ಯೆಶಾಯ 47:15 - ಪರಿಶುದ್ದ ಬೈಬಲ್15 ನೀನು ಕಷ್ಟಪಟ್ಟು ಗಳಿಸಿದ ಸಂಪತ್ತಿಗೆಲ್ಲಾ ಹಾಗೆಯೇ ಆಗುವದು. ನಿನ್ನ ಜೀವಮಾನ ಕಾಲವೆಲ್ಲಾ ವ್ಯವಹಾರ ನಡಿಸಿದ್ದ ಜನರೆಲ್ಲಾ ನಿನ್ನನ್ನು ತೊರೆದುಬಿಡುವರು. ಪ್ರತಿಯೊಬ್ಬನು ತನ್ನ ಸ್ವಂತದಾರಿ ಹಿಡಿಯುವನು. ಆಗ ನಿನ್ನನ್ನು ರಕ್ಷಿಸಲು ಯಾರೂ ಇರುವದಿಲ್ಲ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೀನು ಪ್ರಯಾಸಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು. ನಿನ್ನ ಬಾಲ್ಯದಿಂದ ನಿನ್ನಲ್ಲಿ ವ್ಯಾಪಾರ ಮಾಡಿದವರೆಲ್ಲರೂ; ಚದರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿಬಿಡುವರು. ನಿನ್ನನ್ನು ರಕ್ಷಿಸಲು ಒಬ್ಬನೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇಂತಾಗುವುದು ನೀ ಗೈದ ಪ್ರಯತ್ನಗಳೆಲ್ಲ. ಬಾಲ್ಯದಿಂದ ನಿನ್ನೊಡನೆ ವ್ಯವಹರಿಸಿದವರು ಸರಿವರು ದೂರಕೆ ಹಿಂದಿರುಗುವರೆಲ್ಲರು ತಂತಮ್ಮ ನಾಡಿಗೆ ಅಂತ್ಯದಲಿ ಯಾರೂ ಆಗರು ರಕ್ಷಣೆ ನಿನಗೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನೀನು ಪ್ರಯಾಸಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಬಾಲ್ಯದಿಂದ ನಿನ್ನಲ್ಲಿ ವ್ಯಾಪಾರಮಾಡಿದವರೆಲ್ಲರೂ ಚದರಿ ತಮ್ಮ ತಮ್ಮ ಪ್ರಾಂತಕ್ಕೆ ಹೋಗಿಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನೀನು ಪ್ರಯಾಸಪಟ್ಟವುಗಳೆಲ್ಲಾ ನಿನಗೆ ಹೀಗಾಗುವುವು. ನಿನ್ನ ಬಾಲ್ಯ ಪ್ರಾಯದಿಂದ ನಿನ್ನ ವರ್ತಕರು ಚದರಿ, ತಮ್ಮ ತಮ್ಮ ಪ್ರಾಂತಕ್ಕೆ ಹೋಗಿ ಬಿಡುವರು. ನಿನ್ನನ್ನು ರಕ್ಷಿಸಲು ಒಬ್ಬನೂ ಇರನು. ಅಧ್ಯಾಯವನ್ನು ನೋಡಿ |
ಅವರು ಆ ವಿಗ್ರಹವನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ಹೊರುತ್ತಾರೆ. ಆ ಸುಳ್ಳುದೇವರುಗಳು ನಿಷ್ಪ್ರಯೋಜಕವಾಗಿವೆ. ಜನರೇ ಅವುಗಳನ್ನು ಹೊತ್ತುಕೊಳ್ಳಬೇಕು. ಜನರು ಅವುಗಳನ್ನು ನೆಲದ ಮೇಲೆ ಇಟ್ಟಾಗ ಅವು ಅಲ್ಲಾಡುವದಿಲ್ಲ. ತಮ್ಮ ಸ್ಥಳದಿಂದ ಆ ಸುಳ್ಳುದೇವರುಗಳು ಎದ್ದುಹೋಗುವದಿಲ್ಲ. ಜನರು ಅದರ ಮುಂದೆ ಕೂಗಿಕೊಂಡರೂ ಅವು ಕೇಳಿಸಿಕೊಳ್ಳುವದಿಲ್ಲ. ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳಷ್ಟೇ. ಅವು ಜನರನ್ನು ಅವರ ಕಷ್ಟಗಳಿಂದ ಬಿಡಿಸಲಾರವು.