Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:17 - ಪರಿಶುದ್ದ ಬೈಬಲ್‌

17 ನಿನ್ನ ಮಕ್ಕಳು ನಿನ್ನ ಬಳಿಗೆ ಹಿಂದಿರುಗಿ ಬರುವರು. ಜನರು ನಿಮ್ಮನ್ನು ಸೋಲಿಸಿದರೂ ಅವರು ನಿಮ್ಮನ್ನು ನಿಮ್ಮಷ್ಟಕ್ಕೆ ಬಿಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿನ್ನ ಮಕ್ಕಳು ತ್ವರೆಪಟ್ಟು ಬರುತ್ತಿದ್ದಾರೆ. ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟು ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿನ್ನ ಮರಳಿ ಕಟ್ಟುವವರು ಬರುತಿಹರು ತ್ವರೆಯಿಂದ ನಿನ್ನ ಕೆಡವಿ ಹಾಳುಮಾಡಿದವರು ಹೊರಡುತಿಹರು ನಿನ್ನಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಿನ್ನ ಮಕ್ಕಳು ತ್ವರೆಪಟ್ಟು ಬರುತ್ತಿದ್ದಾರೆ; ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟು ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿನ್ನ ಮಕ್ಕಳು ತ್ವರೆಪಟ್ಟು ಬರುತ್ತಿದ್ದಾರೆ. ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟು ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:17
14 ತಿಳಿವುಗಳ ಹೋಲಿಕೆ  

ಯೌವನಸ್ಥನು ಕನ್ನಿಕೆಯನ್ನು ಪ್ರೀತಿಸಿ ಮದುವೆಯಾಗುವನು; ತನ್ನ ಹೆಂಡತಿಯನ್ನಾಗಿ ಆಕೆಯನ್ನು ಸ್ವೀಕರಿಸುವನು. ಅದೇ ರೀತಿಯಲ್ಲಿ ದೇವರು ನಿನ್ನನ್ನು ವಿವಾಹವಾಗುತ್ತಾನೆ. ದೇಶವು ತುಂಬಿಹೋಗುವಷ್ಟು ಮಕ್ಕಳನ್ನು ಆತನು ಪಡೆದುಕೊಳ್ಳುತ್ತಾನೆ. ಒಬ್ಬನು ಹೊಸದಾಗಿ ಮದುವೆಯಾದ ತನ್ನ ಹೆಂಡತಿಯೊಡನೆ ಉಲ್ಲಾಸದಿಂದಿರುವಂತೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.


ಯೆಹೋವನು ನಿನ್ನನ್ನು ಸೃಷ್ಟಿಸಿದ್ದಾನೆ. ತನ್ನ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದವನು ಆತನೇ. ಆತನು ತನ್ನ ಶಕ್ತಿಯಿಂದ ಭೂಮಿಯ ಮೇಲೆ ಆಕಾಶವನ್ನು ಹರಡಿದ್ದಾನೆ. ಆದರೆ ನೀನು ಆತನನ್ನೂ ಆತನ ಶಕ್ತಿಯನ್ನೂ ಮರೆತುಬಿಟ್ಟೆ ಆದ್ದರಿಂದಲೇ ನಿನಗೆ ಕೇಡುಮಾಡುವ ದುಷ್ಟರಿಗೆ ನೀನು ಯಾವಾಗಲೂ ಹೆದರಿಕೊಂಡಿರುವೆ. ಅವರು ನಿನ್ನನ್ನು ನಾಶಮಾಡಲು ಆಲೋಚಿಸಿದ್ದಾರೆ. ಈಗ ಅವರೆಲ್ಲಿದ್ದಾರೆ? ಅವರೆಲ್ಲಾ ಹೋಗಿಬಿಟ್ಟಿದ್ದಾರೆ.


“‘ಇಸ್ರೇಲಿನ ಸುತ್ತಲಿರುವ ರಾಜ್ಯಗಳು ಅದನ್ನು ಹಗೆ ಮಾಡಿದರು. ಆ ರಾಜ್ಯಗಳಿಗೆ ಬಹು ದೊಡ್ಡ ಕಂಟಕವು ಬಂದೊದಗುವದು. ಆಗ ಹರಿತವಾದ ಮುಳ್ಳಾಗಲಿ ಮುಳ್ಳಿನ ಪೊದೆಗಳಾಗಲಿ ಇಸ್ರೇಲಿನ ಜನರನ್ನು ಬಾಸಿ ಮಾಡಲು ಇರುವದಿಲ್ಲ. ಆಗ ನಾನು ಅವರ ಒಡೆಯನಾದ ಯೆಹೋವನು ಎಂದು ಅವರು ತಿಳಿಯುವರು.’”


“ಈಗ ನೀನು ಸೋತವಳೂ ನಾಶವಾದವಳೂ ಆಗಿರುವಿ. ನಿನ್ನ ಭೂಮಿಯು ನಿಷ್ಪ್ರಯೋಜಕವಾಗಿದೆ. ಆದರೆ ಸ್ವಲ್ಪ ಸಮಯದ ನಂತರ ನಿನ್ನ ದೇಶವು ಜನರಿಂದ ತುಂಬುವದು. ನಿನ್ನನ್ನು ನಾಶಮಾಡಿದವರು ಬಹುದೂರ ಹೋಗುವರು.


ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯುದ್ಧಮಾಡಲು ನಾನು ಅಶ್ಶೂರವನ್ನು ಕಳುಹಿಸುವೆನು. ನಾನು ಅವರ ಮೇಲೆ ಕೋಪಗೊಂಡಿರುವೆನು. ಅಶ್ಶೂರಕ್ಕೆ ಅವರ ಮೇಲೆ ಯುದ್ಧ ಮಾಡುವಂತೆ ಆಜ್ಞಾಪಿಸುವೆನು. ಅಶ್ಶೂರವು ಅವರನ್ನು ಸೋಲಿಸಿ ಅವರ ಐಶ್ವರ್ಯವನ್ನೆಲ್ಲಾ ಸೂರೆಮಾಡುವದು. ಇಸ್ರೇಲು ಅಶ್ಶೂರದವರಿಗೆ ಬೀದಿಯ ಧೂಳಿನಂತಾಗುವದು.


ಆಮೇಲೆ ನಾನು ಎಲ್ಲಾ ಜನರಿಗೆ, “ನಮ್ಮ ದುರವಸ್ಥೆಯನ್ನು ನೀವು ನೋಡುತ್ತಿದ್ದೀರಿ. ಜೆರುಸಲೇಮ್ ಒಂದು ಹಾಳು ದಿಬ್ಬವಾಗಿದೆ; ಅದರ ಬಾಗಿಲುಗಳು ಸುಟ್ಟು ಬೂದಿಯಾಗಿವೆ. ಬನ್ನಿರಿ, ನಾವು ಜೆರುಸಲೇಮಿನ ಪೌಳಿಗೋಡೆಗಳನ್ನು ತಿರುಗಿ ಕಟ್ಟೋಣ. ಆಗ ನಾವು ಇನ್ನೆಂದಿಗೂ ನಾಚಿಕೆಗೆ ಗುರಿಯಾಗುವುದಿಲ್ಲ” ಎಂದು ಹೇಳಿದೆನು.


ಆಗ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಪ್ರಧಾನರೂ ನಾಯಕರೂ ಜೆರುಸಲೇಮಿಗೆ ಹೊರಟರು. ದೇವಾಲಯವನ್ನು ಕಟ್ಟಲು ಅವರು ಹೊರಟಾಗ ದೇವರಿಂದ ಪ್ರೋತ್ಸಾಹಿಸಲ್ಪಟ್ಟ ಇತರ ಜನರೂ ಅವರೊಂದಿಗೆ ಜೆರುಸಲೇಮಿಗೆ ಹೊರಟರು.


ನಮ್ಮನ್ನು ಸೆರೆಹಿಡಿದಿದ್ದ ಜನರು ಬಾಬಿಲೋನಿನಲ್ಲಿ ನಮಗೆ ಚೀಯೋನಿನ ಕುರಿತು ಹರ್ಷಗೀತೆಗಳನ್ನು ಹಾಡಲು ಹೇಳಿದರು.


ಅಶ್ಶೂರದ ಅರಸರು ಆ ಎಲ್ಲಾ ಜನಾಂಗಗಳನ್ನು ನಾಶಮಾಡಿದ್ದು ನಿಜ.


ನಿನ್ನಲ್ಲಿ ಅನೇಕಾನೇಕ ಮಂದಿ ವಾಸಿಸುವರು. ಇಡೀ ಇಸ್ರೇಲ್ ಜನಾಂಗದವರು ಅಲ್ಲಿ ವಾಸಮಾಡುವರು. ಪಟ್ಟಣಗಳು ಜನಭರಿತವಾಗುವವು. ಹಾಳಾದ ಸ್ಥಳಗಳೆಲ್ಲಾ ತಿರುಗಿ ಕಟ್ಟಲ್ಪಡುವವು.


ನಿನ್ನ ಸುತ್ತಲೂ ನೋಡು. ಜನರು ಸುತ್ತಲೂ ನಿನ್ನ ಬಳಿಗೆ ಬಂದು ಸೇರುವದನ್ನು ನೋಡು. ಅವರು ದೂರ ಪ್ರಾಂತ್ಯದಿಂದ ಬರುವ ನಿನ್ನ ಗಂಡುಮಕ್ಕಳಾಗಿದ್ದಾರೆ. ನಿನ್ನ ಕುಮಾರಿಯರು ಅವರೊಂದಿಗೆ ಬರುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು