ಯೆಶಾಯ 49:1 - ಪರಿಶುದ್ದ ಬೈಬಲ್1 ದೂರದೇಶದಲ್ಲಿರುವ ಜನರೇ, ನನ್ನ ಮಾತುಗಳಿಗೆ ಕಿವಿಗೊಡಿರಿ; ಭೂಮಿಯ ಮೇಲೆ ವಾಸಿಸುವ ಜನರೇ, ನನ್ನ ಮಾತುಗಳನ್ನು ಕೇಳಿರಿ. ನಾನು ಹುಟ್ಟುವ ಮೊದಲೇ ಯೆಹೋವನು ನನ್ನನ್ನು ತನ್ನ ಸೇವೆಗಾಗಿ ಕರೆದನು. ನಾನು ತಾಯಿಯ ಗರ್ಭದಲ್ಲಿರುವಾಗಲೇ ಯೆಹೋವನು ನನ್ನ ಹೆಸರೆತ್ತಿ ಕರೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ! ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಕಿವಿಗೊಡಿ ನನ್ನ ದ್ವೀಪನಿವಾಸಿಗಳೇ, ಆಲಿಸಿ ನನ್ನನ್ನು ದೂರದ ಜನಾಂಗಗಳೇ, ಸರ್ವೇಶ್ವರ ಕರೆದನೆನ್ನನ್ನು ಗರ್ಭದಲ್ಲಿದ್ದಾಗಲೇ; ಹೆಸರಿಟ್ಟನೆನಗೆ ನಾನು ತಾಯಿಯ ಉದರದಲ್ಲಿದ್ದಾಗಲೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ! ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದ್ವೀಪಗಳೇ, ನನ್ನ ಮಾತನ್ನು ಕೇಳಿರಿ. ದೂರದ ರಾಷ್ಟ್ರಗಳೇ, ಕಿವಿಗೊಡಿರಿ! ನನ್ನ ಜನನದ ಮುಂಚೆಯೇ ಯೆಹೋವ ದೇವರು ನನ್ನನ್ನು ಕರೆದರು. ತಾಯಿಯ ಉದರದಲ್ಲಿದ್ದಾಗಲೇ ನನಗೆ ಹೆಸರಿಟ್ಟರು. ಅಧ್ಯಾಯವನ್ನು ನೋಡಿ |
ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.
ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.