ಯೆಶಾಯ 48:18 - ಪರಿಶುದ್ದ ಬೈಬಲ್18 ನೀವು ನನಗೆ ವಿಧೇಯರಾಗಿದ್ದರೆ, ತುಂಬಿಹರಿಯುವ ಹೊಳೆಯಂತೆ ಸಮಾಧಾನವು ನಿಮಗೆ ದೊರಕುತ್ತಿತ್ತು. ಸಮುದ್ರದ ತೆರೆಯಂತೆ ಮೇಲಿಂದ ಮೇಲೆ ನಿಮಗೆ ಒಳ್ಳೆಯವುಗಳು ಬರುತ್ತಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ, ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಎಷ್ಟೋ ಚೆನ್ನಾಗಿರುತ್ತಿತ್ತು ನೀ ನನ್ನ ಆಜ್ಞೆಗಳನ್ನು ಪಾಲಿಸಿದ್ದರೆ ಇರುತ್ತಿತ್ತು ನಿನಗೆ ಸುಖಶಾಂತಿ ಮಹಾನದಿಯಂತೆ ನಿನ್ನ ಸತ್ಯಸಂಧತೆ ಸಮುದ್ರ ಅಲೆಗಳಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ, ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು, ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ: “ಇಗೋ, ನಾನು ನಿನಗೆ ಸಮಾಧಾನವನ್ನು ಕೊಡುತ್ತೇನೆ. ಒಂದು ದೊಡ್ಡ ಹೊಳೆಯು ಹರಿಯುವಂತೆ ನಿನಗೆ ಸಮಾಧಾನವು ಹರಿದುಕೊಂಡು ಬರುವದು. ಭೂಮಿಯ ಮೇಲಿರುವ ಎಲ್ಲಾ ದೇಶಗಳ ಐಶ್ವರ್ಯವು ನಿನ್ನ ಬಳಿಗೆ ಹರಿದುಬರುವದು. ಅದು ಪ್ರವಾಹದಂತೆ ಹರಿದುಬರುವದು. ನೀವು ಸಣ್ಣ ಮಕ್ಕಳಂತೆ ಆ ಹಾಲನ್ನು ಕುಡಿಯುವಿರಿ. ನಾನು ನಿಮ್ಮನ್ನೆತ್ತಿ ಕೈಗಳಲ್ಲಿ ಅಪ್ಪಿಕೊಳ್ಳುವೆನು. ನನ್ನ ತೊಡೆಯ ಮೇಲೆ ನಿಮ್ಮನ್ನು ಕುಳ್ಳಿರಿಸಿ ಆಟವಾಡಿಸುವೆನು.
ಕೆಂದರೆ ಬಲಿಷ್ಠನಾದ ಯೆಹೋವನು ಅಲ್ಲಿದ್ದಾನೆ. ಆ ದೇಶವು ತೊರೆಗಳೂ ಅಗಲವಾಗಿ ಹರಿಯುವ ನದಿಗಳೂ ಇರುವ ದೇಶವಾಗಿದೆ. ಆದರೆ ಆ ನದಿಯಲ್ಲಿ ವೈರಿಯ ದೋಣಿಯಾಗಲಿ, ಹಡಗುಗಳಾಗಲಿ ಇರುವದಿಲ್ಲ. ಆ ಹಡುಗುಗಳಲ್ಲಿ ಕೆಲಸಮಾಡುವವರೇ, ನೀವು ಅದರ ಹಗ್ಗಗಳಲ್ಲಿ ಕೆಲಸಮಾಡುವದನ್ನು ಬಿಟ್ಟುಬಿಡಿರಿ. ಹಡಗಿನ ಸ್ತಂಭವನ್ನು ನೀವು ಬಲಪಡಿಸಲಾರಿರಿ. ಹಡಗಿನ ಹಾಯಿಗಳನ್ನು ನಿಮ್ಮಿಂದ ತೆರೆಯಲು ಆಗುವದಿಲ್ಲ. ಯಾಕೆಂದರೆ ದೇವರೇ ನಮ್ಮ ನ್ಯಾಯಾಧೀಶನು. ಆತನು ಧರ್ಮಶಾಸ್ತ್ರವನ್ನು ಸಿದ್ಧಪಡಿಸಿದಾತನು. ಯೆಹೋವನೇ ನಮ್ಮ ಅರಸನು. ಆತನೇ ನಮ್ಮನ್ನು ರಕ್ಷಿಸುವನು, ನಮಗೆ ಸಂಪತ್ತನ್ನು ದಯಪಾಲಿಸುವನು. ಕೈಕಾಲು ಊನವಾದವರೂ ಸಹ ಯುದ್ಧದಲ್ಲಿ ಸಂಪತ್ತನ್ನು ಗಳಿಸುವರು.
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.