ಯೆಶಾಯ 49:12 - ಪರಿಶುದ್ದ ಬೈಬಲ್12 “ಇಗೋ, ದೂರದೇಶಗಳಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ. ಉತ್ತರ, ಪಶ್ಚಿಮ ದಿಕ್ಕುಗಳಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ. ಈಜಿಪ್ಟಿನ ಅಸ್ವಾನಿನಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಲಿಂದ ಮತ್ತು ಪಡವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನೋಡಿ, ಬರುತಿಹರು ನನ್ನ ಜನರು ದೂರದಿಂದ ಹೌದು, ಬರುತಿಹರು ಉತ್ತರ ಪಶ್ಚಿಮದಿಂದ ದಕ್ಷಿಣದ ಆ ಅಶ್ವಾನ್ ನಾಡಿನಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇಗೋ, ಇವರು ದೂರದಿಂದ ಬರುತ್ತಾರೆ, ಇಗೋ, ಇವರು ಬಡಗಲಿಂದ ಮತ್ತು ಪಡುವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇವರು ದೂರದಿಂದ ಬರುತ್ತಾರೆ. ಇವರು ಉತ್ತರದಿಂದ ಮತ್ತು ಪಶ್ಚಿಮದಿಂದ ಇವರು ಸೀನಿಮ್ ದೇಶದಿಂದ ಬರುತ್ತಿದ್ದಾರೆ.” ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.