ಯೆಶಾಯ 45:14 - ಪರಿಶುದ್ದ ಬೈಬಲ್14 ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಹೋವನ ಈ ಮಾತನ್ನು ಕೇಳಿರಿ, “ಐಗುಪ್ತದ ಆದಾಯವೂ, ಕೂಷಿನ ವ್ಯಾಪಾರವೂ, ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು, ‘ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಕೇಳಿರಿ ಸರ್ವೇಶ್ವರನ ಈ ಮಾತನ್ನು : “ನಿಮ್ಮದಾಗುವುದು ಈಜಿಪ್ಟಿನ ಸಿರಿಯು, ಸುಡಾನಿನ ಸಂಪದವು. ನಿಮ್ಮನ್ನು ಸೇರಿ ನಿಮಗಧೀನರಾಗುವರು ಎತ್ತರದ ಸೆಬಾಯರು. ಬೇಡಿತೊಟ್ಟು ಅಡ್ಡಬೀಳುವರು ನಿಮ್ಮ ಮುಂದೆ ಅರಿಕೆಮಾಡಿಕೊಳ್ಳುವರು ಹೀಗೆಂದೆ : ‘ನಿಶ್ಚಯವಾಗಿ ನಿಮ್ಮಲ್ಲಿಹರು ದೇವರು ಅವರಲ್ಲದೆ ದೇವರಿಲ್ಲ ಬೇರೆಯಾರು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆಹೋವನ ಈ ಮಾತನ್ನು ಕೇಳಿರಿ - ಐಗುಪ್ತದ ಆದಾಯವೂ ಕೂಷಿನ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು - ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆಹೋವ ದೇವರು ಹೇಳುವುದೇನೆಂದರೆ: “ಈಜಿಪ್ಟಿನ ಆದಾಯವೂ, ಇಥಿಯೋಪಿಯದ ವ್ಯಾಪಾರವೂ, ಎತ್ತರದ ಮನುಷ್ಯರಾದ ಶೆಬದವರೂ ನಿಮ್ಮಲ್ಲಿಗೆ ಸೇರಿ, ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು, ನಿಮ್ಮ ಮುಂದೆ ಅಡ್ಡಬಿದ್ದು, ‘ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊಬ್ಬನಿಲ್ಲ; ಬೇರೆ ದೇವರು ಇಲ್ಲವೇ ಇಲ್ಲ.’ ” ಅಧ್ಯಾಯವನ್ನು ನೋಡಿ |
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.
ಆ ಸಮಯದಲ್ಲಿ ಸರ್ವಶಕ್ತನಾದ ಯೆಹೋವನಿಗೆ ವಿಶೇಷವಾದ ಕಾಣಿಕೆಯು ಸಮರ್ಪಿಸಲ್ಪಡುವದು. ಆ ಕಾಣಿಕೆಯು ಉನ್ನತವಾಗಿರುವ ಬಲಶಾಲಿಗಳಾದ ಜನರಿಂದ ಬರುವದು. ಎಲ್ಲಾ ದೇಶಗಳ ಜನರು ಈ ಉನ್ನತವಾದ ಈ ಬಲಿಷ್ಠರಿಗೆ ಹೆದರುವರು. ಅವರು ಬಲಾಢ್ಯ ಜನಾಂಗವಾಗಿದ್ದಾರೆ. ಅವರ ಜನಾಂಗವು ಇತರ ಜನಾಂಗಗಳನ್ನು ಸೋಲಿಸುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿದೆ. ಈ ಕಾಣಿಕೆಯನ್ನು ಚೀಯೋನ್ ಪರ್ವತದಲ್ಲಿರುವ ಯೆಹೋವನ ಸ್ಥಳಕ್ಕೆ ತರುವರು.