ಯೆಶಾಯ 45:23 - ಪರಿಶುದ್ದ ಬೈಬಲ್23 “ನನ್ನ ಪರಾಕ್ರಮದಿಂದ ನಾನು ವಾಗ್ದಾನ ಮಾಡುತ್ತೇನೆ. ನನ್ನ ಆಜ್ಞೆಯು ನ್ಯಾಯವಾದದ್ದೂ ನೀತಿಯುಳ್ಳದ್ದೂ ಆಗಿದೆ. ಇಂಥದ್ದು ನಾನು ಆಜ್ಞಾಪಿಸಿದಂತೆಯೇ ಸಂಭವಿಸುವದು. ಎಲ್ಲಾ ಜನರು ನನ್ನ ಮುಂದೆ ಅಡ್ಡಬೀಳುವರೆಂದು ನಾನು ವಾಗ್ದಾನ ಮಾಡುತ್ತೇನೆ. ಪ್ರತಿಯೊಬ್ಬನೂ ನನ್ನನ್ನು ಹಿಂಬಾಲಿಸಲು ಪ್ರತಿಜ್ಞೆ ಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ಸತ್ಯದ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು. ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಪ್ರತಿಯೊಬ್ಬರು ಮೊಣಕಾಲೂರುವರು ನನಗೆ ಎಲ್ಲರು ನಾನೇ ದೇವರೆಂದು ಮಾಡುವರು ಪ್ರತಿಜ್ಞೆ. ಆ ನುಡಿ ಹೊರಟಿದೆ ನನ್ನ ಸತ್ಯದ ಬಾಯಿಂದ ಅದನ್ನು ಹಿಂತೆಗೆಯೆನು ನನ್ನ ಮೇಲಿಟ್ಟ ಆಣೆಯಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು ಎಂಬ ನುಡಿ ನನ್ನ ಸತ್ಯದ ಬಾಯಿಂದ ಹೊರಟಿದೆ, ಅದನ್ನು ಹಿಂತೆಗೆಯೆನು, ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ. ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ. ಅದು ಹಿಂದಿರುಗದು. ಪ್ರತಿಯೊಬ್ಬರು ನನ್ನ ಮುಂದೆ ಮೊಣಕಾಲೂರುವರು. ಪ್ರತಿಯೊಂದು ನಾಲಿಗೆಯೂ ಪ್ರತಿಜ್ಞೆ ಮಾಡುವುದು. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆನ್ನುತ್ತಾನೆ, “ನನ್ನ ಸ್ವಸಾಮರ್ಥ್ಯದಿಂದ ನಾನು ಈ ಪ್ರಮಾಣ ಮಾಡುವೆನು. ನಾನು ಆಣೆಯಿಟ್ಟು ಹೇಳುವೆನು. ಬೊಚ್ರ ನಗರವನ್ನು ನಾಶಮಾಡಲಾಗುವುದು. ಆ ನಗರ ಒಂದು ಹಾಳು ದಿಬ್ಬವಾಗುವುದು. ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಶಪಿಸುವಾಗ ಜನರು ‘ಬೊಚ್ರದಂತೆ ಹಾಳಾಗಲಿ’ ಎಂದು ಈ ನಗರದ ಉದಾಹರಣೆಯನ್ನು ಕೊಡುವರು. ಜನರು ಈ ನಗರವನ್ನು ಅವಮಾನ ಮಾಡುವರು. ಬೊಚ್ರ ನಗರದ ಸುತ್ತಮುತ್ತಲಿನ ಪಟ್ಟಣಗಳು ಶಾಶ್ವತವಾಗಿ ಹಾಳುಬೀಳುವವು.”
ಯೆಹೋವನು ವಾಗ್ದಾನವನ್ನು ಮಾಡಿರುತ್ತಾನೆ. ಆತನ ಸ್ವಂತ ಹೆಸರೇ ಅದಕ್ಕೆ ಸಾಕ್ಷಿಯಾಗಿದೆ. ಆತನು ತನ್ನ ಸಾಮರ್ಥ್ಯದಿಂದ ವಾಗ್ದಾನವನ್ನು ನೆರವೇರಿಸುವನು. ಯೆಹೋವನು ಹೇಳಿದ್ದೇನೆಂದರೆ, “ನಿನ್ನ ಆಹಾರವನ್ನು ನಾನು ನಿನ್ನ ವೈರಿಗಳಿಗೆ ಮತ್ತೆ ಕೊಡುವದಿಲ್ಲವೆಂದು ವಾಗ್ದಾನ ಮಾಡುತ್ತೇನೆ. ನೀನು ತಯಾರಿಸುವ ದ್ರಾಕ್ಷಾರಸವನ್ನು ಇನ್ನು ಮುಂದೆ ನಿನ್ನ ವೈರಿಗಳು ಸೇವಿಸುವದಿಲ್ಲವೆಂದು ನಾನು ವಾಗ್ದಾನ ಮಾಡುತ್ತೇನೆ.