ಯೆಶಾಯ 46:9 - ಪರಿಶುದ್ದ ಬೈಬಲ್9 ಬಹಳ ಸಮಯದ ಹಿಂದೆ ನಡೆದ ಸಂಗತಿಗಳನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ನಾನು ದೇವರೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ಆ ಸುಳ್ಳುದೇವರುಗಳು ನನ್ನ ಹಾಗೆ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಪುರಾತನವಾದ ಹಳೆಯ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ; ನಾನೇ ದೇವರು, ನನಗೆ ಸರಿಸಮಾನನು ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನೆನಪಿಗೆ ತಂದುಕೊಳ್ಳಿ ಪ್ರಾಚೀನ ಘಟನೆಗಳನ್ನು ಅರಿತುಕೊಳ್ಳಿ ನಾನೇ ದೇವರು, ಇನ್ನಾರೂ ಇಲ್ಲ ಎಂಬುದನ್ನು ನಾನೇ ಪರಮದೇವರು, ನನಗೆ ಸರಿಸಮಾನವಿಲ್ಲ ಎಂಬುದನ್ನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಅಲ್ಲ; ನಾನೇ ಪರಮದೇವರು, ನನಗೆ ಸರಿಸಮಾನರಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಪುರಾತನ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ. ಏಕೆಂದರೆ ನಾನೇ ದೇವರು, ಮತ್ತೊಬ್ಬನಿಲ್ಲ. ನಾನೇ ದೇವರು, ನನಗೆ ಸರಿಸಮಾನನು ಇಲ್ಲ. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.
“ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”
ಯೆಹೋವನು ಹೀಗೆನ್ನುತ್ತಾನೆ: “ಜೋರ್ಡನ್ ನದಿಯ ಸಮೀಪದ ದಟ್ಟವಾದ ಅರಣ್ಯದಿಂದ ಒಮ್ಮೆ ಒಂದು ಸಿಂಹವು ಬರುವುದು. ಆ ಸಿಂಹವು ಜನರ ಸಾಕುಪ್ರಾಣಿಗಳಿದ್ದ ಹೊಲಗಳಿಗೆ ನುಗ್ಗುವುದು. ಆ ಪ್ರಾಣಿಗಳೆಲ್ಲ ಓಡಿಹೋಗುವವು. ನಾನು ಆ ಸಿಂಹದಂತಾಗುವೆನು. ನಾನು ಬಾಬಿಲೋನನ್ನು ಅದರ ಪ್ರದೇಶದಿಂದ ಓಡಿಸಿಬಿಡುವೆನು. ಈ ಕಾರ್ಯ ಮಾಡಲು ನಾನು ಯಾರನ್ನು ಆರಿಸಲಿ? ನನ್ನತೆ ಯಾರೂ ಇಲ್ಲ. ನನ್ನನ್ನು ಪ್ರತಿಭಟಿಸುವವರು ಯಾರೂ ಇಲ್ಲ. ಆದ್ದರಿಂದ ನಾನೇ ಅದನ್ನು ಮಾಡುತ್ತೇನೆ. ನನ್ನನ್ನು ಓಡಿಸಲು ಯಾವ ಕುರುಬನೂ ಬರಲಾರನು. ನಾನು ಬಾಬಿಲೋನಿನ ಜನರನ್ನು ಓಡಿಸಿಬಿಡುವೆನು.”