Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 47:9 - ಪರಿಶುದ್ದ ಬೈಬಲ್‌

9 ಒಂದೇ ದಿನದೊಳಗೆ, ಒಂದೇ ಕ್ಷಣದಲ್ಲಿ ನಿನಗೆ ಎರಡು ಸಂಗತಿಗಳು ಸಂಭವಿಸುತ್ತವೆ. ನೀನು ನಿನ್ನ ಮಕ್ಕಳನ್ನು ಕಳೆದುಕೊಳ್ಳುವೆ, ಆ ಬಳಿಕ ನೀನು ನಿನ್ನ ಗಂಡನನ್ನು ಕಳಕೊಳ್ಳುವೆ. ಹೌದು, ಈ ವಿಷಯಗಳು ನಿನಗೆ ಖಂಡಿತವಾಗಿ ಸಂಭವಿಸುವವು. ನಿನ್ನಲ್ಲಿರುವ ಎಲ್ಲಾ ಮಾಟಮಂತ್ರಗಳು ನಿನ್ನನ್ನು ಕಾಪಾಡಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಒಂದೇ ದಿನದೊಳಗೆ, ಒಂದು ಕ್ಷಣದಲ್ಲಿ, ಪುತ್ರಶೋಕ ಮತ್ತು ವಿಧವೆಯ ಸ್ಥಿತಿ ಇವೆರಡೂ ನಿನಗುಂಟಾಗುವವು. ನೀನು ಎಷ್ಟು ಮಾಟಮಾಡಿದರೂ, ಎಷ್ಟೇ ಮಂತ್ರತಂತ್ರಗಳನ್ನು ನಡೆಸಿದರೂ ಇವುಗಳನ್ನು ಸಂಪೂರ್ಣವಾಗಿ ಅನುಭವಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಒಂದೇ ದಿನದೊಳಗೆ, ಒಂದೇ ಕ್ಷಣದೊಳಗೆ ಪುತ್ರಶೋಕ, ವೈಧವ್ಯ - ಇವೆರಡು ಒದಗುವುವು ನಿನಗೆ. ಎಷ್ಟೇ ಮಂತ್ರತಂತ್ರಗಳನು ನಡೆಸಿದರೂ ಅನುಭವಿಸುವೆ ನೀ ಪೂರ್ತಿಯಾಗಿ ಇವುಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಒಂದೇ ದಿನದೊಳಗೆ, ಒಂದು ಕ್ಷಣದಲ್ಲಿ, ಪುತ್ರಶೋಕ, ವೈಧವ್ಯ, ಇವೆರಡೂ ನಿನಗುಂಟಾಗುವವು; ನೀನು ಎಷ್ಟು ಮಾಟಮಾಡಿದರೂ ಎಷ್ಟೇ ಮಂತ್ರತಂತ್ರಗಳನ್ನು ನಡಿಸಿದರೂ ಇವುಗಳನ್ನು ಸಂಪೂರ್ಣವಾಗಿ ಅನುಭವಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಒಂದೇ ದಿನದೊಳಗೆ, ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವೆಯ ಸ್ಥಿತಿಯು ಇವೆರಡೂ ನಿನಗೆ ಬರುವುದು. ನಿನ್ನ ಮಂತ್ರಗಳು ಬಹಳವಾಗಿರುವುದರಿಂದಲೂ, ನಿನ್ನ ಮಾಟಗಳು ಹೆಚ್ಚಾಗಿರುವುದರಿಂದಲೂ, ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 47:9
26 ತಿಳಿವುಗಳ ಹೋಲಿಕೆ  

“ನಮಗೆ ಶಾಂತಿಯಿದೆ. ನಾವು ಸುರಕ್ಷಿತರಾಗಿದ್ದೇವೆ” ಎಂದು ಜನರು ಹೇಳುವಾಗಲೇ ಅವರಿಗೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ ಬರುತ್ತದೆ. ಆ ಜನರು ತಪ್ಪಿಸಿಕೊಳ್ಳಲಾಗುವುದಿಲ್ಲ.


ಇದ್ದಕ್ಕಿದ್ದಂತೆ ಆಪತ್ತು ಬರುವುದು, ಆಗ ಆ ಗರ್ವಿಷ್ಠರು ನಾಶವಾಗುವರು. ಭಯಂಕರವಾದ ಸಂಗತಿಗಳು ಅವರಿಗೆ ಸಂಭವಿಸುತ್ತವೆ; ಆಗ ಅವರು ಅಂತ್ಯಗೊಳ್ಳುವರು.


ಇದಕ್ಕೆಲ್ಲಾ ಕಾರಣ ನಿನೆವೆ. ನಿನೆವೆಯು ಒಬ್ಬ ವೇಶ್ಯೆ. ಆಕೆಗೆ ತೃಪ್ತಿ ಇರದು. ಆಕೆಗೆ ಹೆಚ್ಚುಹೆಚ್ಚು ಬೇಕು. ಅನೇಕ ದೇಶಗಳಿಗೆ ತನ್ನನ್ನು ಮಾರಿಬಿಟ್ಟಿದ್ದಾಳೆ. ಮಂತ್ರತಂತ್ರಗಳನ್ನು ಉಪಯೋಗಿಸಿ ಜನರನ್ನು ತನ್ನ ಗುಲಾಮರನ್ನಾಗಿ ಮಾಡಿದ್ದಾಳೆ.


ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.


ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


ಆಗ ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ತನ್ನಲ್ಲಿಗೆ ಕರೆಸಿದನು. ಅವನು ಆ ವಿದ್ವಾಂಸರಿಗೆ, “ಈ ಬರವಣಿಗೆಯನ್ನು ಓದಿ ನನಗೆ ಅದರ ಅರ್ಥವನ್ನು ಹೇಳಬಲ್ಲ ಮನುಷ್ಯನಿಗೆ ನಾನು ಬಹುಮಾನವನ್ನು ಕೊಡುತ್ತೇನೆ. ಆ ಮನುಷ್ಯನಿಗೆ ನಾನು ಕಂದು ಬಣ್ಣದ ವಸ್ತ್ರಗಳನ್ನು ಕೊಡುತ್ತೇನೆ. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.


ಮಂತ್ರವಾದಿಗಳು, ಜೋಯಿಸರು ಮತ್ತು ವಿದ್ವಾಂಸರು ಬಂದ ಮೇಲೆ ನಾನು ಅವರಿಗೆ ನನ್ನ ಕನಸಿನ ಬಗ್ಗೆ ಹೇಳಿದೆ. ಆದರೆ ಅವರಿಗೆ ಅರ್ಥವನ್ನು ತಿಳಿಸಲಾಗಲಿಲ್ಲ.


ಅರಸನು ತನ್ನ ಎಲ್ಲಾ ಪಂಡಿತರನ್ನು ಕರೆಸಿದನು. ಅವರು ಮಾಟಮಂತ್ರಗಳಿಂದ, ಜ್ಯೋತಿಶ್ಶಾಸ್ತ್ರದ ಸಹಾಯದಿಂದ ಅರಸನ ಕನಸಿನ ಅರ್ಥವನ್ನೂ ಭವಿಷ್ಯದಲ್ಲಿ ಸಂಭವಿಸಲಿರುವುದನ್ನೂ ತಿಳಿದುಕೊಳ್ಳಲು ಪ್ರಯತ್ನ ಮಾಡಿದರು. ರಾಜನು ತಾನು ಕಂಡ ಕನಸಿನ ಅರ್ಥವನ್ನು ತಿಳಿಯಬಯಸಿದ್ದರಿಂದ ಅವರು ಒಳಗೆ ಬಂದು ಅರಸನ ಸಮ್ಮುಖದಲ್ಲಿ ನಿಂತುಕೊಂಡರು.


ನೋವಿನಿಂದಲೋ ಎಂಬಂತೆ ಭೂಮಿಯು ನಡುಗುತ್ತದೆ ಮತ್ತು ಹೊರಳಾಡುತ್ತದೆ. ಯೆಹೋವನು ತಾನು ಯೋಚಿಸಿದಂತೆ ಬಾಬಿಲೋನಿಗೆ ಮಾಡಿದಾಗ ಅದು ನಡುಗುತ್ತದೆ. ಬಾಬಿಲೋನನ್ನು ಯಾರೂ ವಾಸಮಾಡದ ಮರುಭೂಮಿಯನ್ನಾಗಿ ಮಾಡಬೇಕೆಂಬುದು ಯೆಹೋವನ ಯೋಜನೆ.


ಆದರೆ ನೊವೊಮಿಯು ಜನರಿಗೆ, “ನನ್ನನ್ನು ನೊವೊಮಿ ಎಂದು ಕರೆಯದೆ, ನನ್ನನ್ನು ಮಾರಾ ಎಂದು ಕರೆಯಿರಿ. ಏಕೆಂದರೆ ಸರ್ವಶಕ್ತನಾದ ದೇವರು ನನ್ನ ಜೀವನವನ್ನು ದುಃಖಕರವನ್ನಾಗಿ ಮಾಡಿದ್ದಾನೆ.


ಬಳಿಕ ಮಹ್ಲೋನ್ ಮತ್ತು ಕಿಲ್ಯೋನ್ ಸಹ ಸತ್ತುಹೋದರು. ಹೀಗಾಗಿ ನೊವೊಮಿಯು ತನ್ನ ಗಂಡನನ್ನೂ ಇಬ್ಬರು ಗಂಡುಮಕ್ಕಳನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು.


ಅವರ ಮನೆಯಲ್ಲಿರುವ ಎಲ್ಲಾ ವಸ್ತುಗಳನ್ನು ಕಿತ್ತುಕೊಳ್ಳುವರು; ಅವರ ಹೆಂಡತಿಯರನ್ನು ಬಲಾತ್ಕಾರದಿಂದ ಸಂಭೋಗಿಸುವರು; ಅವರ ಮಕ್ಕಳನ್ನು ಜನರ ಕಣ್ಣೆದುರಿನಲ್ಲಿಯೇ ಹೊಡೆದು ಸಾಯಿಸುವರು.


ನೋಡು, ಅವರು ಬರುತ್ತಿದ್ದಾರೆ. ಅಶ್ವದಳಗಳು ಸಾಲುಸಾಲಾಗಿಯೂ ಬರುತ್ತಿವೆ” ಎಂದು ಕೂಗಿಕೊಂಡನು. ಆಗ ಒಬ್ಬ ದೂತನು, “ಬಾಬಿಲೋನಿಗೆ ಸೋಲಾಯಿತು. ಬಾಬಿಲೋನು ನೆಲಕ್ಕೆ ಅಪ್ಪಳಿಸಲ್ಪಟ್ಟಿತು. ಅದರ ದೇವ ದೇವತೆಯರ ವಿಗ್ರಹಗಳೆಲ್ಲಾ ನೆಲದ ಮೇಲೆ ಚೂರುಚೂರಾಗಿ ಬಿದ್ದಿವೆ” ಎಂದು ಹೇಳಿದನು.


“ಆದರೆ ವಿಪತ್ತು ನಿನಗೆ ಪ್ರಾಪ್ತವಾಗುವದು. ಅವು ಯಾವಾಗ ಸಂಭವಿಸುತ್ತದೋ ನಿನಗೆ ತಿಳಿಯದು. ಆದರೆ ವಿಪತ್ತು ಸಂಭವಿಸುವದು. ನೀನು ಏನೇ ಮಾಡಿದರೂ ಆ ವಿಪತ್ತನ್ನು ತಡೆಯಲಾಗದು.


ಶತ್ರುಗಳು ಖಡ್ಗಧಾರಿಗಳಾಗಿ ಬಂದು ಜನರ ಮೇಲೆರಗಿ ಕೊಲೆಮಾಡುವರು. ಯೆಹೂದದಲ್ಲಿ ಜೀವಂತ ಉಳಿದವರನ್ನು ಅವರು ವಧಿಸುವರು. ಒಬ್ಬ ಸ್ತ್ರೀಗೆ ಏಳು ಜನ ಮಕ್ಕಳಿದ್ದರೂ ಅವರೆಲ್ಲ ಸತ್ತುಹೋಗುವರು. ಅವಳು ಅತ್ತೂಅತ್ತೂ ಬಳಲಿ ಉಸಿರಾಡದಂತಾಗುವಳು. ಅವಳು ಕಳವಳಪಡುವಳು ಮತ್ತು ಗಾಬರಿಗೊಳ್ಳುವಳು. ಪ್ರಕಾಶಮಯವಾದ ದಿನವು ದುಃಖದ ನಿಮಿತ್ತ ಅವಳಿಗೆ ಕತ್ತಲಾಗುವುದು.”


ಅದೇ ರಾತ್ರಿ ಕಸ್ದೀಯರ ರಾಜನಾದ ಬೇಲ್ಶಚ್ಚರನ ಕೊಲೆಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು