ಯೆಶಾಯ 46:8 - ಪರಿಶುದ್ದ ಬೈಬಲ್8 “ನೀವು ಪಾಪಮಾಡಿದ್ದೀರಿ. ನೀವು ಈ ವಿಚಾರವಾಗಿ ಮತ್ತೆ ಆಲೋಚಿಸಬೇಕು. ಈ ವಿಚಾರವನ್ನು ನಿಮ್ಮ ನೆನಪಿಗೆ ತಂದುಕೊಂಡು ಬಲಶಾಲಿಗಳಾಗಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು ಗಮನಿಸಿ ಮನುಷ್ಯರಿಗೆ ತಕ್ಕಂತೆ ನಡೆಯಿರಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮತಭ್ರಷ್ಟರೇ, ಜ್ಞಾಪಕದಲ್ಲಿಡಿ ಇದನ್ನು ಧೈರ್ಯದಿಂದ ಒಪ್ಪಿಕೊಳ್ಳಿ ನಿಮ್ಮ ತಪ್ಪನ್ನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು ಗಮನಿಸಿ ಮನುಷ್ಯರಿಗೆ ತಕ್ಕಂತೆ ನಡೆಯಿರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.