ಯೆಶಾಯ 48:8 - ಪರಿಶುದ್ದ ಬೈಬಲ್8 ಆದರೆ ನಾನು ಇವುಗಳನ್ನು ತಿಳಿಸಿದ ಮೇಲೂ ನೀವು ನನ್ನ ಮಾತನ್ನು ಕೇಳದೆಹೋದಿರಿ. ನೀವು ನನ್ನಿಂದ ಏನೂ ಕಲಿಯಲಿಲ್ಲ. ನಾನು ಏನು ಹೇಳಿದರೂ ನೀವು ಕೇಳಲಿಲ್ಲ. ಪ್ರಾರಂಭದಿಂದಲೇ ನೀವು ನನಗೆ ವಿರುದ್ಧವಾಗುವಿರಿ ಎಂದು ನಾನು ತಿಳಿದಿದ್ದೆನು. ನೀವು ಹುಟ್ಟಿದಾಗಿನಿಂದಲೇ ನನಗೆ ವಿರುದ್ಧವಾಗಿ ದಂಗೆ ಎದ್ದಿರುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ದ್ರೋಹಿಯೆಂದು ನಾನು ತಿಳಿದುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಹೌದು, ಹೌದು ನೀ ಕೇಳಿಲ್ಲ, ತಿಳಿದೂ ಇಲ್ಲ ಅದಿಯಿಂದ ನಿನ್ನ ಕಿವಿ ತೆರೆದೂ ಇಲ್ಲ ನೀನು ಆಗರ್ಭ ದ್ರೋಹಿ, ಮಹಾ ಕುಟಿಲ ಎಂಬುದು ನನಗೆ ತಿಳಿದು ಇದೆಯಲ್ಲ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನು, ಆಗರ್ಭದ್ರೋಹಿ ಎನಿಸಿಕೊಂಡವನು ಎಂದು ನಾನು ತಿಳಿದುಕೊಂಡಿದ್ದೆನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನೀನು ಕೇಳಿಲ್ಲ, ತಿಳಿದೂ ಇಲ್ಲ. ಪುರಾತನ ಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ. ಏಕೆಂದರೆ ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ನೀನು ದ್ರೋಹಿ ಎಂದೂ ನಾನು ತಿಳಿದುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿ |
ನೀವು ಯುದ್ಧಮಾಡಿ ಇತರರಿಂದ ಸುಲಿದುಕೊಳ್ಳುತ್ತೀರಿ. ಆದರೆ ಅವರು ನಿಮ್ಮಿಂದ ಏನೂ ಕದ್ದುಕೊಳ್ಳಲಿಲ್ಲ. ನೀವು ಜನರಿಗೆ ವಿರುದ್ಧವಾಗಿ ತಿರುಗುತ್ತೀರಿ. ಆದರೆ ಅವರು ನಿಮಗೆ ವಿರುದ್ಧವಾಗಲಿಲ್ಲ. ಆದ್ದರಿಂದ ನೀವು ಕದ್ದುಕೊಳ್ಳುವದನ್ನು ಬಿಟ್ಟಾಗ ಇತರರು ನಿಮ್ಮದನ್ನು ಕದ್ದುಕೊಳ್ಳುತ್ತಾರೆ. ನೀವು ಇತರರಿಗೆ ಹಾನಿ ಮಾಡುವದನ್ನು ನಿಲ್ಲಿಸಿದಾಗ ಇತರರು ನಿಮಗೆ ಹಾನಿ ಮಾಡುವರು. ಆಗ ನೀವು ಹೀಗೆ ಹೇಳುವಿರಿ: