Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 47:14 - ಪರಿಶುದ್ದ ಬೈಬಲ್‌

14 ಆದರೆ ಆ ಮನುಷ್ಯರಿಗೆ ತಮ್ಮನ್ನೇ ರಕ್ಷಿಸಲು ಅಸಾಧ್ಯವಾಗುವದು. ಅವರು ಹುಲ್ಲಿನಂತೆ ಸುಟ್ಟುಹೋಗುವರು. ರೊಟ್ಟಿಸುಡಲು ಕೆಂಡಗಳು ಕಾಣಿಸದಂತೆಯೂ ಚಳಿ ಕಾಯಿಸಿಕೊಳ್ಳಲು ಬೆಂಕಿ ಇರದಂತೆಯೂ ಅವರು ಕ್ಷಣಕಾಲದಲ್ಲಿ ಸುಟ್ಟುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಗೋ, ಇವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು; ಜ್ಞಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು; ಅದು ಕಾಯಿಸಿಕೊಳ್ಳುವ ಕೆಂಡವಲ್ಲ, ಮುಂದೆ ಕುಳಿತರೆ ಹಾಯಾಗಿರುವ ಬೆಂಕಿಯೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇರುವರವರೆಲ್ಲರು ಒಣಹುಲ್ಲಿನ ಕೂಳೆಯಂತೆ ಸುಟ್ಟುಬಿಡುವುದವರನು ಉರಿಯುವ ಚಿತೆ ತುತ್ತಾಗುವರವರು ಆ ಜ್ವಾಲಾಗ್ನಿಗೆ ತಪ್ಪದೆ. ಅದು ಚಳಿಗೆ ಮೈಕಾಯಿಸಿಕೊಳ್ಳುವ ಬೆಂಕಿಯಂತಲ್ಲ ಮೈಬೆಚ್ಚಗಾಗಿಸಿಕೊಳ್ಳುವ ಉರಿಯಂತಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಹಾ, ಇವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವದು, ಜ್ವಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು; ಅದು ಕಾಯಿಸಿಕೊಳ್ಳುವ ಕೆಂಡವಲ್ಲ, ಮುಂದೆ ಕುಳಿತರೆ ಹಾಯಾಗಿರುವ ಉರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇಗೋ, ಅವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು. ಜ್ವಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು ಇಲ್ಲವೆ ಕಾಯಿಸಿಕೊಳ್ಳುವುದಕ್ಕೆ ಕೆಂಡವಿರುವುದಿಲ್ಲ. ಹತ್ತಿರ ಕೂತುಕೊಳ್ಳಲು ಬೆಂಕಿಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 47:14
21 ತಿಳಿವುಗಳ ಹೋಲಿಕೆ  

“ಆ ನ್ಯಾಯತೀರ್ಪಿನ ದಿನವು ಬರುತ್ತಿದೆ. ಅದು ಕುಲುಮೆಯಂತೆ ತೀಕ್ಷ್ಣವಾಗಿರುವದು. ಅಹಂಕಾರಿಗಳೆಲ್ಲಾ ಶಿಕ್ಷಿಸಲ್ಪಡುವರು. ದುಷ್ಟಜನರೆಲ್ಲಾ ಹುಲ್ಲಿನಂತೆ ಸುಡುವರು. ಆ ಸಮಯದಲ್ಲಿ ಒಂದು ಪೊದೆ ಬೆಂಕಿಯಲ್ಲಿ ಸುಡುವಂತೆ ಸುಡುವರು. ಆದರೆ ಕೊಂಬೆ ಅಥವಾ ಬೇರು ಯಾವದೂ ಉಳಿಯುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಮಡಕೆಯ ಅಡಿಯಲ್ಲಿ ಉರಿಯುವ ಮುಳ್ಳುಕಡ್ಡಿಗಳಂತೆ ನೀವು ಸಂಪೂರ್ಣವಾಗಿ ನಾಶವಾಗುವಿರಿ. ಜಂಬುಹುಲ್ಲಿನಂತೆ ನೀವು ಸುಟ್ಟು ಭಸ್ಮವಾಗುವಿರಿ.


“ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ.


“ನಾನು ಅವರನ್ನು ದಂಡಿಸುವೆನು. ಅವರು ಒಂದು ಬೆಂಕಿಯಿಂದ ತಪ್ಪಿಸಿಕೊಂಡರೂ ಮತ್ತೊಂದು ಬೆಂಕಿಯಿಂದ ಸುಟ್ಟುಹೋಗುವರು. ನಾನು ಅವರನ್ನು ದಂಡಿಸಿದಾಗ, ನಾನೇ ಯೆಹೋವನೆಂದು ನೀನು ತಿಳಿದುಕೊಳ್ಳುವೆ.


ಈ ಪ್ರಶ್ನೆಗಳಿಗೆ ಉತ್ತರಿಸಿರಿ: ಪೂರ್ವದಿಕ್ಕಿನಿಂದ ಬರುವ ಮನುಷ್ಯನನ್ನು ಎಚ್ಚರಿಸಿದವರು ಯಾರು? ಅವನು ಒಳ್ಳೆಯತನವನ್ನು ತನ್ನೊಂದಿಗಿರಲು ಕೇಳುತ್ತಾನೆ. ತನ್ನ ಖಡ್ಗವನ್ನು ಉಪಯೋಗಿಸಿ ಜನಾಂಗಗಳನ್ನು ಸೋಲಿಸುವನು. ಅವರನ್ನು ಧೂಳಿನಂತೆ ಮಾಡುವನು. ತನ್ನ ಬಿಲ್ಲನ್ನು ಉಪಯೋಗಿಸಿ ರಾಜರನ್ನು ವಶಪಡಿಸಿಕೊಳ್ಳುತ್ತಾನೆ. ಅವರು ಗಾಳಿಯಲ್ಲಿ ತೂರಾಡುವ ಹುಲ್ಲಿನಂತೆ ಓಡಿಹೋಗುವರು.


ಇಸ್ರೇಲಿನ ಬೆಳಕು ಬೆಂಕಿಯಂತಿದೆ. ಪರಿಶುದ್ಧನಾಗಿರುವಾತನು ಬೆಂಕಿಯ ಜ್ವಾಲೆಯಂತಿದ್ದಾನೆ. ಮೊದಲು ಹಣಜಿ ಕಸಕಡ್ಡಿಗಳನ್ನು ಸುಡುವ ಬೆಂಕಿಯಂತೆ ಆತನಿರುವನು.


ನಂತರ ಬಲಿಷ್ಠನಾದ ದೇವದೂತನೊಬ್ಬನು ಒಂದು ದೊಡ್ಡ ಬಂಡೆಯನ್ನು ಎತ್ತಿಕೊಂಡನು. ಆ ಬಂಡೆಯು ಒಂದು ದೊಡ್ಡ ಬೀಸುವ ಕಲ್ಲಿನಂತಿತ್ತು. ದೇವದೂತನು ಆ ಬಂಡೆಯನ್ನು ಸಮುದ್ರದಲ್ಲಿ ಎಸೆದು ಹೀಗೆ ಹೇಳಿದನು: “ಮಹಾನಗರಿಯಾದ ಬಾಬಿಲೋನ್ ಹೀಗೆಯೇ ಕೆಳಕ್ಕೆ ಎಸೆಯಲ್ಪಡುವುದು. ಆ ನಗರಿಯು ಮತ್ತೆಂದಿಗೂ ಕಾಣಿಸುವುದಿಲ್ಲ.


ಒಬ್ಬನು ಪ್ರಪಂಚವನ್ನೆಲ್ಲಾ ಗಳಿಸಿಕೊಂಡು ತನ್ನ ಆತ್ಮವನ್ನೇ ಕಳೆದುಕೊಂಡರೆ ಅದರಿಂದ ಅವನಿಗೇನು ಪ್ರಯೋಜನ? ಮನುಷ್ಯನು ತನ್ನ ಆತ್ಮವನ್ನು ಕೊಂಡುಕೊಳ್ಳಲು ಏನನ್ನು ತಾನೇ ಕೊಡಬಲ್ಲನು?


ಯಾಕೋಬನ ಸಂತತಿಯವರು ಬೆಂಕಿಯಂತಿರುವರು. ಯೋಸೇಫನ ಜನಾಂಗವು ಬೆಂಕಿಯ ನಾಲಗೆಗಳಂತೆ ಇರುವರು. ಆದರೆ ಏಸಾವಿನ ಜನಾಂಗ ಸುಟ್ಟ ಬೂದಿಯಂತಿರುವರು. ಯೆಹೂದದ ಜನರು ಎದೋಮನನ್ನು ಸುಟ್ಟುಹಾಕುವರು. ಯೆಹೂದದ ಜನರು ಎದೋಮನನ್ನು ನಾಶಮಾಡುವರು. ಆಗ ಏಸಾವಿನ ಜನರಲ್ಲಿ ಯಾರೂ ಉಳಿಯುವದಿಲ್ಲ.” ಯಾಕೆಂದರೆ ಇದು ದೇವರಾದ ಯೆಹೋವನ ಮಾತು.


ಕಿವಿಗೊಟ್ಟು ಕೇಳಿರಿ. ಪರ್ವತಗಳ ಮೇಲೆ ಓಡುವ ರಥಗಳ ಶಬ್ದದಂತೆ ಅವರ ಶಬ್ದವು ಕೇಳುತ್ತದೆ. ಬೆಂಕಿಯ ಜ್ವಾಲೆಗಳು ಹೊಟ್ಟನ್ನು ಸುಡುವಂತೆ ಅವರ ಶಬ್ದವು ಕೇಳುತ್ತದೆ. ಬಲಿಷ್ಠರಾದ ಅವರು ಯುದ್ಧಕ್ಕೆ ಸಿದ್ಧರಾಗಿದ್ದಾರೆ.


ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಬಾಬಿಲೋನಿನ ಅಗಲವಾದ ಮತ್ತು ಸುಭದ್ರವಾದ ಗೋಡೆಯನ್ನು ಬೀಳಿಸಲಾಗುವುದು. ಅದರ ಎತ್ತರವಾದ ಬಾಗಿಲುಗಳನ್ನು ಸುಟ್ಟುಹಾಕಲಾಗುವುದು. ಬಾಬಿಲೋನಿನ ಜನರು ನಗರವನ್ನು ರಕ್ಷಿಸಲು ಬಹಳ ಕಷ್ಟಪಡುವರು. ಆದರೆ ಅದು ನಿಷ್ಪ್ರಯೋಜಕವಾಗುವುದು. ನಗರವನ್ನು ರಕ್ಷಿಸುವ ಪ್ರಯತ್ನದಲ್ಲಿ ಅವರು ತುಂಬಾ ಶ್ರಮವಹಿಸುವರು. ಆದರೆ ಅವರು ಕೇವಲ ಅಗ್ನಿಗೆ ಆಹುತಿಯಾಗುವರು.”


ಹಾಯ್ಗಡಗಳನ್ನು ವಶಪಡಿಸಿಕೊಂಡಿದ್ದಾರೆ; ಜವುಗು ನೆಲವು ಉರಿಯುತ್ತಿದೆ. ಬಾಬಿಲೋನಿನ ಎಲ್ಲಾ ಸೈನಿಕರು ಅಂಜಿಕೊಂಡಿದ್ದಾರೆ.”


ಬಾಬಿಲೋನಿನ ಸೈನಿಕರು ಕಾದಾಡುವದನ್ನು ನಿಲ್ಲಿಸಿದ್ದಾರೆ. ಅವರು ತಮ್ಮ ಕೋಟೆಗಳಲ್ಲಿದ್ದಾರೆ. ಅವರ ಬಲ ನಷ್ಟವಾಗಿದೆ. ಅವರು ಭಯಪಟ್ಟ ಹೆಂಗಸಿನಂತಾಗಿದ್ದಾರೆ. ಬಾಬಿಲೋನಿನ ಮನೆಗಳು ಉರಿಯುತ್ತಿವೆ. ಅದರ ಬಾಗಿಲಿನ ಅಗುಳಿಗಳು ಮುರಿದುಹೋಗಿವೆ.


ಇವರು ನೆಲದಲ್ಲಿ ನೆಟ್ಟಿರುವ ಸಸಿಗಳಂತಿರುವರು. ಅವುಗಳ ಬೇರುಗಳು ನೆಲದೊಳಗೆ ಆಳವಾಗಿ ಹೋಗುವ ಮೊದಲೇ ದೇವರ ಉಸಿರಿಗೆ ಅವು ಬಾಡಿ ಸಾಯುವವು; ಗಾಳಿಯು ಒಣಹುಲ್ಲಿನಂತೆ ಅವುಗಳನ್ನು ಬಡಿದುಕೊಂಡು ಹೋಗುವದು.


ಒಂದು ದೊಡ್ಡ ಆವೆಮಣ್ಣಿನ ಭರಣಿ ನಚ್ಚುನೂರಾಗಿ ಹೋಗುವಂತೆ ನೀವಿದ್ದೀರಿ. ಅದರ ತುಂಡುಗಳಿಂದ ಏನೂ ಪ್ರಯೋಜನವಿಲ್ಲ. ಆ ಭರಣಿಯ ಚೂರಿನಿಂದ ಸುಡುವ ಕಲ್ಲಿದ್ದಲನ್ನು ಹೊರತೆಗೆಯಲು ಅಥವಾ ಅದರಿಂದ ನೀರು ಸೇದಲು ಆಗುವದಿಲ್ಲ.”


ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.


ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಕೆಟ್ಟಕಾರ್ಯಗಳನ್ನು ಮಾಡುವವರು ಹೆದರಿಕೆಯಿಂದ ನಡುಗುವರು. ಜನರು, “ನಮ್ಮಲ್ಲಿ ಯಾರು ನಾಶಮಾಡುವ ಈ ಬೆಂಕಿಯ ಜೊತೆ ಜೀವಿಸಬಲ್ಲರು? ನಿತ್ಯಕಾಲಕ್ಕೂ ಸುಡುವ ಈ ಬೆಂಕಿಯ ಬಳಿಯಲ್ಲಿ ಯಾರು ವಾಸಮಾಡಬಲ್ಲರು?” ಎಂದು ಹೇಳುವರು.


ಮರದ ಅರ್ಧಭಾಗವನ್ನು ಬೆಂಕಿಯಲ್ಲಿ ಉರಿಸುವನು; ಆ ಬೆಂಕಿಯಲ್ಲಿ ಮಾಂಸವನ್ನು ಬೇಯಿಸಿ ಹೊಟ್ಟೆತುಂಬಾ ತಿನ್ನುವನು; ಆ ಮರದ ಸೌದೆಯನ್ನು ಸುಟ್ಟು ಚಳಿಕಾಯಿಸಿಕೊಳ್ಳುವನು. ಆಗ ಅವನು, “ಈಗ ನನಗೆ ಬೆಚ್ಚಗಾಯಿತು. ಬೆಂಕಿಯ ಪ್ರಕಾಶದಲ್ಲಿ ನಾನು ನೋಡಬಲ್ಲೆನು!” ಎಂದು ಹೇಳುವನು.


ಆದ್ದರಿಂದ ಜನರು ಹುಲ್ಲನ್ನು ಹುಡುಕುತ್ತಾ ಈಜಿಪ್ಟಿನ ಪ್ರತಿಯೊಂದು ಕಡೆಗೂ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು