ಯೆಶಾಯ 48:14 - ಪರಿಶುದ್ದ ಬೈಬಲ್14 “ನೀವೆಲ್ಲರೂ ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿರಿ. ಸುಳ್ಳುದೇವರುಗಳಲ್ಲಿ ಯಾರಾದರೂ ಈ ವಿಷಯಗಳು ಸಂಭವಿಸುತ್ತವೆಯೆಂದು ಹೇಳಿರುವರೇ? ಇಲ್ಲ!” ಯೆಹೋವನು ಆರಿಸಿದ ಮನುಷ್ಯನು ಬಾಬಿಲೋನಿಗೂ ಕಸ್ದೀಯರಿಗೂ ತನ್ನ ಇಷ್ಟಬಂದ ಹಾಗೆ ಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀವೆಲ್ಲರು ಕೂಡಿಕೊಂಡು ಕೇಳಿರಿ! ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವನು ಯಾರು? ಯೆಹೋವನ ಪ್ರೀತಿಪಾತ್ರನು, ಬಾಬೆಲಿನಲ್ಲಿ ಆತನ ಇಷ್ಟವನ್ನು ನೆರವೇರಿಸುವನು. ಕಸ್ದೀಯರ ಮೇಲೆ ಕೈಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಒಟ್ಟುಗೂಡಿ ಕೇಳಿ ನೀವೆಲ್ಲರು ಇದನ್ನು : ಆ ದೇವರುಗಳಲ್ಲಿ ಮುಂತಿಳಿಸಿದವನಾರು ಈ ಸಂಗತಿಯನು? ನನ್ನ ಪ್ರೀತಿಗೆ ಪಾತ್ರನಾದ ವ್ಯಕ್ತಿ ಸೈರಸನು ಕಸ್ದೀಯರ ಮೇಲೆ ಕೈಯೆತ್ತುವನು, ಈಡೇರಿಸುವನು ಬಾಬೆಲಿನಲ್ಲಿ ನನ್ನ ಇಷ್ಟಾರ್ಥವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೀವೆಲ್ಲರು ಕೂಡಿಕೊಂಡು ಕೇಳಿರಿ! ಇವರಲ್ಲಿನ ಯಾವ ದೇವರು ಈ ಸಂಗತಿಗಳನ್ನು ಅರುಹಿದ್ದಾನೆ? ಯೆಹೋವನ ಪ್ರೀತಿಪಾತ್ರನು ಬಾಬೆಲಿನಲ್ಲಿ ಆತನ ಇಷ್ಟವನ್ನು ನೆರವೇರಿಸುವನು, ಕಸ್ದೀಯರ ಮೇಲೆ ಕೈಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ನೀವೆಲ್ಲರೂ ಕೂಡಿಕೊಂಡು ಕೇಳಿರಿ. ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವರು ಯಾರು? ಯೆಹೋವ ದೇವರು ಆಯ್ಕೆ ಮಾಡಿದ ಮಿತ್ರನು ಬಾಬಿಲೋನಿನ ವಿರುದ್ಧ ತನ್ನ ಉದ್ದೇಶವನ್ನು ಪೂರೈಸುತ್ತಾನೆ. ತನ್ನ ತೋಳು ಕಸ್ದೀಯರ ಮೇಲೆ ಇರುವುದು. ಅಧ್ಯಾಯವನ್ನು ನೋಡಿ |
ನಾನು ಸೈರಸನಿಗೆ ಸುಕಾರ್ಯಗಳನ್ನು ಮಾಡಲು ಶಕ್ತಿಯನ್ನು ಕೊಟ್ಟಿದ್ದೇನೆ. ಅವನ ಕೆಲಸಗಳನ್ನೆಲ್ಲಾ ಸುಲಭಗೊಳಿಸುತ್ತೇನೆ. ಸೈರಸನು ನನ್ನ ಪಟ್ಟಣವನ್ನು ಮತ್ತೆ ಕಟ್ಟುವನು; ನನ್ನ ಜನರಿಗೆ ಸ್ವಾತಂತ್ರ್ಯವನ್ನು ಕೊಡುವನು. ನನ್ನ ಜನರನ್ನು ಸೈರಸನು ನನಗೆ ಮಾರಿಬಿಡುವದಿಲ್ಲ. ಈ ಕಾರ್ಯಗಳನ್ನೆಲ್ಲ ಮಾಡುವದಕ್ಕೆ ನಾನು ಅವನಿಗೆ ಹಣ ಕೊಡುವ ಅವಶ್ಯವಿಲ್ಲ. ಜನರು ಸ್ವತಂತ್ರರಾಗುವರು. ಇದಕ್ಕಾಗಿ ನನಗೇನೂ ಖರ್ಚು ಇಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ಯೆಹೋವನು ಹೀಗೆನ್ನುತ್ತಾನೆ: “ಜೋರ್ಡನ್ ನದಿಯ ಸಮೀಪದ ದಟ್ಟವಾದ ಅರಣ್ಯದಿಂದ ಒಮ್ಮೆ ಒಂದು ಸಿಂಹವು ಬರುವುದು. ಆ ಸಿಂಹವು ಜನರ ಸಾಕುಪ್ರಾಣಿಗಳಿದ್ದ ಹೊಲಗಳಿಗೆ ನುಗ್ಗುವುದು. ಆ ಪ್ರಾಣಿಗಳೆಲ್ಲ ಓಡಿಹೋಗುವವು. ನಾನು ಆ ಸಿಂಹದಂತಾಗುವೆನು. ನಾನು ಬಾಬಿಲೋನನ್ನು ಅದರ ಪ್ರದೇಶದಿಂದ ಓಡಿಸಿಬಿಡುವೆನು. ಈ ಕಾರ್ಯ ಮಾಡಲು ನಾನು ಯಾರನ್ನು ಆರಿಸಲಿ? ನನ್ನತೆ ಯಾರೂ ಇಲ್ಲ. ನನ್ನನ್ನು ಪ್ರತಿಭಟಿಸುವವರು ಯಾರೂ ಇಲ್ಲ. ಆದ್ದರಿಂದ ನಾನೇ ಅದನ್ನು ಮಾಡುತ್ತೇನೆ. ನನ್ನನ್ನು ಓಡಿಸಲು ಯಾವ ಕುರುಬನೂ ಬರಲಾರನು. ನಾನು ಬಾಬಿಲೋನಿನ ಜನರನ್ನು ಓಡಿಸಿಬಿಡುವೆನು.”