ಯೆಶಾಯ 45:19 - ಪರಿಶುದ್ದ ಬೈಬಲ್19 ನಾನು ಗುಪ್ತವಾಗಿ ಮಾತನಾಡದೆ ಬಹಿರಂಗವಾಗಿಯೇ ಮಾತನಾಡಿದ್ದೇನೆ. ಈ ಭೂಮಿಯ ಕತ್ತಲೆಯ ಸ್ಥಳದಲ್ಲಿ ನನ್ನ ಮಾತುಗಳನ್ನು ಅಡಗಿಸಿಡಲಿಲ್ಲ. ನನ್ನನ್ನು ಕಂಡುಹಿಡಿಯಲು ಗುಪ್ತಸ್ಥಳದಲ್ಲಿ ಹುಡುಕಿರಿ ಎಂದು ನಾನು ಯಾಕೋಬನ ಜನರಿಗೆ ಹೇಳಲಿಲ್ಲ. ನಾನೇ ಯೆಹೋವನು. ನಾನು ಸತ್ಯವನ್ನೇ ಆಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಾನು ರಹಸ್ಯದಲ್ಲಿ ನುಡಿದವನಲ್ಲ, ಅಧೋಲೋಕದೊಳಗಿಂದ ಮಾತನಾಡಿದವನಲ್ಲ. ಶೂನ್ಯವನ್ನೋ ಎಂಬಂತೆ, ‘ನನ್ನನ್ನು ಹುಡುಕಿರಿ’ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ಸರಿಯಾದ ಮಾತುಗಳನ್ನೇ ಆಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಾನು ಗುಟ್ಟುಗುಟ್ಟಾಗಿ ಮಾತಾಡಿದವನಲ್ಲ ಕಗ್ಗತ್ತಲೆಯೊಳಗಿನಿಂದ ನುಡಿದವನಲ್ಲ ಶೂನ್ಯದಲ್ಲಿ ನನ್ನ ಹುಡುಕಿರಿ ಎಂದು ಯಕೋಬ ವಂಶಕ್ಕೆ ಹೇಳಿದವನಲ್ಲ. ಸರ್ವೇಶ್ವರನಾದ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೆ ಸ್ಪಷ್ಟವಾಗಿ ಹೇಳುವವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಾನು ರಹಸ್ಯದಲ್ಲಿ ನುಡಿದವನಲ್ಲ, ತಮೋಲೋಕದೊಳಗಿಂದ ಮಾತಾಡಿದವನಲ್ಲ, ಶೂನ್ಯವನ್ನೋ ಎಂಬಂತೆ ನನ್ನನ್ನು ಹುಡುಕಿರಿ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೇ ಆಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ. ‘ವ್ಯರ್ಥವಾಗಿ ನನ್ನನ್ನು ಹುಡುಕಿರಿ’ ಎಂದು ಯಾಕೋಬನ ವಂಶದವರಿಗೆ ನಾನು ಹೇಳಲಿಲ್ಲ. ಯೆಹೋವನಾದ ನಾನೇ ನೀತಿಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ. ಅಧ್ಯಾಯವನ್ನು ನೋಡಿ |
ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”
ಈ ಪೀಳಿಗೆಯ ಜನರೇ, ಯೆಹೋವನ ಸಂದೇಶದ ಕಡೆಗೆ ಗಮನ ಕೊಡಿ, “ಇಸ್ರೇಲಿನ ಜನರಿಗೆ ನಾನು ಮರಳುಗಾಡಿನಂತೆ ಇರುವೆನೇ? ನಾನು ಗಾಢಾಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಂತೆ ಇರುವೆನೇ? ನನ್ನ ಜನರು, ‘ನಮಗೆ ಇಷ್ಟವಾದ ಮಾರ್ಗವನ್ನು ಅನುಸರಿಸಲು ನಾವು ಸ್ವತಂತ್ರರಾಗಿದ್ದೇವೆ. ಯೆಹೋವನೇ, ನಾವು ಪುನಃ ನಿನ್ನಲ್ಲಿಗೆ ಬರುವದಿಲ್ಲ’ ಎಂದು ಹೇಳುತ್ತಾರೆ. ಅವರು ಹಾಗೆ ಏಕೆ ಹೇಳುತ್ತಾರೆ?