Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:22 - ಪರಿಶುದ್ದ ಬೈಬಲ್‌

22 ಆದರೆ ಯೆಹೋವನು ಹೇಳುವುದೇನೆಂದರೆ, “ದುಷ್ಟರಿಗೆ ಸಮಾಧಾನವೇ ಸಿಗದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ದುಷ್ಟರಿಗಿಲ್ಲ ಶಾಂತಿಸಮಾಧಾನ” ಇದು ಸರ್ವೇಶ್ವರ ಸ್ವಾಮಿಯ ವಚನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ದುಷ್ಟರಿಗೆ ಸಮಾಧಾನವೇ ಇಲ್ಲ,” ಎಂದು ಯೆಹೋವ ದೇವರು ನುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:22
9 ತಿಳಿವುಗಳ ಹೋಲಿಕೆ  

ನನ್ನ ದೇವರು ಹೇಳುವುದೇನೆಂದರೆ: “ದುಷ್ಟ ಜನರಿಗೆ ಸಮಾಧಾನವಿಲ್ಲ.”


ಜೆರುಸಲೇಮಿಗೆ, “ನಿನಗೆ ಯಾವುದರಿಂದ ಸಮಾಧಾನವಾಗುತ್ತದೆ ಎಂಬುದನ್ನು ನೀನು ಇಂದೇ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದಾಗಿತ್ತು! ಆದರೆ ನೀನು ಅದನ್ನು ತಿಳಿಯಲಾರೆ, ಏಕೆಂದರೆ ಅದು ನಿನಗೆ ಮರೆಯಾಗಿದೆ.


ಜನರು ಶಾಂತಿಯ ಮಾರ್ಗವನ್ನು ತಿಳಿದಿಲ್ಲ.”


ದೂರದೇಶದಲ್ಲಿರುವ ಜನರೇ, ನನ್ನ ಮಾತುಗಳಿಗೆ ಕಿವಿಗೊಡಿರಿ; ಭೂಮಿಯ ಮೇಲೆ ವಾಸಿಸುವ ಜನರೇ, ನನ್ನ ಮಾತುಗಳನ್ನು ಕೇಳಿರಿ. ನಾನು ಹುಟ್ಟುವ ಮೊದಲೇ ಯೆಹೋವನು ನನ್ನನ್ನು ತನ್ನ ಸೇವೆಗಾಗಿ ಕರೆದನು. ನಾನು ತಾಯಿಯ ಗರ್ಭದಲ್ಲಿರುವಾಗಲೇ ಯೆಹೋವನು ನನ್ನ ಹೆಸರೆತ್ತಿ ಕರೆದನು.


ಯೇಹುವನ್ನು ಸಂಧಿಸಲು ಒಬ್ಬನು ಕುದುರೆಯ ಮೇಲೆ ಹೋಗಿ, “ರಾಜನಾದ ಯೋರಾಮನು ‘ಶುಭವಾರ್ತೆಯುಂಟೋ?’ ಎಂದು ಕೇಳುತ್ತಾನೆ” ಅಂದನು. ಯೇಹುವು, “ನಮ್ಮ ಶುಭವಾರ್ತೆಯಿಂದ ನೀನು ಮಾಡುವುದೇನಿದೆ! ಬಾ, ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಕಾವಲುಗಾರನು ಯೋರಾಮನಿಗೆ, “ಆ ಗುಂಪಿನ ಬಳಿಗೆ ಹೋದ ಸಂದೇಶಕನು, ಈವರೆವಿಗೂ ಹಿಂದಿರುಗಿ ಬರಲೇ ಇಲ್ಲ” ಎಂದು ಹೇಳಿದನು.


ಆಗ ಯೋರಾಮನು ಎರಡನೆಯವನನ್ನು ಕುದುರೆಯ ಮೇಲೆ ಕಳುಹಿಸಿದನು. ಅವನು ಯೇಹುವಿನ ಗುಂಪಿನ ಬಳಿಗೆ ಬಂದು, “ರಾಜನಾದ ಯೋರಾಮನು, ‘ಶುಭವಾರ್ತೆಯುಂಟೋ?’ ಎಂದು ಕೇಳುತ್ತಿರುವನು” ಎಂದು ಹೇಳಿದನು. ಯೇಹುವು, “ನಮ್ಮ ಶುಭವಾರ್ತೆಯಿಂದ ನೀನು ಮಾಡುವುದೇನಿದೆ! ಬಾ, ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ದುಷ್ಟಜನರು ರೊಚ್ಚಿಗೆದ್ದ ಸಾಗರದಂತೆ, ಸಮಾಧಾನವಾಗಿಯೂ ಮೌನವಾಗಿಯೂ ಇರಲಾರರು. ಅವರು ಸಿಟ್ಟುಗೊಂಡು ಸಾಗರದಂತೆ ಕೆಸರನ್ನು ಕದಡಿಸುವರು.


“ಅವರು ನನ್ನ ಪವಿತ್ರ ಪಟ್ಟಣದಲ್ಲಿ ವಾಸಿಸುವರು. ಅವರು ಪಟ್ಟಣದಿಂದ ಹೊರಗೆ ಹೋದರೆ ನನಗೆ ವಿರುದ್ಧವಾಗಿ ಪಾಪಮಾಡಿದವರ ಹೆಣಗಳನ್ನು ನೋಡುವರು. ಅವರ ಹೆಣಗಳೊಳಗೆ ಸಾಯದ ಹುಳಗಳಿರುವವು. ಬೆಂಕಿಯು ಆ ಹೆಣಗಳನ್ನು ಸುಟ್ಟುಬಿಡುವುದು. ಆ ಬೆಂಕಿಯು ಆರುವದೇ ಇಲ್ಲ. ಅವು ಜನರ ಮುಂದೆ ಅಸಹ್ಯವಾಗಿರುವವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು