Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 47:12 - ಪರಿಶುದ್ದ ಬೈಬಲ್‌

12 ಮಾಟಮಂತ್ರಗಳನ್ನು ಕಲಿತುಕೊಳ್ಳುವುದರಲ್ಲೇ ನಿನ್ನ ಜೀವಮಾನವನ್ನು ಕಳೆದಿರುವೆ. ಸರಿ, ತಂತ್ರಮಂತ್ರಗಳನ್ನು ಮಾಡಲು ಪ್ರಾರಂಭಿಸು. ಒಂದುವೇಳೆ ಅವು ನಿನಗೆ ಸಹಾಯ ಮಾಡಬಹುದು. ಒಂದುವೇಳೆ ಕೆಲವರನ್ನು ನೀನು ಭಯಪಡಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ, ಲೆಕ್ಕವಿಲ್ಲದ ನಿನ್ನ ಮಾಟಮಂತ್ರಗಳನ್ನೂ ಪ್ರಯೋಗಿಸಿ ಎದ್ದು ನಿಲ್ಲು. ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು. ಒಂದು ವೇಳೆ ನಿನ್ನ ಶತ್ರುವಿನಲ್ಲಿ ಭಯ ಹುಟ್ಟೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಪ್ರಯೋಗಿಸಿ ನೋಡು ನಿನ್ನ ಅಗಣಿತ ಮಂತ್ರತಂತ್ರಗಳನು ಬಾಲ್ಯಾರಭ್ಯ ನೀ ಕಲಿತ ಮಾಯಮಾಟಗಳನು ಪ್ರಾಯಶಃ ನಿನಗವು ಪ್ರಯೋಜನವಾದಾವು ಬಹುಶಃ ನಿನಗವು ಭಯಹುಟ್ಟಿಸಿಯಾವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಎದ್ದು ನಿಲ್ಲು, ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ಲೆಕ್ಕವಿಲ್ಲದ ನಿನ್ನ ಮಾಟಗಳನ್ನೂ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು, ಒಂದು ವೇಳೆ [ನಿನ್ನ ಶತ್ರುವಿನಲ್ಲಿ] ಭಯಹುಟ್ಟೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿನ್ನ ಮಾಟಗಳ ಸಂಗಡ ನಿಂತುಕೋ. ನಿನ್ನ ಬಾಲ್ಯಾರಭ್ಯ ಬೇಸತ್ತು, ಅಭ್ಯಾಸಿಸಿರುವ ನಿನ್ನ ಮಂತ್ರ ತಂತ್ರಗಳನ್ನೂ, ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು. ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ಭಯ ಉಂಟಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 47:12
22 ತಿಳಿವುಗಳ ಹೋಲಿಕೆ  

ಇದಕ್ಕೆಲ್ಲಾ ಕಾರಣ ನಿನೆವೆ. ನಿನೆವೆಯು ಒಬ್ಬ ವೇಶ್ಯೆ. ಆಕೆಗೆ ತೃಪ್ತಿ ಇರದು. ಆಕೆಗೆ ಹೆಚ್ಚುಹೆಚ್ಚು ಬೇಕು. ಅನೇಕ ದೇಶಗಳಿಗೆ ತನ್ನನ್ನು ಮಾರಿಬಿಟ್ಟಿದ್ದಾಳೆ. ಮಂತ್ರತಂತ್ರಗಳನ್ನು ಉಪಯೋಗಿಸಿ ಜನರನ್ನು ತನ್ನ ಗುಲಾಮರನ್ನಾಗಿ ಮಾಡಿದ್ದಾಳೆ.


ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸಲಿ, ನೀವು ಮಾಡಿದ ವಿಗ್ರಹಗಳು ಎಲ್ಲಿವೆ? ನೀವು ಕಷ್ಟದಲ್ಲಿದ್ದಾಗ ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸುವವೇ ಎಂಬುದನ್ನು ನೋಡೋಣ. ಯೆಹೂದದ ನಿವಾಸಿಗಳೇ, ನಿಮ್ಮಲ್ಲಿ ಎಷ್ಟು ಪಟ್ಟಣಗಳಿವೆಯೋ ಅಷ್ಟು ವಿಗ್ರಹಗಳಿವೆ.


ಸುಳ್ಳುಪ್ರವಾದಿಗಳು ಸುಳ್ಳನ್ನೇ ಹೇಳುತ್ತಾರೆ. ಅವರು ಹೇಳಿದ್ದೆಲ್ಲವೂ ಸುಳ್ಳು ಎಂದು ಯೆಹೋವನು ತೋರಿಸಿಕೊಡುತ್ತಾನೆ. ಮಂತ್ರಗಾರರನ್ನು ದೇವರು ಮೂರ್ಖರನ್ನಾಗಿ ಮಾಡುತ್ತಾನೆ. ಆತನು ಜ್ಞಾನಿಗಳನ್ನು ಗಲಿಬಿಲಿಗೊಳಿಸುತ್ತಾನೆ. ಅವರು ತಮಗೆ ಎಲ್ಲವೂ ಗೊತ್ತಿದೆ ಎಂದು ತಿಳಿದುಕೊಳ್ಳುತ್ತಾರೆ. ಆದರೆ ದೇವರು ಅವರನ್ನು ಮೂಢರನ್ನಾಗಿ ಮಾಡುತ್ತಾನೆ.


ಈಜಿಪ್ಟಿನ ಜನರಲ್ಲಿ ಗಲಿಬಿಲಿ ಉಂಟಾಗುವದು. ಆ ಜನರು ತಮ್ಮ ಸುಳ್ಳುದೇವರುಗಳ ಬಳಿಗೂ ಪಂಡಿತರ ಬಳಿಗೂ ಓಡಿ ತಾವು ಏನು ಮಾಡಬೇಕೆಂದು ವಿಚಾರಿಸುವರು. ಮಂತ್ರವಾದಿಗಳನ್ನೂ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಕೇಳುವರು. ಆದರೆ ಅವರ ಯಾವ ಸಲಹೆಗಳೂ ಪ್ರಯೋಜನಕ್ಕೆ ಬರುವದಿಲ್ಲ.”


ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”


ಮೋಶೆಯ ಈ ಕಾರ್ಯವನ್ನು ವಿಫಲಗೊಳಿಸಲು ಮಾಂತ್ರಿಕರಿಗೆ ಸಾಧ್ಯವಾಗಲಿಲ್ಲ. ಯಾಕೆಂದರೆ ಈಜಿಪ್ಟಿನ ಎಲ್ಲಾ ಜನರಂತೆ ಮಾಂತ್ರಿಕರ ಮೇಲೆಯೂ ಹುಣ್ಣುಗಳಾದವು.


ಮಾಂತ್ರಿಕರು ತಮ್ಮ ಮಂತ್ರವಿದ್ಯೆಯಿಂದ ಅದೇರೀತಿ ಮಾಡಿ ಈಜಿಪ್ಟ್ ದೇಶದ ಮೇಲೆ ಕಪ್ಪೆಗಳನ್ನು ಬರಮಾಡಿದರು.


ಆಗ ರಾಜನು ತನ್ನ ವಿಧ್ವಾಂಸರನ್ನೂ ಮಂತ್ರಗಾರರನ್ನೂ ಕರೆಯಿಸಿದನು. ಅವರು ತಮ್ಮ ಮಂತ್ರವಿದ್ಯೆಯಿಂದ ಅದೇ ರೀತಿ ಮಾಡಿದರು.


ಈ ಜನರು ತಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಪರಿವರ್ತಿಸಿಕೊಳ್ಳಲಿಲ್ಲ ಮತ್ತು ಇತರರನ್ನು ಕೊಲ್ಲುವುದನ್ನು ಬಿಟ್ಟುಬಿಡಲಿಲ್ಲ. ಅವರು ತಾವು ನಡೆಸುತ್ತಿದ್ದ ಮಾಟಮಂತ್ರಗಳನ್ನು, ಲೈಂಗಿಕ ಪಾಪಗಳನ್ನು ಮತ್ತು ಕಳ್ಳತನವನ್ನು ತೊರೆದುಬಿಡಲಿಲ್ಲ.


ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು. ಇಸ್ರೇಲೇ, ಆ ಶತ್ರುಗಳ ಬಗ್ಗೆ ನಮಗೆ ಹೇಳು.


ಅರಸನು ತನ್ನ ಎಲ್ಲಾ ಪಂಡಿತರನ್ನು ಕರೆಸಿದನು. ಅವರು ಮಾಟಮಂತ್ರಗಳಿಂದ, ಜ್ಯೋತಿಶ್ಶಾಸ್ತ್ರದ ಸಹಾಯದಿಂದ ಅರಸನ ಕನಸಿನ ಅರ್ಥವನ್ನೂ ಭವಿಷ್ಯದಲ್ಲಿ ಸಂಭವಿಸಲಿರುವುದನ್ನೂ ತಿಳಿದುಕೊಳ್ಳಲು ಪ್ರಯತ್ನ ಮಾಡಿದರು. ರಾಜನು ತಾನು ಕಂಡ ಕನಸಿನ ಅರ್ಥವನ್ನು ತಿಳಿಯಬಯಸಿದ್ದರಿಂದ ಅವರು ಒಳಗೆ ಬಂದು ಅರಸನ ಸಮ್ಮುಖದಲ್ಲಿ ನಿಂತುಕೊಂಡರು.


ಗೋಡೆಯ ಮೇಲಿನ ಈ ಬರಹವನ್ನು ಓದಲು ಮಂತ್ರವಾದಿಗಳನ್ನು, ವಿದ್ವಾಂಸರನ್ನು ಕರೆಸಲಾಯಿತು. ಅವರು ಆ ಬರಹದ ಅರ್ಥವನ್ನು ನನಗೆ ವಿವರಿಸಬೇಕೆಂದು ನನ್ನ ಉದ್ದೇಶವಾಗಿತ್ತು. ಆದರೆ ಗೋಡೆಯ ಮೇಲಿನ ಈ ಬರಹದ ಅರ್ಥವನ್ನು ಅವರು ನನಗೆ ಹೇಳಲು ಸಾಧ್ಯವಾಗಲಿಲ್ಲ.


ದೇವದರ್ಶಿಗಳು ನಾಚಿಕೆಗೊಂಡಿದ್ದಾರೆ. ಭವಿಷ್ಯ ಹೇಳುವವರು ನಾಚಿಕೆಗೊಳಗಾಗಿದ್ದಾರೆ. ಯಾಕೆಂದರೆ ದೇವರು ಅವರ ಕೂಡ ಮಾತನಾಡುವದನ್ನು ನಿಲ್ಲಿಸಿರುವದರಿಂದ ಅವರು ಏನನ್ನೂ ಹೇಳುವದಿಲ್ಲ.”


ತಿರುಗಿ ಕತ್ತೆಯು ಯೆಹೋವನ ದೂತನನ್ನು ನೋಡಿ ಗೋಡೆಗೆ ತನ್ನನ್ನು ಒತ್ತರಿಸಿಕೊಂಡಿತು. ಆಗ ಬಿಳಾಮನ ಪಾದವು ಗೋಡೆಗೆ ಒತ್ತರಿಸಿತು. ಆದ್ದರಿಂದ ಬಿಳಾಮನು ತಿರುಗಿ ಕತ್ತೆಯನ್ನು ಹೊಡೆದನು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಿನ್ನ ಮುಂಡಾಸವನ್ನು ತೆಗೆ! ನಿನ್ನ ಕಿರೀಟವನ್ನು ತೆಗೆ! ಈಗ ಇರುವಂತೆಯೇ ಸಂಗತಿಗಳು ಇರುವುದಿಲ್ಲ. ಮುಖ್ಯಾಧಿಕಾರಿಗಳು ತಗ್ಗಿಸಲ್ಪಡುವರು. ಈಗ ಸಾಧಾರಣ ವ್ಯಕ್ತಿಗಳಾಗಿರುವವರು ಪ್ರಮುಖ ನಾಯಕರುಗಳಾಗುವರು.


ಮಹಾಪ್ರಭುಗಳು ಕೇಳುವ ವಿಷಯ ಅತಿ ಕಠಿಣವಾದದ್ದು. ದೇವತೆಗಳು ಮಾತ್ರ ಅರಸನ ಕನಸನ್ನೂ ಅದರ ಅರ್ಥವನ್ನೂ ತಿಳಿಸಲು ಸಾಧ್ಯ. ಆದರೆ ದೇವತೆಗಳು ಮಾನವರೊಂದಿಗೆ ವಾಸಮಾಡುವುದಿಲ್ಲ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು