8 ಆದ್ದರಿಂದ ‘ಕೋಮಲ ಸ್ತ್ರೀಯೇ,’ ನನ್ನ ಮಾತನ್ನು ಕೇಳು. ಸುರಕ್ಷಿತಳಾಗಿರುವೆ ಎಂದು ನೆನಸಿಕೊಂಡು ಹೀಗೆ ನಿನ್ನೊಳಗೆ, ‘ನಾನೇ ಮಹಾವ್ಯಕ್ತಿ. ನನ್ನಂಥ ಮಹಾವ್ಯಕ್ತಿ ಯಾರೂ ಇಲ್ಲ. ನಾನೆಂದಿಗೂ ವಿಧವೆಯಾಗುವದಿಲ್ಲ. ಯಾವಾಗಲೂ ನನಗೆ ಮಕ್ಕಳಿರುವರು’ ಎಂದುಕೊಳ್ಳುವೆ.
8 “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ, ನಾನು ವಿಧವೆಯಾಗಿ ಕುಳಿತುಕೊಳ್ಳುವುದಿಲ್ಲ, ಪುತ್ರಶೋಕವನ್ನು ಅನುಭವಿಸುವುದಿಲ್ಲ” ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.
8 ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ, ನಾನು ವಿಧವೆಯಾಗಿ ಕೂತುಕೊಳ್ಳುವದಿಲ್ಲ, ಪುತ್ರಶೋಕವನ್ನು ಅನುಭವಿಸುವದಿಲ್ಲ ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು -
8 “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ. ‘ನಾನು ವಿಧವೆಯಾಗಿ ಕೂತುಕೊಳ್ಳುವುದಿಲ್ಲ. ಪುತ್ರ ಶೋಕವನ್ನು ಅನುಭವಿಸುವುದಿಲ್ಲ,’ ಎನ್ನುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.
ಈ ನಿನೆವೆಯು ಸಂತೋಷಭರಿತ ನಗರಿಯಾಗಿದೆ. ಅದರ ನಿವಾಸಿಗಳು ತಾವು ಸುರಕ್ಷಿತರಾಗಿದ್ದೇವೆಂದು ತಿಳಿದಿದ್ದಾರೆ. ನಿನೆವೆಯು ಲೋಕದಲ್ಲಿ ಅತ್ಯಂತ ಮಹತ್ವಪೂರ್ಣ ಸ್ಥಳವೆಂದು ತಿಳಿದಿದ್ದಾರೆ. ಅವರು ಬಹಳ ಗರ್ವಪಡುತ್ತಾರೆ. ಆದರೆ ಆ ನಗರವು ನಾಶವಾಗುವದು. ಕಾಡುಮೃಗಗಳ ಹಕ್ಕೆಯಾಗುವದು. ದಾಟಿಹೋಗುವ ಜನರು, ತಮ್ಮ ಆಶ್ಚರ್ಯವನ್ನು ಸಿಳ್ಳುಹಾಕಿ ತಲೆಯಾಡಿಸಿ “ಎಂಥಾ ದುರ್ಗತಿ” ಎಂದು ಉದ್ಗರಿಸುವರು.
“ಬಾಬಿಲೋನೇ, ನೀನು ಉಲ್ಲಾಸದಲ್ಲಿರುವೆ ಮತ್ತು ಸಂತೋಷದಲ್ಲಿರುವೆ. ನೀನು ನನ್ನ ಪ್ರದೇಶವನ್ನು ತೆಗೆದುಕೊಂಡೆ. ನೀನು ಕಣತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿರುವೆ. ನಿನ್ನ ನಗು ಕುದುರೆಗಳ ಸಂತೋಷಭರಿತ ಕೆನೆತದಂತೆ ಇದೆ.
ನೀನು ದುಷ್ಕೃತ್ಯಗಳನ್ನು ಮಾಡುತ್ತಿರುವೆ, ಆದರೂ ನೀನು ಸುರಕ್ಷಿತಳಾಗಿದ್ದೇನೆ ಎಂದುಕೊಂಡಿರುವೆ. ‘ನಾನು ಮಾಡಿದ ದುಷ್ಕೃತ್ಯಗಳನ್ನು ಯಾರೂ ನೋಡುವದಿಲ್ಲ’ ಎಂದು ನೀನು ಭಾವಿಸಿಕೊಂಡಿರುವೆ. ನಿನ್ನ ಜ್ಞಾನ, ನಿನ್ನ ತಿಳುವಳಿಕೆ ನಿನ್ನನ್ನು ಕಾಪಾಡುತ್ತವೆ ಎಂದು ತಿಳಿದುಕೊಂಡಿರುವೆ. ‘ನಾನೇ ಮಹಾವ್ಯಕ್ತಿ, ನನ್ನಂಥ ಮಹಾವ್ಯಕ್ತಿ ಬೇರೆ ಯಾರೂ ಇಲ್ಲ’ ಎಂದು ನೀನು ಅಂದುಕೊಳ್ಳುವೆ.
ನಾನೊಬ್ಬನೇ ದೇವರೆಂದು ಎಲ್ಲರೂ ತಿಳಿದುಕೊಳ್ಳಲಿ ಎಂದು ನಾನು ಇದನ್ನೆಲ್ಲಾ ಮಾಡುತ್ತಿದ್ದೇನೆ. ಪೂರ್ವದಿಂದ ಪಶ್ಚಿಮದ ತನಕ ಜನರೆಲ್ಲರೂ ನಾನೇ ದೇವರೆಂದೂ ನನ್ನ ಹೊರತು ಬೇರೆ ದೇವರಿಲ್ಲವೆಂದೂ ತಿಳಿದುಕೊಳ್ಳುವರು.
ದೇವರೆಂದು ಕರೆಸಿಕೊಳ್ಳುವ ಏನನ್ನೇ ಆಗಲಿ, ಜನರು ಪೂಜಿಸುವ ಯಾವುದನ್ನೇ ಆಗಲಿ ಅಧರ್ಮಸ್ವರೂಪನು ವಿರೋಧಿಸಿ, ಅವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡು ದೇವರ ಆಲಯದೊಳಕ್ಕೆ ಹೋಗಿ ಕುಳಿತುಕೊಂಡು ತಾನೇ ದೇವರೆಂದು ಹೇಳಿಕೊಳ್ಳುತ್ತಾನೆ.
“ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.
ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.
ಬಾಬಿಲೋನ್ ನಗರವು ಗಗನ ಚುಂಬಿಯಾಗಿ ಬೆಳೆಯಬಹುದು. ಅದು ತನ್ನ ಕೋಟೆಗಳನ್ನು ಭದ್ರಪಡಿಸಿಕೊಳ್ಳಬಹುದು. ಆದರೆ ಆ ನಗರದ ವಿರುದ್ಧ ಯುದ್ಧಮಾಡಲು ನಾನು ಜನರನ್ನು ಕಳುಹಿಸುತ್ತೇನೆ. ಆ ಜನರು ಅದನ್ನು ನಾಶಮಾಡುವರು.” ಇದು ಯೆಹೋವನ ನುಡಿ.
ಯೆಹೋವನು ದೇವರಾಗಿದ್ದಾನೆ. ಆತನು ಭೂಮ್ಯಾಕಾಶಗಳನ್ನು ಉಂಟುಮಾಡಿದ್ದಾನೆ. ಆತನು ಭೂಮಿಯನ್ನು ಅದರ ಸ್ಥಾನದಲ್ಲಿ ಇಟ್ಟಿದ್ದಾನೆ. ಆತನು ಈ ಲೋಕವನ್ನು ಸೃಷ್ಟಿಸಿದ್ದು ಅದು ಶೂನ್ಯವಾಗಿರಲೆಂದಲ್ಲ. ಅದು ಜನಭರಿತವಾಗಿರಲೆಂದೇ ಸೃಷ್ಟಿಸಿದನು. “ನಾನೇ ಯೆಹೋವನು, ನನ್ನ ಹೊರತು ಬೇರೆ ದೇವರುಗಳಿಲ್ಲ.
ಮೀಕನು ಮಾಡಿಸಿದ ವಿಗ್ರಹಗಳನ್ನು ದಾನ್ಯರು ತೆಗೆದುಕೊಂಡರು. ಅವರು ಮೀಕನ ಜೊತೆಗಿದ್ದ ಯಾಜಕನನ್ನು ಸಹ ತೆಗೆದುಕೊಂಡು ಹೋದರು. ಅವರು ಲಯಿಷಿಗೆ ಬಂದು ಅಲ್ಲಿನ ಜನರ ಮೇಲೆ ಧಾಳಿಮಾಡಿದರು. ಆ ಜನರು ಶಾಂತಿಯಿಂದ ಇದ್ದರು. ಅವರು ಧಾಳಿಯನ್ನು ನಿರೀಕ್ಷಿಸಿರಲಿಲ್ಲ. ದಾನ್ಯರು ತಮ್ಮ ಖಡ್ಗಗಳಿಂದ ಆ ಜನರನ್ನು ಕೊಂದುಹಾಕಿದರು. ಆಮೇಲೆ ಆ ನಗರವನ್ನು ಸುಟ್ಟುಬಿಟ್ಟರು.
ಆ ಐದು ಜನರು ಹೊರಟರು. ಅವರು ಲಯಿಷ್ ನಗರಕ್ಕೆ ಬಂದರು. ಅಲ್ಲಿಯ ಜನರು ಸುರಕ್ಷಿತವಾಗಿರುವುದನ್ನು ಅವರು ನೋಡಿದರು. ಚೀದೋನ್ಯರು ಅವರನ್ನು ಆಳುತ್ತಿದ್ದರು. ಎಲ್ಲವೂ ಶಾಂತವಾಗಿತ್ತು; ಸಮಾಧಾನಕರವಾಗಿತ್ತು; ಸುಖಕರವಾಗಿತ್ತು. ಸಮೀಪದಲ್ಲಿ ಅವರನ್ನು ಪೀಡಿಸುವ ಶತ್ರುಗಳು ಇರಲಿಲ್ಲ. ಅವರು ಚೀದೋನ್ ನಗರದಿಂದ ಬಹಳ ದೂರ ಇದ್ದರು. ಅವರು ಆರಾಮಿನ ಜನರೊಡನೆ ಯಾವ ಒಪ್ಪಂದವನ್ನೂ ಇಟ್ಟುಕೊಂಡಿರಲಿಲ್ಲ.
ಸ್ತ್ರೀಯರೇ, ನೀವೀಗ ಶಾಂತರಾಗಿದ್ದೀರಿ. ಆದರೆ ನೀವು ಭಯಪಡುವವರಾಗಿರಬೇಕು. ನೀವು ಈಗ ಸುರಕ್ಷಿತರಾಗಿದ್ದೀರಿ, ಆದರೆ ನೀವು ಚಿಂತಿಸುವವರಾಗಿರಬೇಕು. ನಿಮ್ಮ ಒಳ್ಳೆಯ ವಸ್ತ್ರಗಳನ್ನು ತೆಗೆದಿಟ್ಟು ಶೋಕಬಟ್ಟೆಯನ್ನು ಧರಿಸಿರಿ. ಆ ಬಟ್ಟೆಗಳನ್ನು ನಿಮ್ಮ ಸೊಂಟಕ್ಕೆ ಕಟ್ಟಿಕೊಳ್ಳಿರಿ.
“ಒಂದು ಜನಾಂಗವು ಯಾರೂ ತಮ್ಮನ್ನು ಸೋಲಿಸಲಾರರು ಎಂದು ನೆಮ್ಮದಿಯಿಂದಲೂ ಸಮಾಧಾನದಿಂದಲೂ ಇದೆ. ಅದು ತನ್ನ ರಕ್ಷಣೆಗಾಗಿ ಒಂದು ಕೋಟೆಯನ್ನಾಗಲಿ ಒಂದು ಬಾಗಿಲನ್ನಾಗಲಿ ಹೊಂದಿಲ್ಲ. ಆ ಜನರು ಪ್ರತ್ಯೇಕವಾಗಿ ವಾಸವಾಗಿದ್ದಾರೆ. ಆ ಜನಾಂಗದ ಮೇಲೆ ಧಾಳಿ ಮಾಡಿರಿ.” ಎಂದು ಯೆಹೋವನು ಹೇಳಿದನು.
“ನರಪುತ್ರನೇ, ತೂರಿನ ರಾಜನಿಗೆ ಹೀಗೆ ಹೇಳು, ‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “‘ನೀನು ಬಹಳ ಹೆಮ್ಮೆಯುಳ್ಳವನು. “ನಾನು ದೇವರು ಎಂದು ಹೇಳುವೆ. ಸಾಗರದ ಮಧ್ಯದಲ್ಲಿ ದೇವರುಗಳ ಸಿಂಹಾಸನದಲ್ಲಿ ನಾನು ಕೂತಿರುತ್ತೇನೆ ಎಂದು ಅನ್ನುವೆ.” “‘ಆದರೆ ನೀನು ಮನುಷ್ಯನು, ದೇವರಲ್ಲ. ನೀನು ದೇವರೆಂದು ನೀನೇ ನೆನಸಿಕೊಳ್ಳುವೆ.
“‘ಆ ಸಮಯದಲ್ಲಿ, ನಾನು ಸಂದೇಶವಾಹಕರನ್ನು ಕಳುಹಿಸುವೆನು. ಅವರು ಇಥಿಯೋಪ್ಯಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿ ಕೆಟ್ಟ ಸುದ್ದಿಯನ್ನು ಒಯ್ಯುವರು. ಇಥಿಯೋಪ್ಯ ಈಗ ಸುರಕ್ಷಿತವಾಗಿರುವುದು. ಆದರೆ ಈಜಿಪ್ಟ್ ಶಿಕ್ಷಿಸಲ್ಪಟ್ಟಾಗ ಇಥಿಯೋಪ್ಯದ ಜನರು ಭಯದಿಂದ ನಡುಗುವರು. ಆ ಸಮಯವು ಬರುವದು.’”
ದೇವರು ಹೇಳಿದ್ದೇನೆಂದರೆ, “ನಿನ್ನ ತಂಗಿ ಸೊದೋಮ್ ಮತ್ತು ಆಕೆಯ ಹೆಣ್ಣುಮಕ್ಕಳು ಕೊಬ್ಬಿದ ಕಣ್ಣುಳ್ಳವರಾಗಿದ್ದರು. ಅವರಿಗೆ ತಿನ್ನಲು ಬೇಕಾದಷ್ಟಿತ್ತು. ಅವರು ಶಾಂತಿಕರವಾದ ಸುಭದ್ರತೆಯಲ್ಲಿ ಜೀವಿಸಿದರು. ಅವರು ಬಡವರಿಗೆ ಸಹಾಯ ಮಾಡಲಿಲ್ಲ.
ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.
ಇದಕ್ಕೆಲ್ಲಾ ಕಾರಣ ನಿನೆವೆ. ನಿನೆವೆಯು ಒಬ್ಬ ವೇಶ್ಯೆ. ಆಕೆಗೆ ತೃಪ್ತಿ ಇರದು. ಆಕೆಗೆ ಹೆಚ್ಚುಹೆಚ್ಚು ಬೇಕು. ಅನೇಕ ದೇಶಗಳಿಗೆ ತನ್ನನ್ನು ಮಾರಿಬಿಟ್ಟಿದ್ದಾಳೆ. ಮಂತ್ರತಂತ್ರಗಳನ್ನು ಉಪಯೋಗಿಸಿ ಜನರನ್ನು ತನ್ನ ಗುಲಾಮರನ್ನಾಗಿ ಮಾಡಿದ್ದಾಳೆ.