Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 46:7 - ಪರಿಶುದ್ದ ಬೈಬಲ್‌

7 ಅವರು ಆ ವಿಗ್ರಹವನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ಹೊರುತ್ತಾರೆ. ಆ ಸುಳ್ಳುದೇವರುಗಳು ನಿಷ್ಪ್ರಯೋಜಕವಾಗಿವೆ. ಜನರೇ ಅವುಗಳನ್ನು ಹೊತ್ತುಕೊಳ್ಳಬೇಕು. ಜನರು ಅವುಗಳನ್ನು ನೆಲದ ಮೇಲೆ ಇಟ್ಟಾಗ ಅವು ಅಲ್ಲಾಡುವದಿಲ್ಲ. ತಮ್ಮ ಸ್ಥಳದಿಂದ ಆ ಸುಳ್ಳುದೇವರುಗಳು ಎದ್ದುಹೋಗುವದಿಲ್ಲ. ಜನರು ಅದರ ಮುಂದೆ ಕೂಗಿಕೊಂಡರೂ ಅವು ಕೇಳಿಸಿಕೊಳ್ಳುವದಿಲ್ಲ. ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳಷ್ಟೇ. ಅವು ಜನರನ್ನು ಅವರ ಕಷ್ಟಗಳಿಂದ ಬಿಡಿಸಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರುಗದು. ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರಕೊಡಲಾರದು. ಇಲ್ಲವೆ ಅವನನ್ನು ಕಷ್ಟದಿಂದ ಬಿಡಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದನ್ನು ಮೆರವಣಿಗೆ ಮಾಡುತ್ತಾರೆ ಹೊತ್ತು ಹೆಗಲಮೇಲೆ ಪ್ರತಿಷ್ಠಾಪನೆ ಮಾಡುತ್ತಾರೆ ಇಟ್ಟು ಪೀಠದ ಮೇಲೆ. ಕೂಗಿಕೊಂಡರೂ ಜರುಗದದು ಅಲ್ಲಿಂದ ಉತ್ತರಿಸಿ ಬಿಡಿಸದು ಯಾರನ್ನು ಕಷ್ಟದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರಗದು, ಒಬ್ಬನು ಕೂಗಿಕೊಂಡರೂ ಉತ್ತರಕೊಟ್ಟು ಕಷ್ಟದಿಂದ ಅವನನ್ನು ಬಿಡಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರ ಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 46:7
21 ತಿಳಿವುಗಳ ಹೋಲಿಕೆ  

“ಬೇರೆ ದೇಶಗಳಿಂದ ಪಾರಾಗಿ ಬಂದ ಜನರೇ, ಒಟ್ಟಾಗಿ ಸೇರಿಕೊಂಡು ನನ್ನ ಮುಂದೆ ಬನ್ನಿರಿ. (ಈ ಜನರು ಮರದ ವಿಗ್ರಹಗಳನ್ನು ಇಟ್ಟುಕೊಂಡಿದ್ದಾರೆ. ತಮ್ಮನ್ನು ರಕ್ಷಿಸಲಾರದ ವಿಗ್ರಹಕ್ಕೆ ಅವರು ಪ್ರಾರ್ಥಿಸುತ್ತಿದ್ದಾರೆ. ಅವರು ಮಾಡುವದು ಅವರಿಗೇ ತಿಳಿಯದು.


ಬೇರೆ ಜನಾಂಗದವರ ವಿಗ್ರಹಗಳು ಸೌತೆಕಾಯಿ ತೋಟಗಳಲ್ಲಿ ನಿಲ್ಲಿಸುವ ಬೆದರುಕಂಬಗಳಂತಿವೆ. ಅವರ ವಿಗ್ರಹಗಳು ಮಾತಾಡಲಾರವು; ಅವು ನಡೆಯಲಾರವು. ಜನರು ಆ ವಿಗ್ರಹಗಳನ್ನು ಹೊತ್ತುಕೊಂಡು ಹೋಗಬೇಕು. ಆದ್ದರಿಂದ ಆ ವಿಗ್ರಹಗಳಿಗೆ ಹೆದರಬೇಡಿರಿ. ಅವು ನಿಮಗೆ ಕೇಡನ್ನೂ ಮಾಡಲಾರವು; ಸಹಾಯವನ್ನೂ ಮಾಡಲಾರವು.”


ಬೇಲ್ ಮತ್ತು ನೆಬೋ ನನ್ನ ಮುಂದೆ ಅಡ್ಡಬೀಳುವವು. ಒಡೆಯನು ಹೀಗೆನ್ನುತ್ತಾನೆ, “ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳೇ. ಜನರು ಭಾರವಾದ ವಿಗ್ರಹಗಳನ್ನು ಪಶುಗಳ ಮೇಲೆ ಹೊರಿಸುವರು. ಅವು ಕೇವಲ ಹೊತ್ತುಕೊಂಡು ಹೋಗಬೇಕಾದ ಹೊರೆಗಳಾಗಿವೆ. ಆ ಸುಳ್ಳುದೇವರುಗಳು ಜನರನ್ನು ದಣಿಸುವುದೊಂದನ್ನು ಬಿಟ್ಟು ಬೇರೆ ಯಾವ ಕೆಲಸವನ್ನೂ ಮಾಡುವದಿಲ್ಲ.


ಹಡಗು ಮುಳುಗಿಹೋಗದಂತೆ ಅದನ್ನು ಹಗುರ ಮಾಡಲು ಜನರು ಅದರೊಳಗಿದ್ದ ವಸ್ತುಗಳನ್ನು ಸಮುದ್ರಕ್ಕೆ ಎಸೆದರು. ನಾವಿಕರು ತುಂಬಾ ಭಯಪಟ್ಟಿದ್ದರು. ಪ್ರತಿಯೊಬ್ಬರು ತಮ್ಮತಮ್ಮ ದೇವರುಗಳಿಗೆ ಪ್ರಾರ್ಥನೆ ಮಾಡಿದರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಅಲ್ಲಿ ಮಲಗಿ ನಿದ್ರೆ ಮಾಡತೊಡಗಿದನು.


ಅರಸನಾದ ನೆಬೂಕದ್ನೆಚ್ಚರನು ಒಂದು ಬಂಗಾರದ ವಿಗ್ರಹವನ್ನು ಮಾಡಿಸಿದ್ದನು. ಆ ವಿಗ್ರಹವು ಅರವತ್ತು ಮೊಳ ಎತ್ತರವಾಗಿತ್ತು. ಆರು ಮೊಳ ಅಗಲವಾಗಿತ್ತು. ಆ ವಿಗ್ರಹವನ್ನು ಬಾಬಿಲೋನ್ ಪ್ರಾಂತ್ಯದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.


ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸಲಿ, ನೀವು ಮಾಡಿದ ವಿಗ್ರಹಗಳು ಎಲ್ಲಿವೆ? ನೀವು ಕಷ್ಟದಲ್ಲಿದ್ದಾಗ ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸುವವೇ ಎಂಬುದನ್ನು ನೋಡೋಣ. ಯೆಹೂದದ ನಿವಾಸಿಗಳೇ, ನಿಮ್ಮಲ್ಲಿ ಎಷ್ಟು ಪಟ್ಟಣಗಳಿವೆಯೋ ಅಷ್ಟು ವಿಗ್ರಹಗಳಿವೆ.


ಆಗ ಎಲೀಯನು, “ಬಾಳನ ಪ್ರವಾದಿಗಳನ್ನು ಹಿಡಿದು ತನ್ನಿ! ಅವರಲ್ಲಿ ಒಬ್ಬರಾದರೂ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಿ!” ಎಂದು ಹೇಳಿದನು. ಪ್ರವಾದಿಗಳನ್ನೆಲ್ಲ ಜನರು ಹಿಡಿದುಕೊಂಡರು. ಎಲೀಯನು ಅವರನ್ನೆಲ್ಲಾ ಕೀಷೋನ್ ಬುಗ್ಗೆಗೆ ಎಳೆದುಕೊಂಡು ಹೋಗಿ ಕೊಂದು ಹಾಕಿದನು.


ಪ್ರವಾದಿಗಳು ತಾವು ತಂದಿದ್ದ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. ಅವರು ಬಾಳನನ್ನು ಮಧ್ಯಾಹ್ನದವರೆಗೆ ಪ್ರಾರ್ಥಿಸಿದರು. “ಬಾಳನೇ, ದಯವಿಟ್ಟು ನಮಗೆ ಉತ್ತರ ನೀಡು!” ಎಂದು ಅವರು ಪ್ರಾರ್ಥಿಸಿದರು. ಆದರೆ ಯಾವ ಶಬ್ದವೂ ಆಗಲಿಲ್ಲ: ಯಾರೊಬ್ಬರೂ ಉತ್ತರಿಸಲಿಲ್ಲ; ಪ್ರವಾದಿಗಳು ತಾವು ನಿರ್ಮಿಸಿದ್ದ ಯಜ್ಞವೇದಿಕೆಯ ಸುತ್ತಲೂ ನರ್ತಿಸಿದರು. ಆದರೆ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ.


ಅಷ್ಡೋದಿನ ಜನರು ಮಾರನೆಯ ದಿನ ಬೆಳಿಗ್ಗೆ ಎದ್ದಾಗ, ದಾಗೋನನ ವಿಗ್ರಹವು ಯೆಹೋವನ ಪೆಟ್ಟಿಗೆಯ ಮುಂದೆ ಬೋರಲಾಗಿ ಬಿದ್ದಿತ್ತು. ಅಷ್ಡೋದಿನ ಜನರು ದಾಗೋನ್ ವಿಗ್ರಹವನ್ನು ಅದರ ಸ್ಥಳದಲ್ಲಿ ಮತ್ತೆ ನಿಲ್ಲಿಸಿದರು.


ಒಂದು ದಿವಸ ಸನ್ಹೇರೀಬನು ತನ್ನ ದೇವರಾದ ನಿಸ್ರೋಕನ ಮಂದಿರದಲ್ಲಿ ಪೂಜಿಸುತ್ತಿರುವಾಗ ಅವನ ಇಬ್ಬರು ಮಕ್ಕಳಾದ ಅದ್ರಮ್ಮೆಲೆಕ್ ಮತ್ತು ಸರೆಚರ್ ಎಂಬವರು ಅವನನ್ನು ಕತ್ತಿಯಿಂದ ಸಂಹರಿಸಿ ಅರರಾಟ್‌ಗೆ ಪಲಾಯನಗೈದರು. ಅನಂತರ ಸನ್ಹೇರೀಬನ ಮಗ ಏಸರ್‌ಹದ್ದೋನನು ಅಶ್ಶೂರದ ಹೊಸ ಅರಸನಾದನು.


ನೀವು ವಿಶ್ವಾಸಿಗಳಾಗುವುದಕ್ಕಿಂತ ಮುಂಚೆ ನಿಮ್ಮ ಜೀವಿತವು ಹೇಗಿತ್ತೆಂಬುದನ್ನು ಜ್ಞಾಪಿಸಿಕೊಳ್ಳಿರಿ. ನಿಮಗಿಷ್ಟ ಬಂದಂತೆ ನಿರ್ಜೀವ ವಸ್ತುಗಳಾದ ವಿಗ್ರಹಗಳನ್ನು ಆರಾಧಿಸುತ್ತಿದ್ದಿರಿ.


ಅದರ ಪೀಠಕ್ಕಾಗಿ ವಿಶೇಷ ಜಾತಿಯ ಮರವನ್ನು ಆರಿಸುವನು. ಈ ಬಗೆಯ ಮರವು ಕೊಳೆತುಹೋಗುವದಿಲ್ಲ. ಆ ಬಳಿಕ ಅವನು ಒಳ್ಳೆಯ ಬಡಗಿಯನ್ನು ನೇಮಿಸುವನು. ಆ ಬಡಗಿಯು ವಿಗ್ರಹ ನಿಲ್ಲಿಸಿದಾಗ ಅದು ಪಕ್ಕಕ್ಕೆ ವಾಲಿ ಬೀಳದಂತೆ ಮಾಡುವನು.


ಒಬ್ಬ ಕೆಲಸಗಾರನು ಮರವನ್ನು ಕಡಿದು ಅದರಿಂದ ವಿಗ್ರಹವನ್ನು ಮಾಡುವನು. ಅವನು ಬಂಗಾರದ ಕೆಲಸದವನನ್ನು ಪ್ರೋತ್ಸಾಹಿಸುವನು. ಇನ್ನೊಬ್ಬನು ತನ್ನ ಸುತ್ತಿಗೆಯಿಂದ ತಗಡನ್ನು ಸಮತಟ್ಟು ಮಾಡುವನು. ಅವನು ಕಬ್ಬಿಣದ ಕೆಲಸದವನನ್ನು ಪ್ರೋತ್ಸಾಹಿಸುವನು. ಈ ಕೆಲಸದವನು ‘ಇದು ಒಳ್ಳೆಯ ಕೆಲಸ. ತಗಡು ಹೊರಗೆ ಬರಲಾರದು’ ಎಂದು ಹೇಳಿ ಆ ವಿಗ್ರಹವನ್ನು ಪೀಠಕ್ಕೆ ಮೊಳೆ ಹೊಡೆದು ಭದ್ರಪಡಿಸುವನು. ಈಗ ವಿಗ್ರಹವು ಅಲ್ಲಾಡುವದಿಲ್ಲ, ಕೆಳಕ್ಕೆ ಬೀಳುವದಿಲ್ಲ.”


ನಾನು ಆ ಸುಳ್ಳುದೇವರುಗಳನ್ನು ದೃಷ್ಟಿಸಿ ನೋಡಿದೆನು. ಅವುಗಳಲ್ಲಿ ಯಾವುದೂ ಮಾತಾಡುವಷ್ಟು ಜ್ಞಾನಿಯಾಗಿರಲಿಲ್ಲ. ನಾನು ಅವುಗಳನ್ನು ಪ್ರಶ್ನಿಸಿದೆನು. ಆದರೆ ಅವು ಉತ್ತರಿಸಲಿಲ್ಲ.


ಒಬ್ಬನು ಕುಲಿಮೆಯ ಬೆಂಕಿಯ ಮೇಲೆ ಕಬ್ಬಿಣವನ್ನು ಕಾಯಿಸುತ್ತಾನೆ. ಅವನು ತನ್ನ ಸುತ್ತಿಗೆಯಿಂದ ಆ ಲೋಹವನ್ನು ವಿಗ್ರಹವನ್ನಾಗಿ ಮಾಡುತ್ತಾನೆ. ಅವನು ಅದನ್ನು ತನ್ನ ತೋಳ್ಬಲದಿಂದ ಮಾಡುತ್ತಾನೆ. ಆದರೆ ಅವನು ಹಸಿದಾಗ ಅವನ ಶಕ್ತಿಯು ಕಡಿಮೆಯಾಗುತ್ತದೆ. ಆ ಮನುಷ್ಯನು ನೀರನ್ನು ಕುಡಿಯದಿದ್ದರೆ ಅವನು ಬಲಹೀನನಾಗುವನು.


ನೀನು ಕಷ್ಟಪಟ್ಟು ಗಳಿಸಿದ ಸಂಪತ್ತಿಗೆಲ್ಲಾ ಹಾಗೆಯೇ ಆಗುವದು. ನಿನ್ನ ಜೀವಮಾನ ಕಾಲವೆಲ್ಲಾ ವ್ಯವಹಾರ ನಡಿಸಿದ್ದ ಜನರೆಲ್ಲಾ ನಿನ್ನನ್ನು ತೊರೆದುಬಿಡುವರು. ಪ್ರತಿಯೊಬ್ಬನು ತನ್ನ ಸ್ವಂತದಾರಿ ಹಿಡಿಯುವನು. ಆಗ ನಿನ್ನನ್ನು ರಕ್ಷಿಸಲು ಯಾರೂ ಇರುವದಿಲ್ಲ.”


ಮಧ್ಯಾಹ್ನದ ಸಮಯವು ಮೀರುತ್ತಾ ಬಂದರೂ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ. ಸಾಯಂಕಾಲದ ಯಜ್ಞಗಳನ್ನು ಅರ್ಪಿಸುವ ಸಮಯ ಬರುವ ತನಕ ಪ್ರವಾದಿಗಳು ಗಟ್ಟಿಯಾಗಿ ಕೂಗುತ್ತಲೇ ಇದ್ದರು. ಆದರೂ ಬಾಳನಿಂದ ಉತ್ತರವೇ ಬರಲಿಲ್ಲ. ಯಾವ ಶಬ್ದವೂ ಆಗಲಿಲ್ಲ; ಅವರ ಕೂಗಾಟವನ್ನು ಯಾರೂ ಲಕ್ಷಿಸಲಿಲ್ಲ.


ಆ ದೇವರುಗಳೆಲ್ಲಾ ಶೂನ್ಯಕ್ಕಿಂತಲೂ ಕಡಿಮೆಯೇ. ಅವುಗಳು ಏನೂ ಮಾಡಲಾರವು. ಆ ಪ್ರತಿಮೆಗಳು ಸಂಪೂರ್ಣವಾಗಿ ಬೆಲೆಯಿಲ್ಲದವುಗಳಾಗಿವೆ. ಅವುಗಳು ಖಂಡಿತವಾಗಿಯೂ ನಿಷ್ಪ್ರಯೋಜಕವಾದವುಗಳಾಗಿವೆ.


ಯೆಹೂದದ ಪಟ್ಟಣಗಳ ಜನರು ಮತ್ತು ಜೆರುಸಲೇಮ್ ನಗರದ ಜನರು ತಮ್ಮ ವಿಗ್ರಹಗಳ ಹತ್ತಿರ ಹೋಗಿ ಸಹಾಯಕ್ಕಾಗಿ ಪ್ರಾರ್ಥಿಸುವರು. ಆ ವಿಗ್ರಹಗಳ ಮುಂದೆ ಅವರು ಧೂಪ ಹಾಕುವರು. ಆದರೆ ಕೇಡು ಬಂದಾಗ ಯೆಹೂದದ ಜನರಿಗೆ ಸಹಾಯಮಾಡಲು ಆ ವಿಗ್ರಹಗಳಿಗೆ ಸಾಧ್ಯವಾಗುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು