಗಳನ್ನು ಮಾಡಿಮುಗಿಸುವೆನು. ನಾನು ಅವನನ್ನು ಸೃಷ್ಟಿಸಿದೆನು. ನಾನೇ ಅವನನ್ನು ಕರೆದುಕೊಂಡು ಬರುವೆನು.


ಸೈರಸನಿಗೆ ಯೆಹೋವನು ಹೀಗೆನ್ನುತ್ತಾನೆ, “ನೀನೇ ನನ್ನ ಕುರುಬನು. ನಾನು ಬಯಸುವ ಕಾರ್ಯಗಳನ್ನು ನೀನು ಮಾಡುವೆ. ನೀನು ಜೆರುಸಲೇಮಿಗೆ, ‘ನೀನು ಕಟ್ಟಲ್ಪಡುವೆ’ ಎಂದೂ ದೇವಾಲಯಕ್ಕೆ ‘ನಿನ್ನ ಅಸ್ತಿವಾರವು ಮತ್ತೆ ಹಾಕಲ್ಪಡುವದು’ ಎಂದೂ ಹೇಳುವೆ.”


“ಯೆಹೋವನೆಂಬ ನಾನು ನ್ಯಾಯವನ್ನು ಸ್ಥಾಪಿಸಲು ನಿನ್ನನ್ನು ಕರೆದೆನು. ನಾನು ನಿನ್ನ ಕೈಗಳನ್ನು ಹಿಡಿದು ಸಂರಕ್ಷಿಸುವೆನು. ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆ ನನ್ನಲ್ಲಿದೆಯೆಂಬುದಕ್ಕೆ ನೀನು ಗುರುತಾಗಿರುವೆ. ಎಲ್ಲಾ ಜನರಿಗೆ ನೀನು ಹೊಳೆಯುವ ಪ್ರಕಾಶವಾಗಿರುವೆ.


ನಮ್ಮ ರಕ್ಷಕನಾದ ದೇವರೇ, ನೀತಿವಂತರ ಪ್ರಾರ್ಥನೆಗೆ ಸದುತ್ತರವನ್ನು ದಯಪಾಲಿಸು; ಅವರಿಗೋಸ್ಕರ ಮಹತ್ಕಾರ್ಯಗಳನ್ನು ನಡೆಸು. ಸರ್ವಭೂನಿವಾಸಿಗಳ ನಂಬಿಕೆಗೆ ನೀನೇ ಆಧಾರ.


ಆತನು ಜೆರುಸಲೇಮ್‌ನಲ್ಲಿರುವಾತನೂ ಇಸ್ರೇಲರ ದೇವರೂ ಆಗಿದ್ದಾನೆ. ದೇವಜನರಲ್ಲಿ ಯಾರಾದರೂ ನಿಮ್ಮೊಂದಿಗೆ ವಾಸಿಸುತ್ತಿದ್ದರೆ ದೇವರ ಆಶೀರ್ವಾದವು ಅವರ ಮೇಲಿರಲಿ. ಯೆಹೂದ ಪ್ರಾಂತ್ಯದಲ್ಲಿರುವ ಜೆರುಸಲೇಮಿಗೆ ಹೋಗಲು ಅವರಿಗೆ ಅವಕಾಶಕೊಡಿರಿ. ಅವರು ಹೋಗಿ ಯೆಹೋವನಿಗಾಗಿ ದೇವಾಲಯವನ್ನು ಕಟ್ಟಲಿ.


ಈಗ ನೋಡು, ಸಂಭವಿಸಿದ್ದನ್ನು ಗಮನಿಸು. ಇನ್ನೊಂದು ಜನಾಂಗವು ಅವರನ್ನು ಗುಲಾಮರನ್ನಾಗಿ ಮಾಡಿತು. ಈ ದೇಶವು ನನ್ನ ಜನರನ್ನು ತೆಗೆದುಕೊಂಡು ಹೋಗಲು ಹಣ ಕೊಡಲಿಲ್ಲ. ಈ ದೇಶವು ನನ್ನ ಜನರ ಮೇಲೆ ದಬ್ಬಾಳಿಕೆ ನಡಿಸಿ ನಕ್ಕಿತ್ತು. ಈಗ ಜನರು ನನ್ನನ್ನೂ ನನ್ನ ಹೆಸರನ್ನೂ ಯಾವಾಗಲೂ ಗೇಲಿ ಮಾಡುತ್ತಾರೆ.”


ನಿನ್ನ ಎಲ್ಲಾ ಕಾರ್ಯಗಳಲ್ಲಿ ಆತನನ್ನು ಜ್ಞಾಪಿಸಿಕೊ. ಆಗ ಆತನು ನಿನಗೆ ಸಹಾಯ ಮಾಡುವನು.


ನಗರಗಳನ್ನು ನಾಶಮಾಡಿ ಭೂಮಿಯನ್ನು ಬೆಂಗಾಡನ್ನಾಗಿ ಮಾಡಿದವನು ಇವನೋ? ಯುದ್ಧದಲ್ಲಿ ಜನರನ್ನು ಸೆರೆಹಿಡಿದು ಅವರನ್ನು ಮನೆಗಳಿಗೆ ಬಿಡದೆ ಇದ್ದವನು ಇವನೋ?” ಎಂದು ಕೇಳುವರು.


ಸೈರಸನೇ, ನಿನ್ನ ಸೈನ್ಯವು ಮುನ್ನುಗ್ಗುವದು. ನಾನು ನಿನ್ನ ಮುಂದೆ ಹೋಗಿ ಪರ್ವತಗಳನ್ನು ನೆಲಸಮ ಮಾಡುವೆನು. ಹಿತ್ತಾಳೆಯ ನಗರ ದ್ವಾರಗಳನ್ನು ಪುಡಿಪುಡಿ ಮಾಡುವೆನು. ದ್ವಾರಗಳ ಕಬ್ಬಿಣದ ಅಗುಳಿಗಳನ್ನು ತುಂಡು ಮಾಡಿ ಬಿಡುವೆನು.


ಚೀಯೋನ್ ಕುಮಾರಿಯೇ, ಪ್ರಸವವೇದನೆಯಲ್ಲಿರುವ ಸ್ತ್ರೀಯಂತೆ ನೀನು ನೋವನ್ನು ಅನುಭವಿಸು. ನೀನು ಜೆರುಸಲೇಮ್ ಪಟ್ಟಣದಿಂದ ಹೊರಗೆ ಹೋಗಿ ಹೊಲದಲ್ಲಿ ವಾಸಿಸುವೆ. ನಾನು ಹೇಳುವುದೇನೆಂದರೆ, ನೀನು ಬಾಬಿಲೋನಿಗೆ ಹೋಗುವೆ, ಆದರೆ ಅಲ್ಲಿ ನೀನು ರಕ್ಷಿಸಲ್ಪಡುವೆ. ಯೆಹೋವನು ಅಲ್ಲಿಗೆ ಬಂದು ನಿನ್ನನ್ನು ರಕ್ಷಿಸುವನು. ನಿನ್ನ ವೈರಿಗಳಿಂದ ನಿನ್ನನ್ನು ಬಿಡುಗಡೆ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು