Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 47:10 - ಪರಿಶುದ್ದ ಬೈಬಲ್‌

10 ನೀನು ದುಷ್ಕೃತ್ಯಗಳನ್ನು ಮಾಡುತ್ತಿರುವೆ, ಆದರೂ ನೀನು ಸುರಕ್ಷಿತಳಾಗಿದ್ದೇನೆ ಎಂದುಕೊಂಡಿರುವೆ. ‘ನಾನು ಮಾಡಿದ ದುಷ್ಕೃತ್ಯಗಳನ್ನು ಯಾರೂ ನೋಡುವದಿಲ್ಲ’ ಎಂದು ನೀನು ಭಾವಿಸಿಕೊಂಡಿರುವೆ. ನಿನ್ನ ಜ್ಞಾನ, ನಿನ್ನ ತಿಳುವಳಿಕೆ ನಿನ್ನನ್ನು ಕಾಪಾಡುತ್ತವೆ ಎಂದು ತಿಳಿದುಕೊಂಡಿರುವೆ. ‘ನಾನೇ ಮಹಾವ್ಯಕ್ತಿ, ನನ್ನಂಥ ಮಹಾವ್ಯಕ್ತಿ ಬೇರೆ ಯಾರೂ ಇಲ್ಲ’ ಎಂದು ನೀನು ಅಂದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು, “ನನ್ನನ್ನು ಯಾರೂ ನೋಡರು?” ಎಂದುಕೊಂಡಿದ್ದಿ. ನನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಎಂದು ಯೋಚಿಸಿಕೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕೇಡನು ನೀ ಮಾಡಿದೆ ಭಯಪಡದೆ ನೋಡರಾರೂ ಎಂದುಕೊಂಡಿದ್ದೆ, ನೀನು ಜ್ಞಾನಿ ವಿವೇಕಿಯೆಂದು ತಿಳಿದುಕೊಂಡೇ ಮರುಳಾದೆ; ‘ಏಕೈಕಳು ನಾನೇ, ಇನ್ನಾರೂ ಇಲ್ಲ’ ಎಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನು ಮಾಡಿದ ಕೇಡಿಗೆ ಭಯಪಡದೆ ನನ್ನನ್ನು ಯಾರೂ ನೋಡರು ಎಂದುಕೊಂಡಿದ್ದೀ; ನಿನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲವೆಂದು ಯೋಚಿಸಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆ ಇಟ್ಟು, ‘ನನ್ನನ್ನು ಯಾರೂ ನೋಡುವುದಿಲ್ಲ’ ಎಂದು ಹೇಳಿದೆ. ನಿನ್ನ ಜ್ಞಾನ, ನಿನ್ನ ತಿಳುವಳಿಕೆ ನಿನ್ನನ್ನು ದಾರಿ ತಪ್ಪಿಸಿದ್ದರಿಂದ, ನಿನ್ನ ಹೃದಯದಲ್ಲಿ: ‘ಈಗ ಇರುವವಳು ನಾನೇ. ನನ್ನ ಹೊರತು ಇನ್ನು ಯಾರೂ ಇಲ್ಲ,’ ಎಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 47:10
23 ತಿಳಿವುಗಳ ಹೋಲಿಕೆ  

ಅವರು ತಾವು ತುಂಬಾ ಬುದ್ಧಿವಂತರೆಂದೂ ಜ್ಞಾನಿಗಳೆಂದೂ ಹೇಳಿಕೊಳ್ಳುವರು.


ಯೆಹೋವನಿಗೆ ತಮ್ಮ ಆಲೋಚನೆಗಳು ತಿಳಿಯಬಾರದೆಂದು ಕುತಂತ್ರೋಪಾಯಗಳನ್ನು ಮಾಡಿ, ಕತ್ತಲೆಯಲ್ಲಿ ದುಷ್ಕೃತ್ಯಗಳನ್ನು ಮಾಡುತ್ತಾ, “ನಮ್ಮನ್ನು ಯಾರು ನೋಡಬಲ್ಲರು, ನಮ್ಮನ್ನು ಯಾರು ಗುರುತಿಸಬಲ್ಲರು?” ಎಂದುಕೊಳ್ಳುವವರ ಗತಿಯನ್ನು ಏನು ಹೇಳಲಿ.


ಜನರು ತಮ್ಮನ್ನು ಜ್ಞಾನಿಗಳೆಂದು ಹೇಳಿಕೊಂಡು ಮೂರ್ಖರಾದರು.


“ದೇವರ ಮೇಲೆ ಅವಲಂಬಿಸಿಕೊಳ್ಳದ ಇವನಿಗೆ ಏನಾಯಿತು? ತನ್ನ ಐಶ್ವರ್ಯವೂ ಸುಳ್ಳುಗಳೂ ತನ್ನನ್ನು ಕಾಪಾಡುತ್ತವೆ ಎಂದು ಭಾವಿಸಿಕೊಂಡವನು ಇವನೇ.”


ಆಗ ದೇವರು ನನಗೆ, “ನರಪುತ್ರನೇ, ಇಸ್ರೇಲಿನ ಹಿರಿಯರು ಕತ್ತಲೆಯಲ್ಲಿ ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ವಿಶೇಷ ಕೋಣಿಯಿದೆ. ಅದರೊಳಗೆ ಅವರ ದೇವರ ವಿಗ್ರಹಗಳನ್ನಿಟ್ಟುಕೊಂಡಿದ್ದಾರೆ. ಅವರು, ‘ಯೆಹೋವನು ನಮ್ಮನ್ನು ನೋಡುವದಿಲ್ಲ. ಆತನು ಈ ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ತಮ್ಮೊಳಗೆ ಹೇಳಿಕೊಳ್ಳುತ್ತಿದ್ದಾರೆ” ಎಂದನು.


ನೆರೆಯವನ ಬಗ್ಗೆ ಯಾರೂ ಸತ್ಯವನ್ನಾಡುವದಿಲ್ಲ. ಜನರು ನ್ಯಾಯಾಲಯಗಳಲ್ಲಿ ಪರಸ್ಪರ ವ್ಯಾಜ್ಯ ಮಾಡುವರು. ತಾವು ಗೆಲ್ಲಬೇಕೆಂಬ ಉದ್ದೇಶದಿಂದ ಸುಳ್ಳುಸಾಕ್ಷಿಯ ಮೇಲೆ ಅವಲಂಬಿಸುವರು. ಅವರು ಒಬ್ಬರ ಮೇಲೊಬ್ಬರು ಸುಳ್ಳು ಹೇಳುತ್ತಾರೆ; ಅವರು ಕೇಡಿನಿಂದ ತುಂಬಿದವರಾಗಿದ್ದು ಕೇಡನ್ನೇ ಹೆರುತ್ತಾರೆ.


ಏಕೆಂದರೆ ಈ ಲೋಕದ ಜ್ಞಾನವು ದೇವರಿಗೆ ಮೂರ್ಖತನವಾಗಿದೆ. “ದೇವರು ಜಾಣರನ್ನು ಅವರ ಕುತಂತ್ರದ ಮಾರ್ಗಗಳಲ್ಲೇ ಹಿಡಿದುಕೊಳ್ಳುವನು” ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ.


ಅದಕ್ಕೆ ದೇವರು, “ಇಸ್ರೇಲ್ ಮತ್ತು ಯೆಹೂದ ಜನರ ದೋಷವು ಬಹಳ ಹೆಚ್ಚಾಗಿದೆ. ಈ ದೇಶದಲ್ಲಿ ಎಲ್ಲೆಲ್ಲಿಯೂ ಕೊಲೆಗಳು ನಡೆಯುತ್ತಿವೆ. ಈ ನಗರವು ಅಪರಾಧಗಳಿಂದ ತುಂಬಿಹೋಗಿದೆ. ಯಾಕೆಂದರೆ ಜನರು ಹೀಗೆಂದುಕೊಳ್ಳುತ್ತಿದ್ದಾರೆ, ‘ಯೆಹೋವನು ಈ ದೇಶವನ್ನು ಬಿಟ್ಟುಹೋಗಿದ್ದಾನೆ. ನಾವು ಮಾಡುತ್ತಿರುವಂಥದ್ದನ್ನು ಅವನು ನೋಡುವುದಿಲ್ಲ.’


ಒಬ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ ನಾನು ಅವನನ್ನು ಸರಾಗವಾಗಿ ನೋಡಬಲ್ಲೆನು. ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” ಯೆಹೋವನೇ ಇವುಗಳನ್ನು ಹೇಳಿದ್ದಾನೆ.


ಆ ಮನುಷ್ಯನಿಗೆ ತಾನು ಮಾಡುತ್ತಿರುವುದೇ ತಿಳಿಯದು. ಅವನು ಗಲಿಬಿಲಿಗೊಂಡಿದ್ದಾನೆ. ಅವನ ಹೃದಯವು ಅವನನ್ನು ತಪ್ಪುದಾರಿಯಲ್ಲಿ ನಡಿಸುತ್ತದೆ. ಅವನು ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ತಾನು ಮಾಡುತ್ತಿರುವುದು ತಪ್ಪೆಂದು ಅವನು ಕಾಣಲಾರನು. “ನನ್ನ ಕೈಯಲ್ಲಿರುವ ಈ ವಿಗ್ರಹವು ಸುಳ್ಳು ದೇವರಾಗಿದೆ” ಎಂದು ಅವನು ಹೇಳುವದಿಲ್ಲ.


ಯಾರಿಗೂ ತಮ್ಮ ಆತ್ಮವನ್ನು ತಡೆದು ನಿಲ್ಲಿಸಿಕೊಳ್ಳುವ ಶಕ್ತಿ ಇಲ್ಲ. ಯಾರಿಗೂ ತಮ್ಮ ಮರಣವನ್ನು ತಡೆದು ನಿಲ್ಲಿಸುವ ಶಕ್ತಿಯಿಲ್ಲ. ಯುದ್ಧಕಾಲದಲ್ಲಿ ಸೈನಿಕರಿಗೆ ರಜೆ ದೊರೆಯುವುದಿಲ್ಲ. ಅದೇ ರೀತಿಯಲ್ಲಿ, ಪಾಪವು ಪಾಪಿಯನ್ನು ಬಿಟ್ಟುಹೋಗುವುದಿಲ್ಲ.


ಕೇಡುಮಾಡಲು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ ಬಲೆಯೊಡ್ಡಲು ಆಲೋಚಿಸುವರು. “ತಮ್ಮ ಬಲೆಗಳು ಯಾರಿಗೂ ಕಾಣುವುದಿಲ್ಲ” ಎಂದು ಮಾತಾಡಿಕೊಳ್ಳುವರು.


ನೀವು, “ನಾವು ಮರಣದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ನಾವು ಪಾತಾಳದೊಂದಿಗೆ ಒಪ್ಪಂದ ಮಾಡಿದ್ದೇವೆ. ಆದ್ದರಿಂದ ನಾವು ಶಿಕ್ಷಿಸಲ್ಪಡುವದಿಲ್ಲ. ಶಿಕ್ಷೆಯು ಹಾದುಹೋಗುವಾಗ ಅದು ನಮಗೇನೂ ಹಾನಿ ಮಾಡುವದಿಲ್ಲ. ನಾವು ನಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತೇವೆ” ಎಂದು ಹೇಳುತ್ತೀರಿ.


ಆದ್ದರಿಂದ ಆ ನಿಸ್ಸಹಾಯಕರು, “ದೇವರು ನಮ್ಮನ್ನು ಮರೆತುಬಿಟ್ಟಿದ್ದ್ದಾನೆ! ನಮಗೆ ಶಾಶ್ವತವಾಗಿ ವಿಮುಖನಾಗಿದ್ದಾನೆ! ನಮಗೆ ಸಂಭವಿಸುತ್ತಿರುವುದನ್ನು ಆತನು ನೋಡುವುದಿಲ್ಲ!” ಎಂದು ಯೋಚಿಸತೊಡಗುವರು.


ಆದ್ದರಿಂದ ‘ಕೋಮಲ ಸ್ತ್ರೀಯೇ,’ ನನ್ನ ಮಾತನ್ನು ಕೇಳು. ಸುರಕ್ಷಿತಳಾಗಿರುವೆ ಎಂದು ನೆನಸಿಕೊಂಡು ಹೀಗೆ ನಿನ್ನೊಳಗೆ, ‘ನಾನೇ ಮಹಾವ್ಯಕ್ತಿ. ನನ್ನಂಥ ಮಹಾವ್ಯಕ್ತಿ ಯಾರೂ ಇಲ್ಲ. ನಾನೆಂದಿಗೂ ವಿಧವೆಯಾಗುವದಿಲ್ಲ. ಯಾವಾಗಲೂ ನನಗೆ ಮಕ್ಕಳಿರುವರು’ ಎಂದುಕೊಳ್ಳುವೆ.


ಯೆಹೋವನು ಹೇಳುತ್ತಾನೆ, “ಜ್ಞಾನಿಗಳು ತಮ್ಮ ಜ್ಞಾನದ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು. ಬಲಶಾಲಿಗಳು ತಮ್ಮ ಬಲದ ಬಗ್ಗೆ ಬಡಾಯಿಕೊಚ್ಚಿಕೊಳ್ಳಬಾರದು. ಶ್ರೀಮಂತರು ತಮ್ಮ ಸಂಪತ್ತಿನ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು.


ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.


ಈ ನಿನೆವೆಯು ಸಂತೋಷಭರಿತ ನಗರಿಯಾಗಿದೆ. ಅದರ ನಿವಾಸಿಗಳು ತಾವು ಸುರಕ್ಷಿತರಾಗಿದ್ದೇವೆಂದು ತಿಳಿದಿದ್ದಾರೆ. ನಿನೆವೆಯು ಲೋಕದಲ್ಲಿ ಅತ್ಯಂತ ಮಹತ್ವಪೂರ್ಣ ಸ್ಥಳವೆಂದು ತಿಳಿದಿದ್ದಾರೆ. ಅವರು ಬಹಳ ಗರ್ವಪಡುತ್ತಾರೆ. ಆದರೆ ಆ ನಗರವು ನಾಶವಾಗುವದು. ಕಾಡುಮೃಗಗಳ ಹಕ್ಕೆಯಾಗುವದು. ದಾಟಿಹೋಗುವ ಜನರು, ತಮ್ಮ ಆಶ್ಚರ್ಯವನ್ನು ಸಿಳ್ಳುಹಾಕಿ ತಲೆಯಾಡಿಸಿ “ಎಂಥಾ ದುರ್ಗತಿ” ಎಂದು ಉದ್ಗರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು