ಯೆಶಾಯ 48:7 - ಪರಿಶುದ್ದ ಬೈಬಲ್7 ಇವು ಬಹಳ ಕಾಲದ ಹಿಂದೆ ನಡೆದ ವಿಷಯಗಳಲ್ಲ. ಇವು ಈಗ ಸಂಭವಿಸುವ ವಿಷಯಗಳು. ಈ ದಿವಸಕ್ಕೆ ಮೊದಲು ನೀವು ಇದನ್ನು ಕೇಳಲಿಲ್ಲ. ಆದ್ದರಿಂದ ‘ನಮಗೆ ಇದೆಲ್ಲಾ ಗೊತ್ತಿದೆ’ ಎಂದು ನೀವು ಹೇಳಲಾಗದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಈಗಲೇ ಉಂಟಾಗುತ್ತಿವೆ, ಪುರಾತನಕಾಲದಲ್ಲಿ ಆಗಿಲ್ಲ, “ಮೊದಲೇ ನಾನು ತಿಳಿದುಕೊಂಡಿದ್ದೆನು” ಎಂದು, ನೀನು ಅಂದುಕೊಳ್ಳದ ಹಾಗೆ ಈ ದಿನಕ್ಕೆ ಮೊದಲು ನಾನು ನಿನಗೆ ಕೇಳಗೊಡಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಪುರಾತನ ಕಾಲದಲ್ಲಿ ಅಲ್ಲ, ಈಗ ನಡೆಯುತ್ತಿವೆ ಈ ಘಟನೆಗಳೆಲ್ಲ. ‘ಇದೆಲ್ಲ ನನಗೆ ಮೊದಲೇ ತಿಳಿದಿತ್ತಲ್ಲಾ,’ ಎಂದು ನೀ ಕೊಚ್ಚಿಕೊಳ್ಳದಂತೆ, ನಾ ನಿನಗೆ ಮುಂತಿಳಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಈಗಲೇ ಉಂಟಾಗುತ್ತಿವೆ, ಪುರಾತನಕಾಲದಲ್ಲಿ ಆಗಿಲ್ಲ; ಆಹಾ, ಮೊದಲೇ ನಾನು ತಿಳಿದುಕೊಂಡಿದ್ದೆನು ಎಂದು ನೀನು ಅಂದುಕೊಳ್ಳದ ಹಾಗೆ ಈ ದಿನಕ್ಕೆ ಮುಂಚೆ ನಾನು ನಿನಗೆ ಕೇಳಗೊಡಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಈಗಲೇ ಉಂಟಾಗುತ್ತಿವೆ, ಪುರಾತನ ಕಾಲದಲ್ಲಿ ಆಗಿಲ್ಲ; ‘ಇದೆಲ್ಲ ನನಗೆ ಮೊದಲೇ ತಿಳಿದಿತ್ತು,’ ಎಂದು ನೀನು ಕೊಚ್ಚಿಕೊಳ್ಳದಂತೆ, ನಾನು ಇವುಗಳನ್ನು ನಿನಗೆ ಮುಂತಿಳಿಸಲಿಲ್ಲ. ಅಧ್ಯಾಯವನ್ನು ನೋಡಿ |
ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.