ಯೆಶಾಯ 48:4 - ಪರಿಶುದ್ದ ಬೈಬಲ್4 ನೀವು ಹಠಮಾರಿಗಳಾಗಿದ್ದು ನಾನು ಹೇಳಿದ್ದನ್ನು ನಂಬದೆ ಹೋದದ್ದರಿಂದ ನಾನು ಹಾಗೆ ಮಾಡಿದೆನು. ನೀವು ಕಬ್ಬಿಣದಂತೆ ಬಗ್ಗದ ಹಠಮಾರಿಗಳಾಗಿದ್ದೀರಿ. ಹಿತ್ತಾಳೆಯಂತೆ ಗಟ್ಟಿಯಾಗಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಏಕೆಂದರೆ ನೀನು ಹಟವಾದಿ ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ತಿಳಿದಿದೆ ನನಗೆ ನಿನ್ನ ಹಟಮಾರಿತನ ನಿನ್ನ ಕುತ್ತಿಗೆಯ ನರಗಳು ಕಬ್ಬಿಣ ನಿನ್ನ ಹಣೆ ಕಂಚಿನಂತೆ ಕಠಿಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಏಕೆಂದರೆ ನೀನು ಹಟಗಾರ. ನಿನ್ನ ಕತ್ತಿನ ನರಗಳು ಕಬ್ಬಿಣ, ನಿನ್ನ ಹಣೆ ಕಂಚಿನದು ಎಂದು ನಾನು ತಿಳಿದುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿ |
ಚಿದ್ಕೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ಕೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ಕೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟು ತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ಕೀಯನು ಮನಸ್ಸನ್ನು ಕಠಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು.