ಯೆಶಾಯ 48:17 - ಪರಿಶುದ್ದ ಬೈಬಲ್17 ರಕ್ಷಕನೂ ಇಸ್ರೇಲರ ಪರಿಶುದ್ಧನೂ ಆಗಿರುವ ಯೆಹೋವನು ಹೇಳುವುದೇನೆಂದರೆ, “ನಾನೇ ನಿಮ್ಮ ದೇವರಾದ ಯೆಹೋವನು. ಯಾವದು ಒಳ್ಳೆಯದೋ, ಪ್ರಯೋಜನಕರವೋ ಅದನ್ನು ಮಾಡಲು ನಿಮಗೆ ಕಲಿಸುತ್ತೇನೆ. ನೀವು ಹೋಗಲೇಬೇಕಾದ ದಾರಿಯಲ್ಲಿ ನಿಮ್ಮನ್ನು ನಡಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಿನ್ನ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರ ಸ್ವಾಮಿಯೆ ನುಡಿದಿಹನು : “ನಿನಗೆ ಕ್ಷೇಮಕರವಾದ ಮಾರ್ಗವನು ಬೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರ ಸ್ವಾಮಿ ದೇವರು ನಾನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಿನ್ನ ವಿಮೋಚಕನೂ ಇಸ್ರಾಯೇಲ್ಯರ ಸದಮಲಸ್ವಾವಿುಯೂ ಆದ ಯೆಹೋವನು ಹೀಗನ್ನುತ್ತಾನೆ - ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಯಿಸುವವನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಿನ್ನ ವಿಮೋಚಕನೂ, ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಯೆಹೋವ ದೇವರ ಮಾತಿದು, “ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವವನೂ ಆದ ನಾನೇ ನಿನ್ನ ಯೆಹೋವ ದೇವರು ಆಗಿದ್ದೇನೆ. ಅಧ್ಯಾಯವನ್ನು ನೋಡಿ |
ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.
ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.