ಯೆಶಾಯ 47:7 - ಪರಿಶುದ್ದ ಬೈಬಲ್7 ‘ನಾನು ನಿತ್ಯಕಾಲಕ್ಕೂ ವಾಸಿಸುತ್ತೇನೆ. ನಾನು ಯಾವಾಗಲೂ ರಾಣಿಯಾಗಿಯೇ ಇರುವೆನು’ ಎಂದು ನೀನು ಹೇಳುವೆ. ಅವರಿಗೆ ನೀನು ಮಾಡಿದ ದುಷ್ಟಕ್ರಿಯೆಗಳನ್ನು ನೀನು ಗಮನಿಸಲೇ ಇಲ್ಲ. ಅದರ ಪರಿಣಾಮವನ್ನು ನೀನು ಆಲೋಚಿಸಲೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 “ನಾನು ಶಾಶ್ವತವಾದ ರಾಣಿ” ಎಂದು ನೀನು ಅಂದುಕೊಂಡು ಅವರ ಹಿಂಸೆಗಳನ್ನು ಮನಸ್ಸಿಗೆ ತಾರದೆ, ಅವುಗಳಿಂದ ನಿನಗಾಗುವ ಪರಿಣಾಮವನ್ನು ನೆನಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನನ್ನ ಜನರ ಹಿಂಸೆಬಾಧೆಗಳನ್ನು ಗಮನಿಸದೆ ಬರಲಿರುವ ಪರಿಣಾಮವನ್ನು ನೆನೆಸಿಕೊಳ್ಳದೆ ನೀನೇ ಶಾಶ್ವತ ರಾಣಿಯೆಂದು ಮೆರೆದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾನು ಶಾಶ್ವತವಾದ ರಾಣಿ ಎಂದು ನೀನು ಅಂದುಕೊಂಡು ಅವರ ಹಿಂಸೆಗಳನ್ನು ಮನಸ್ಸಿಗೆ ತಾರದೆ, ಅವುಗಳಿಂದ ನಿನಗಾಗುವ ಪರಿಣಾಮವನ್ನು ನೆನಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ‘ನಾನು ಶಾಶ್ವತವಾದ ರಾಣಿ’ ಎಂದು ನೀನು ಅಂದುಕೊಂಡದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೊಳ್ಳಲಿಲ್ಲ. ಅವರ ಅಂತ್ಯವನ್ನೂ ನೆನಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |
ಕನಸು ಕಂಡ ಹನ್ನೆರಡು ತಿಂಗಳುಗಳಾದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಬಾಬಿಲೋನಿನಲ್ಲಿದ್ದ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಮಾಳಿಗೆಯ ಮೇಲಿದ್ದಾಗ ಅರಸನು, “ಈ ಬಾಬಿಲೋನ್ ನಗರವನ್ನು ನೋಡಿ, ನಾನು ಈ ಮಹಾನಗರವನ್ನು ಕಟ್ಟಿದೆ. ಇದು ನನ್ನ ಅರಮನೆ. ನಾನು ನನ್ನ ಸಾಮರ್ಥ್ಯದಿಂದ ಈ ಅರಮನೆಯನ್ನು ಕಟ್ಟಿದೆ. ನಾನು ಎಂಥಾ ದೊಡ್ಡವನು ಎಂದು ಲೋಕಕ್ಕೆ ತೋರಿಸಲು ನಾನು ಈ ಅರಮನೆಯನ್ನು ಕಟ್ಟಿದೆ” ಎಂದು ತನ್ನಷ್ಟಕ್ಕೆ ತಾನೇ ಹೇಳಿಕೊಳ್ಳುತ್ತಿದ್ದನು.