ಯೆಶಾಯ 45:21 - ಪರಿಶುದ್ದ ಬೈಬಲ್21 ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹೇಳಿ, ನ್ಯಾಯಸ್ಥಾನಕ್ಕೆ ಬಂದು ನಿಮ್ಮ ವಾದವನ್ನು ಮಂಡಿಸಿ; ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಪರ್ಯಾಲೋಚಿಸಿ ನೋಡಲಿ. ಪ್ರಾರಂಭದಿಂದಲೂ ಈ ವಿಷಯವನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮುಂಚೆಯೇ ತಿಳಿಸಿದವನು ನಾನಲ್ಲದೆ ಇನ್ಯಾರು? ನನ್ನ ಹೊರತು ಇನ್ನು ಯಾವ ದೇವರೂ ಇಲ್ಲ; ನಾನಲ್ಲದೆ ಸತ್ಯಸ್ವರೂಪನು, ಉದ್ಧಾರಕನು ಆದ ದೇವನಿಲ್ಲವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವದಕ್ಕೆ ಮುಂಚೆ ಯಾರು ತಿಳಿಸಿದರು? ಯೆಹೋವನೆಂಬ ನಾನಲ್ಲವೆ. ನಾನು ಹೊರತು ಇನ್ನು ಯಾವ ದೇವರೂ ಇಲ್ಲ, ನನ್ನ ವಿನಹ ಸತ್ಯಸ್ವರೂಪನೂ ರಕ್ಷಕನೂ ಆದ ದೇವರು ಇಲ್ಲವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನೀವು ಏನು ಸಾರಬೇಕೋ ಅದನ್ನು ಈಗ ತನ್ನಿರಿ ಹೌದು, ಒಟ್ಟಿಗೆ ಅವರು ಆಲೋಚಿಸಲಿ ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಪ್ರಾರಂಭದಿಂದ ಇದನ್ನು ತಿಳಿಸಿದವರು ಯಾರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲ. ನನ್ನ ಹೊರತಾಗಿ ನೀತಿಯುಳ್ಳ ದೇವರೂ, ರಕ್ಷಕನೂ ಇಲ್ಲವೇ ಇಲ್ಲ. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.