ಯೆಶಾಯ 48:10 - ಪರಿಶುದ್ದ ಬೈಬಲ್10 “ಇಗೋ, ನಾನು ನಿಮ್ಮನ್ನು ಶುದ್ಧೀಕರಿಸುತ್ತೇನೆ. ಜನರು ಬೆಳ್ಳಿಯನ್ನು ಬೆಂಕಿಯಿಂದ ಶುದ್ಧೀಕರಿಸುತ್ತಾರೆ. ಆದರೆ ನಾನು ನಿಮ್ಮನ್ನು ಸಂಕಟಗಳಿಂದ ಶುದ್ಧೀಕರಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ, ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಬೆಳ್ಳಿಯನು ಪುಟಕ್ಕೆ ಹಾಕಿದಂತಲ್ಲ; ನಿನ್ನನು ಸಂಕಟವೆಂಬ ಕೆಂಡಕ್ಕೆ ಹಾಕಿರುವೆ. ಶೋಧಿಸಿರುವೆನು, ಪರಿಶೋಧಿಸಿರುವೆನು ನಿನ್ನನು ನನಗಾಗೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ; ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾನು ನಿನ್ನನ್ನು ಪರಿಶೋಧಿಸಿದ್ದೇನೆ. ಆದರೆ ಬೆಳ್ಳಿಯಂತೆ ಅಲ್ಲ, ಸಂಕಟದ ಕುಲುಮೆಯಿಂದ ನಿನ್ನನ್ನು ಆಯ್ದುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿ |
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.
ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನ್ನು ಹೊರತಂದಾಗ ನಾನು ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನ್ನು ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನ್ನ ಆಜ್ಞಾಪಾಲನೆಯನ್ನು ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನ್ನು ಮಾಡಿರಿ. ಆಗ ನೀವು ನನ್ನ ಭಕ್ತರಾಗುವಿರಿ. ನಾನು ನಿಮ್ಮ ದೇವರಾಗುವೆನು’ ಎಂದೆ.