Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 47:5 - ಪರಿಶುದ್ದ ಬೈಬಲ್‌

5 “ಆದ್ದರಿಂದ ಬಾಬಿಲೋನೇ, ಅಲ್ಲಿ ಸುಮ್ಮನೆ ಕುಳಿತಿರು. ಕಸ್ದೀಯರ ಕುಮಾರಿಯೇ ಕತ್ತಲೆಯೊಳಗೆ ಹೋಗಿ ಇರು, ಯಾಕೆಂದರೆ ನೀನು ‘ಜನಾಂಗಗಳ ರಾಣಿ’ ಎಂದು ಇನ್ನು ಮುಂದೆ ಕರೆಯಲ್ಪಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕಸ್ದೀಯರ ಯುವತಿಯೇ (ನಗರವೇ), ಮೌನವಾಗಿ ಕುಳಿತುಕೋ, ಕತ್ತಲೊಳಗೆ ಹೋಗು. ಏಕೆಂದರೆ ನೀನು ಇನ್ನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಕಸ್ದೀಯ ನಗರಿಯೇ, ಕುಳಿತುಕೊ ಮೌನವಾಗಿ ಕತ್ತಲೆಯೊಳಗೆ ಇನ್ನು ಎನಿಸಿಕೊಳ್ಳೆ ರಾಣಿಯೆಂದು ರಾಜ್ಯಗಳಿಗೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕಸ್ದೀಯರ ನಗರಿಯೇ, ಮೌನವಾಗಿ ಕೂತುಕೋ, ಕತ್ತಲೊಳಗೆ ಹೊಗು, ನೀನು ಇನ್ನು ರಾಜ್ಯಗಳ ರಾಣಿ ಎನಿಸಿಕೊಳ್ಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕಸ್ದೀಯರ ಪುತ್ರಿಯೇ, “ಮೌನವಾಗಿ ಕುಳಿತುಕೋ, ಕತ್ತಲೆಯೊಳಗೆ ಹೋಗು. ಏಕೆಂದರೆ ಇನ್ನು ಮೇಲೆ ನಿನ್ನನ್ನು ರಾಜ್ಯಗಳ ರಾಣಿ ಎಂದು ಕರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 47:5
25 ತಿಳಿವುಗಳ ಹೋಲಿಕೆ  

ಆದರೆ ಯೆಹೋವನಾದರೋ ಹಾಗಲ್ಲ. ಆತನು ತನ್ನ ಪವಿತ್ರ ಆಲಯದಲ್ಲಿದ್ದಾನೆ. ಆದ್ದರಿಂದ ಎಲ್ಲಾ ಭೂನಿವಾಸಿಗಳು ಆತನ ಮುಂದೆ ಮೌನದಿಂದಿದ್ದು ಆತನನ್ನು ಗೌರವಿಸತಕ್ಕದ್ದು.


‘ನಾನು ನಿತ್ಯಕಾಲಕ್ಕೂ ವಾಸಿಸುತ್ತೇನೆ. ನಾನು ಯಾವಾಗಲೂ ರಾಣಿಯಾಗಿಯೇ ಇರುವೆನು’ ಎಂದು ನೀನು ಹೇಳುವೆ. ಅವರಿಗೆ ನೀನು ಮಾಡಿದ ದುಷ್ಟಕ್ರಿಯೆಗಳನ್ನು ನೀನು ಗಮನಿಸಲೇ ಇಲ್ಲ. ಅದರ ಪರಿಣಾಮವನ್ನು ನೀನು ಆಲೋಚಿಸಲೇ ಇಲ್ಲ.


ಅವಳು ತನ್ನನ್ನು ಘನಪಡಿಸಿಕೊಂಡು ವೈಭವದಿಂದ ಜೀವಿಸಿದಳು. ಆದ್ದರಿಂದ ಅದಕ್ಕೆ ತಕ್ಕಂತೆ ಸಂಕಟವನ್ನೂ ದುಃಖವನ್ನೂ ಅವಳಿಗೆ ಬರಮಾಡಿರಿ. ‘ನಾನು ನನ್ನ ಸಿಂಹಾಸನದ ಮೇಲೆ ಕುಳಿತಿರುವ ರಾಣಿ. ನಾನು ವಿಧವೆಯಲ್ಲ, ನಾನು ಎಂದೆಂದಿಗೂ ದುಃಖಿಸುವುದಿಲ್ಲ’ ಎಂದು ಅವಳು ತನಗೆ ತಾನೇ ಹೇಳಿಕೊಳ್ಳುತ್ತಾಳೆ.


ನೀನು ನೋಡಿದ ಸ್ತ್ರೀಯು ಲೋಕದ ರಾಜರುಗಳನ್ನು ಆಳುವ ಮಹಾನಗರಿಯಾಗಿದ್ದಾಳೆ.”


ಇವರು ಸಮುದ್ರದಲ್ಲಿನ ಭೀಕರವಾದ ಅಲೆಗಳಂತಿದ್ದಾರೆ. ಈ ಅಲೆಗಳು ನೊರೆಯನ್ನು ಕಾರುವಂತೆ ಇವರು ನಾಚಿಕೆಯಿಲ್ಲದ ಕೆಲಸಗಳನ್ನು ಮಾಡುತ್ತಾರೆ. ಈ ಜನರು ಆಕಾಶದಲ್ಲಿ ಅಲೆಯುವ ನಕ್ಷತ್ರಗಳಂತಿದ್ದಾರೆ. ಇವರಿಗಾಗಿ ಶಾಶ್ವತವಾದ ಕಾರ್ಗತ್ತಲಿನ ಸ್ಥಳವನ್ನು ಕಾದಿರಿಸಲಾಗಿದೆ.


ಎಲ್ಲರೂ ಮೌನವಾಗಿರಿ. ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಹೊರಬರುತ್ತಿದ್ದಾನೆ.


ಒಂದು ಕಾಲದಲ್ಲಿ ಜೆರುಸಲೇಮ್ ಜನಭರಿತವಾದ ನಗರವಾಗಿತ್ತು. ಆದರೆ ಈಗ ಆ ನಗರವು ಹಾಳುಬಿದ್ದಿದೆ. ಒಂದು ಕಾಲದಲ್ಲಿ ಜೆರುಸಲೇಮ್ ಅತ್ಯಂತ ದೊಡ್ಡನಗರಗಳಲ್ಲಿ ಒಂದಾಗಿತ್ತು. ಆದರೆ ಈಗ ಅದು ವಿಧವೆಯಂತೆ ಆಗಿದೆ. ಒಂದು ಕಾಲದಲ್ಲಿ ಅವಳು ಎಲ್ಲ ನಗರಗಳ ನಡುವೆ ರಾಜಕುಮಾರಿಯಂತೆ ಇದ್ದಳು. ಆದರೆ ಈಗ ಅವಳನ್ನು ದಾಸಿಯನ್ನಾಗಿ ಮಾಡಲಾಗಿದೆ.


ಆ ಸ್ಥಳಗಳಲ್ಲಿ ನಾನು ಸಂತೋಷದ ಮತ್ತು ಸಂಭ್ರಮದ ಧ್ವನಿಗಳು ಕೇಳಿಬರದಂತೆ ಮಾಡುವೆನು. ವಧುವರರ ಸಂತೋಷದ ಧ್ವನಿಗಳು ಇನ್ನು ಮೇಲೆ ಕೇಳಿಬರುವದಿಲ್ಲ. ನಾನು ಬೀಸುವಕಲ್ಲಿನ ಸದ್ದನ್ನು ತೆಗೆದುಕೊಳ್ಳುವೆನು. ನಾನು ದೀಪದ ಬೆಳಕನ್ನು ತೆಗೆದುಕೊಳ್ಳುವೆನು.


“ನಾವು ಇಲ್ಲಿ ಸುಮ್ಮನೆ ಕುಳಿತುಕೊಂಡಿರುವುದೇಕೆ? ಬನ್ನಿ, ನಾವು ಭದ್ರವಾದ ಪಟ್ಟಣಗಳಿಗೆ ಓಡಿಹೋಗೋಣ. ನಮ್ಮ ದೇವರಾದ ಯೆಹೋವನು ನಮ್ಮನ್ನು ಸಾಯುವಂತೆ ಮಾಡಿದರೆ ಅಲ್ಲಿಯೇ ಸತ್ತುಹೋಗೋಣ. ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ. ಆದ್ದರಿಂದ ಆತನು ನಮಗೆ ಕುಡಿಯಲು ವಿಷಮಿಶ್ರಿತ ನೀರನ್ನು ಕೊಟ್ಟಿದ್ದಾನೆ.


“ಕನ್ನಿಕೆಯೇ, ಬಾಬಿಲೋನಿನ ಕುಮಾರಿಯೇ ಕೆಳಕ್ಕಿಳಿದು ಧೂಳಿನ ಮೇಲೆ ಕುಳಿತಿಕೊ. ಕಸ್ದೀಯರ ಕುಮಾರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೊ! ಈಗ ನೀನು ಯಜಮಾನಿಯಲ್ಲ. ನೀನು ಕೋಮಲವಾದ ತರುಣಿ ಎಂದು ಜನರು ನಿನ್ನ ಬಗ್ಗೆ ಹೇಳುವದಿಲ್ಲ.


ಯೆಹೋವನು ಹೇಳುವುದೇನೆಂದರೆ: “ನಾನು ಬಾಬಿಲೋನನ್ನು ಪ್ರಾಣಿಗಳ ವಾಸಸ್ಥಳವನ್ನಾಗಿ ಬದಲಾಯಿಸುವೆನು. ಆ ಸ್ಥಳವು ಜವುಗು ನೆಲವಾಗಿರುವುದು. ‘ನಾಶನವೆಂಬ ಪೊರಕೆಯಿಂದ’ ಅದನ್ನು ಗುಡಿಸುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಆ ಸಮಯದಲ್ಲಿ ಬಾಬಿಲೋನಿನ ಅರಸನ ಬಗ್ಗೆ ನೀವು ಹೀಗೆ ಹಾಡುವಿರಿ: ಅರಸನು ನಮ್ಮನ್ನಾಳುವಾಗ ಬಹಳ ಕ್ರೂರವಾಗಿದ್ದನು. ಆದರೆ ಈಗ ಅವನ ಆಳ್ವಿಕೆಯು ಅಂತ್ಯವಾಯಿತು.


ಆಕಾಶವು ಕತ್ತಲಾಗುವದು; ಸೂರ್ಯ, ಚಂದ್ರ, ನಕ್ಷತ್ರಾದಿಗಳು ಪ್ರಕಾಶವನ್ನು ಕಳೆದುಕೊಳ್ಳುವವು.


ದೇವರು ಹೀಗೆನ್ನುವನು: “ಹೋರಾಡುವುದನ್ನು ನಿಲ್ಲಿಸಿ, ನಾನೇ ದೇವರೆಂಬುದನ್ನು ಕಲಿತುಕೊಳ್ಳಿ! ನಾನು ಜನಾಂಗಗಳನ್ನು ಸೋಲಿಸುವೆನು! ಇಡೀ ಲೋಕವನ್ನು ಹತೋಟಿಗೆ ತೆಗೆದುಕೊಳ್ಳುವೆನು!”


ಯೆಹೋವನೇ, ನಾನು ನಿನ್ನಲ್ಲಿ ಪ್ರಾರ್ಥಿಸಿದೆನು. ಆದ್ದರಿಂದ ನಾನು ನಿರಾಶನಾಗುವುದಿಲ್ಲ. ಕೆಡುಕರಾದರೋ ನಿರಾಶರಾಗುವರು. ಅವರು ಮೌನವಾಗಿ ಸಮಾಧಿಗೆ ಹೋಗುವರು.


ಯೆಹೋವನು ತನ್ನ ಪವಿತ್ರ ಜನರನ್ನು ರಕ್ಷಿಸುವನು. ಆತನು ಅವರನ್ನು ಎಡವದಂತೆ ಕಾಪಾಡುವನು. ಆದರೆ ಕೆಟ್ಟವರು ನಾಶವಾಗಿ ಕತ್ತಲೆಯಲ್ಲಿ ಬೀಳುವರು. ಅವರ ಶಕ್ತಿ ಅವರಿಗೆ ಜಯನೀಡಲಾರದು.


ನೋಡು, ಅವರು ಬರುತ್ತಿದ್ದಾರೆ. ಅಶ್ವದಳಗಳು ಸಾಲುಸಾಲಾಗಿಯೂ ಬರುತ್ತಿವೆ” ಎಂದು ಕೂಗಿಕೊಂಡನು. ಆಗ ಒಬ್ಬ ದೂತನು, “ಬಾಬಿಲೋನಿಗೆ ಸೋಲಾಯಿತು. ಬಾಬಿಲೋನು ನೆಲಕ್ಕೆ ಅಪ್ಪಳಿಸಲ್ಪಟ್ಟಿತು. ಅದರ ದೇವ ದೇವತೆಯರ ವಿಗ್ರಹಗಳೆಲ್ಲಾ ನೆಲದ ಮೇಲೆ ಚೂರುಚೂರಾಗಿ ಬಿದ್ದಿವೆ” ಎಂದು ಹೇಳಿದನು.


ಸಮುದ್ರ ತೀರದಲ್ಲಿ ವಾಸಿಸುವ ಜನರೇ, ನೀವು ಸ್ತಬ್ಧರಾಗಿದ್ದು ದುಃಖಿಸಿರಿ. ತೂರು “ಚೀದೋನಿನ ವ್ಯಾಪಾರಿ” ಆಗಿತ್ತು. ಆ ನಗರವು ವರ್ತಕರನ್ನು ಸಮುದ್ರದಾಚೆ ಕಳುಹಿಸಿತು. ಆ ಜನರು ನಿನ್ನನ್ನು ಐಶ್ವರ್ಯಗಳಿಂದ ತುಂಬಿಸಿದರು.


ಚೀಯೋನಿನ ಹಿರಿಯರು ನೆಲದ ಮೇಲೆ ಮೌನವಾಗಿ ಕುಳಿತುಕೊಂಡಿದ್ದಾರೆ. ಅವರು ತಮ್ಮ ತಲೆಗಳ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ. ಜೆರುಸಲೇಮಿನ ತರುಣಿಯರು ದುಃಖದಿಂದ ತಲೆ ತಗ್ಗಿಸಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು