ಯೆಶಾಯ 47:13 - ಪರಿಶುದ್ದ ಬೈಬಲ್13 ನಿನಗೆ ಅನೇಕಾನೇಕ ಸಲಹೆಗಾರರಿದ್ದಾರೆ. ಅವರು ನಿನಗೆ ಕೊಡುವ ಸಲಹೆಗಳಿಂದ ನೀನು ಬೇಸರಗೊಂಡಿರುವಿಯಾ? ಹಾಗಾದರೆ ನಿನ್ನಲ್ಲಿರುವ ಖಗೋಳಶಾಸ್ತ್ರಜ್ಞರನ್ನು ಕರೆಯಿಸು. ತಿಂಗಳು ಯಾವಾಗ ಪ್ರಾರಂಭವಾಗುತ್ತದೆಯೆಂದು ಅವರು ಹೇಳಬಲ್ಲರು. ನಿನ್ನ ಸಂಕಟಗಳು ಯಾವಾಗ ಪ್ರಾಪ್ತವಾಗುತ್ತವೆಯೆಂದು ಅವರು ನಿನಗೆ ತಿಳಿಸಬಲ್ಲರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ. ಖಗೋಳಜ್ಞರು, ಜೋಯಿಸರು, ಪಂಚಾಂಗದವರು ಇವರೆಲ್ಲರೂ, ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಬೇಸರವಾಯಿತೆ ನಿನಗೆಕೇಳಿ ಮಂತ್ರಾಲೋಚನೆಗಳನು? ಉದ್ಧರಿಸಲಿ ಬರಲಿರುವ ಆ ವಿಪತ್ತುಗಳಿಂದ ನಿನ್ನನು ಖಗೋಳಜ್ಞರು, ಜೋಯಿಸರು ನೋಡಿ ಪಂಚಾಂಗವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ; ಖಗೋಲಜ್ಞರು, ಜೋಯಿಸರು, ಪಂಚಾಂಗದವರು, ಇವರೆಲ್ಲರೂ ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಳಜ್ಞರು, ಜೋಯಿಸರು, ಪಂಚಾಂಗದವರು, ಇವರೆಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ. ಅಧ್ಯಾಯವನ್ನು ನೋಡಿ |
ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಬಾಬಿಲೋನಿನ ಅಗಲವಾದ ಮತ್ತು ಸುಭದ್ರವಾದ ಗೋಡೆಯನ್ನು ಬೀಳಿಸಲಾಗುವುದು. ಅದರ ಎತ್ತರವಾದ ಬಾಗಿಲುಗಳನ್ನು ಸುಟ್ಟುಹಾಕಲಾಗುವುದು. ಬಾಬಿಲೋನಿನ ಜನರು ನಗರವನ್ನು ರಕ್ಷಿಸಲು ಬಹಳ ಕಷ್ಟಪಡುವರು. ಆದರೆ ಅದು ನಿಷ್ಪ್ರಯೋಜಕವಾಗುವುದು. ನಗರವನ್ನು ರಕ್ಷಿಸುವ ಪ್ರಯತ್ನದಲ್ಲಿ ಅವರು ತುಂಬಾ ಶ್ರಮವಹಿಸುವರು. ಆದರೆ ಅವರು ಕೇವಲ ಅಗ್ನಿಗೆ ಆಹುತಿಯಾಗುವರು.”
ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”