ಯೆಶಾಯ 45:18 - ಪರಿಶುದ್ದ ಬೈಬಲ್18 ಯೆಹೋವನು ದೇವರಾಗಿದ್ದಾನೆ. ಆತನು ಭೂಮ್ಯಾಕಾಶಗಳನ್ನು ಉಂಟುಮಾಡಿದ್ದಾನೆ. ಆತನು ಭೂಮಿಯನ್ನು ಅದರ ಸ್ಥಾನದಲ್ಲಿ ಇಟ್ಟಿದ್ದಾನೆ. ಆತನು ಈ ಲೋಕವನ್ನು ಸೃಷ್ಟಿಸಿದ್ದು ಅದು ಶೂನ್ಯವಾಗಿರಲೆಂದಲ್ಲ. ಅದು ಜನಭರಿತವಾಗಿರಲೆಂದೇ ಸೃಷ್ಟಿಸಿದನು. “ನಾನೇ ಯೆಹೋವನು, ನನ್ನ ಹೊರತು ಬೇರೆ ದೇವರುಗಳಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ, ಆತನೇ ದೇವರು. ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು. ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗೆನ್ನುತ್ತಾನೆ, “ನಾನೇ ಯೆಹೋವನು, ಇನ್ನು ಯಾರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಕೇಳಿ, ಆಕಾಶಮಂಡಲವನ್ನು ಸೃಷ್ಟಿಸಿದ ಸರ್ವೇಶ್ವರನ ಮಾತನ್ನು : ಭೂಲೋಕವನ್ನು ನಿರ್ಮಿಸಿ, ರೂಪಿಸಿ, ಸ್ಥಾಪಿಸಿದ ದೇವರು ಆತನು. ಅದನ್ನು ಶೂನ್ಯಸ್ಥಾನವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದವನು ಆತನು. ಅಂಥವನು ಇಂತೆನ್ನುತ್ತಾನೆ : “ಸರ್ವೇಶ್ವರ ನಾನೇ; ನಾನಲ್ಲದೆ ಇನ್ನಾರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ; ಆತನೇ ದೇವರು, ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು; ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗನ್ನುತ್ತಾನೆ - ನಾನೇ ಯೆಹೋವನು, ಇನ್ನು ಯಾವನೂ ಅಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಕಾಶಗಳನ್ನು ನಿರ್ಮಿಸಿದ ಯೆಹೋವ ದೇವರು ಇಂತೆನ್ನುತ್ತಾನೆ, “ದೇವರು ತಾನೇ ಭೂಮಿಯನ್ನು ನಿರ್ಮಿಸಿ, ಅದನ್ನು ಉಂಟುಮಾಡಿದನು. ಆತನೇ ಅದನ್ನು ಸ್ಥಾಪಿಸಿದನು. ಅದನ್ನು ವ್ಯರ್ಥವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದನು. ನಾನೇ ಯೆಹೋವ ದೇವರು, ನಾನಲ್ಲದೆ ಇನ್ನಾರೂ ಇಲ್ಲ. ಅಧ್ಯಾಯವನ್ನು ನೋಡಿ |
ಯೆಹೋವನು ನಿನ್ನನ್ನು ಸೃಷ್ಟಿಸಿದ್ದಾನೆ. ತನ್ನ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದವನು ಆತನೇ. ಆತನು ತನ್ನ ಶಕ್ತಿಯಿಂದ ಭೂಮಿಯ ಮೇಲೆ ಆಕಾಶವನ್ನು ಹರಡಿದ್ದಾನೆ. ಆದರೆ ನೀನು ಆತನನ್ನೂ ಆತನ ಶಕ್ತಿಯನ್ನೂ ಮರೆತುಬಿಟ್ಟೆ ಆದ್ದರಿಂದಲೇ ನಿನಗೆ ಕೇಡುಮಾಡುವ ದುಷ್ಟರಿಗೆ ನೀನು ಯಾವಾಗಲೂ ಹೆದರಿಕೊಂಡಿರುವೆ. ಅವರು ನಿನ್ನನ್ನು ನಾಶಮಾಡಲು ಆಲೋಚಿಸಿದ್ದಾರೆ. ಈಗ ಅವರೆಲ್ಲಿದ್ದಾರೆ? ಅವರೆಲ್ಲಾ ಹೋಗಿಬಿಟ್ಟಿದ್ದಾರೆ.