ಯೆಶಾಯ 47:6 - ಪರಿಶುದ್ದ ಬೈಬಲ್6 “ನನ್ನ ಜನರ ಮೇಲೆ ನಾನು ಸಿಟ್ಟಿಗೆದ್ದಿದ್ದೆನು. ಅವರು ನನಗೆ ಸೇರಿದವರಾಗಿದ್ದಾರೆ. ಆದರೆ ನಾನು ಅವರ ಮೇಲೆ ಸಿಟ್ಟಾದೆನು. ಆದ್ದರಿಂದ ನಾನು ಅವರನ್ನು ತಳ್ಳಿಬಿಟ್ಟೆನು. ಅವರನ್ನು ನಿನಗೆ ಕೊಟ್ಟೆನು; ನೀನು ಅವರನ್ನು ಶಿಕ್ಷಿಸಿದೆ. ಅವರ ಮೇಲೆ ಕರುಣೆ ತೋರಿಸಲಿಲ್ಲ. ವೃದ್ಧರೂ ಕಷ್ಟದ ಕೆಲಸ ಮಾಡುವಂತೆ ಮಾಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗೆಡಿಸಿದೆನು. ಅವರನ್ನು ನಿನ್ನ ಕೈವಶ ಮಾಡಳು, ನೀನು ಅವರನ್ನು ಕರುಣಿಸದೆ ಬಹುಭಾರವಾದ ನೊಗವನ್ನು ಹೊರಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ನಾ ರೋಷಗೊಂಡು ನನ್ನ ಜನರನ್ನೇ ನಿನ್ನ ಕೈವಶಮಾಡಿದೆ ನನಗೆ ಸ್ವಂತವಾದವರನ್ನೇ ಈ ಪರಿ ಹೊಲೆಗೆಡಿಸಿದೆ. ನೀನಾದರೋ ಕರುಣೆ ತೋರಿಸದೆಹೋದೆ ಮುದುಕರ ಮೇಲೂ ತೂಕದ ನೊಗವನು ಹೊರಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಾನು ನನ್ನ ಜನರ ಮೇಲೆ ರೋಷಗೊಂಡು ಅವರನ್ನು ನಿನ್ನ ಕೈವಶ ಮಾಡಿ ನನ್ನ ಸ್ವಾಸ್ತ್ಯವನ್ನು ಹೊಲೆಗೆಡಿಸಿದೆನು; ನೀನು ಅವರನ್ನು ಹೇಗೂ ಕರುಣಿಸದೆ ಮುದುಕರ ಮೇಲೆಯೂ ಬಹುಭಾರವಾದ ನೊಗವನ್ನು ಹೊರಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸೊತ್ತನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು. ನೀನು ಅವರಿಗೆ ಕರುಣೆಯನ್ನು ತೋರಿಸದೆ, ವೃದ್ಧರ ಮೇಲೆಯೂ, ಬಹು ಭಾರವಾದ ನೊಗವನ್ನು ಹೊರಿಸಿದೆ. ಅಧ್ಯಾಯವನ್ನು ನೋಡಿ |
ಆಗ ಯೆಹೋವನ ಪ್ರವಾದಿಯವರಲ್ಲೊಬ್ಬನು ಅಲ್ಲಿದ್ದನು. ಅವನ ಹೆಸರು ಓದೇದ್. ಓದೇದನು ಸಮಾರ್ಯಕ್ಕೆ ಬರುತ್ತಿದ್ದ ಇಸ್ರೇಲ್ ಸೈನ್ಯದವರನ್ನು ಎದುರುಗೊಂಡು ಅವರಿಗೆ, “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಯೆಹೂದದ ಜನರು ಸೋತುಹೋಗುವಂತೆ ಮಾಡಿದನು. ಯಾಕೆಂದರೆ ಆತನು ಅವರ ಮೇಲೆ ಸಿಟ್ಟಿಗೆದ್ದಿದ್ದನು. ನೀವು ಯೆಹೂದದ ಜನರನ್ನು ನಿಷ್ಕರುಣೆಯಿಂದ ಕೊಂದುಹಾಕಿದಿರಿ. ಈಗ ದೇವರು ನಿಮ್ಮ ಮೇಲೆ ಕೋಪಗೊಂಡಿದ್ದಾನೆ.
ನಿನ್ನ ವ್ಯಾಪಾರವು ನಿನಗೆ ಐಶ್ವರ್ಯವನ್ನು ತಂದಿತು. ಆದರೆ ಅದರೊಂದಿಗೆ ನಾನಾ ದುಷ್ಟತ್ವಗಳು ನಿನ್ನೊಳಗೆ ಬಂದು ನೀನು ಪಾಪ ಮಾಡಿದೆ. ಆಗ ನಾನು ನಿನ್ನನ್ನು ಅಶುದ್ಧನೆಂದು ಪರಿಗಣಿಸಿ ನಿನ್ನನ್ನು ದೇವರ ಪರ್ವತದಿಂದ ದಬ್ಬಿಬಿಟ್ಟೆನು. ನೀನು ನನ್ನ ಕೆರೂಬಿಯರಲ್ಲಿ ವಿಶೇಷವಾದವನಾಗಿದ್ದೆ. ನಿನ್ನ ರೆಕ್ಕೆಗಳು ನನ್ನ ಸಿಂಹಾಸನದ ಮೇಲೆ ಚಾಚಿರುತ್ತಿದ್ದವು. ಆದರೆ ಬೆಂಕಿಯಂತೆ ಹೊಳೆಯುವ ರತ್ನಾಭರಣಗಳನ್ನೆಲ್ಲಾ ತೆಗೆದಿಡಲು ನಿನ್ನನ್ನು ಬಲವಂತಪಡಿಸಿದೆ.
ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆ ಆಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕೆಡವಿಬಿಡುವೆನು. ನೀವು ಬಿಟ್ಟುಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.
ಅವರ ಸೈನಿಕರ ಹತ್ತಿರ ಬಿಲ್ಲುಗಳು ಮತ್ತು ಭರ್ಜಿಗಳು ಇವೆ. ಆ ಸೈನಿಕರು ಕ್ರೂರಿಗಳಾಗಿದ್ದಾರೆ. ಅವರಿಗೆ ದಯೆದಾಕ್ಷಿಣ್ಯ ಇಲ್ಲ. ಆ ಸೈನಿಕರು ತಮ್ಮ ಕುದುರೆಗಳ ಮೇಲೆ ಬರುತ್ತಿದ್ದಾರೆ. ಅವರ ಧ್ವನಿ ಆರ್ಭಟಿಸುವ ಸಮುದ್ರದಂತಿದೆ. ಅವರು ಯುದ್ಧಕ್ಕೆ ಸಿದ್ಧರಾಗಿ ತಮ್ಮತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದಾರೆ. ಬಾಬಿಲೋನ್ ನಗರವೇ, ಅವರು ನಿನ್ನ ಮೇಲೆ ಧಾಳಿಮಾಡಲು ಸಿದ್ಧರಾಗಿದ್ದಾರೆ.
“ನಾನು ನರಳಾಡುತ್ತಿದ್ದೇನೆ. ಅದಕ್ಕಾಗಿ ನನ್ನ ಮಾತುಗಳಿಗೆ ಕಿವಿಗೊಡು; ನನ್ನನ್ನು ಸಂತೈಸುವವರು ಯಾರೂ ಇಲ್ಲ. ನನ್ನ ಎಲ್ಲ ವೈರಿಗಳು ನನ್ನ ಕಷ್ಟಗಳ ಬಗ್ಗೆ ಕೇಳಿದ್ದಾರೆ. ಅವರು ಸಂತೋಷಪಡುತ್ತಿದ್ದಾರೆ. ನೀನು ನನಗೆ ಈ ಸ್ಥಿತಿಯನ್ನು ತಂದದ್ದಕ್ಕಾಗಿ ಅವರು ಸಂತೋಷಪಡುತ್ತಲಿದ್ದಾರೆ. ನೀನು ಪ್ರಕಟಿಸಿದ ಆ ದಿನವನ್ನು ಬರಮಾಡು. ಆ ದಿನ ನನ್ನ ಶತ್ರುಗಳ ಸ್ಥಿತಿ ನನ್ನ ಇಂದಿನ ಸ್ಥಿತಿಯಂತೆ ಆಗಲಿ.
ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.