Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:18 - ಪರಿಶುದ್ದ ಬೈಬಲ್‌

18 ಮೇಲಕ್ಕೆ ನೋಡು! ನಿನ್ನ ಸುತ್ತಲೂ ನೋಡು! ನಿನ್ನ ಮಕ್ಕಳೆಲ್ಲಾ ಒಟ್ಟಾಗಿ ಸೇರಿ ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೇಳುವುದೇನೆಂದರೆ, “ನನ್ನ ಜೀವದಾಣೆ, ನಿನ್ನ ಮಕ್ಕಳು ನೀನು ಕೊರಳಲ್ಲಿ ಧರಿಸುವ ಹಾರದಂತಿರುವರು. ಮದುಮಗಳು ಧರಿಸುವ ಕಂಠಹಾರದಂತೆ ನಿನ್ನ ಮಕ್ಕಳಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಕಣ್ಣೆತ್ತಿ ಸುತ್ತಲು ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ನೀನು ಇವರನ್ನೆಲ್ಲಾ ಆಭರಣವನ್ನಾಗಿ ಧರಿಸಿಕೊಳ್ಳುವಿ, ವಧುವು ಒಡ್ಯಾಣವನ್ನು ಕಟ್ಟಿಕೊಳ್ಳುವ ಹಾಗೆ ನೀನು ಇವರನ್ನು ನಿನ್ನ ಎದೆಗೆ ಒರಗಿ ಕಟ್ಟಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಕಣ್ಣೆತ್ತಿ ಸುತ್ತಮುತ್ತಲು ನೋಡು : ಬರುತಿಹರು ನಿನ್ನ ಬಳಿಗೆ ಅವರೆಲ್ಲರು ಕೂಡಿಕೊಂಡು. ನನ್ನ ಜೀವದಾಣೆ ನಿನಗೆ ಹೇಳುವುದೇನೆಂದರೆ : ‘ವಧುವು ಒಡವೆಗಳನು ಧರಿಸಿಕೊಳ್ಳುವಂತೆ ಅವರಾಗುವರು ನಿನಗೆ ಆಭರಣಗಳಂತೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕಣ್ಣೆತ್ತಿ ಸುತ್ತಲು ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗನ್ನುತ್ತಾನೆ - ನನ್ನ ಜೀವದಾಣೆ, ನೀನು ಇವರನ್ನೆಲ್ಲಾ ಆಭರಣವನ್ನಾಗಿ ಧರಿಸಿಕೊಳ್ಳುವಿ, ವಧುವು ಒಡ್ಯಾಣವನ್ನು ಕಟ್ಟಿಕೊಳ್ಳುವಂತೆ ನೀನು ಇವರನ್ನು ಕಟ್ಟಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವ ದೇವರು ಹೇಳುವುದೇನೆಂದರೆ,” ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವೆ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:18
26 ತಿಳಿವುಗಳ ಹೋಲಿಕೆ  

ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.


ದೇವರು ಹೇಳುವುದೇನೆಂದರೆ: “ನೋಹನ ಕಾಲದಲ್ಲಿ ನಾನು ಲೋಕವನ್ನು ಜಲಪ್ರವಾಹದ ಮೂಲಕ ಶಿಕ್ಷಿಸಿದ್ದನ್ನು ಜ್ಞಾಪಕಮಾಡಿಕೊ. ಆ ಬಳಿಕ ನಾನು ನೋಹನಿಗೆ ಪ್ರಪಂಚವನ್ನು ಜಲಪ್ರವಾಹದಿಂದ ಇನ್ನೆಂದಿಗೂ ನಾಶಪಡಿಸುವದಿಲ್ಲ ಎಂದು ಪ್ರಮಾಣ ಮಾಡಿದೆನು. ಅದೇ ರೀತಿಯಲ್ಲಿ ಇನ್ನೆಂದಿಗೂ ನಿನ್ನ ಮೇಲೆ ಕೋಪಗೊಳ್ಳುವುದಿಲ್ಲವೆಂತಲೂ ನಿನ್ನನ್ನು ಗದರಿಸುವುದಿಲ್ಲವೆಂತಲೂ ನಾನು ನಿನಗೆ ಪ್ರಮಾಣ ಮಾಡುತ್ತೇನೆ.”


ಯುವತಿಯು ತನ್ನ ಆಭರಣಗಳನ್ನು ಮರೆಯುವಳೇ? ಇಲ್ಲ. ವಧುವು ಮದುವೆಯ ಉಡುಪನ್ನು ಧರಿಸಿಕೊಳ್ಳಲು ಮರೆಯುವಳೇ? ಇಲ್ಲ. ಆದರೆ ನನ್ನ ಜನರು ನನ್ನನ್ನು ಅಸಂಖ್ಯಾತ ದಿನಗಳವರೆಗೆ ಮರೆತುಬಿಟ್ಟಿದ್ದಾರೆ.


ಅವರು ನಿಮ್ಮ ಸಹೋದರಸಹೋದರಿಯರನ್ನು ಎಲ್ಲಾ ಜನಾಂಗಗಳೊಳಗಿಂದ ಕರೆದುಕೊಂಡು ನನ್ನ ಪವಿತ್ರ ಪರ್ವತವಾದ ಜೆರುಸಲೇಮಿಗೆ ಬರುವರು. ನಿನ್ನ ಸಹೋದರಸಹೋದರಿಯರು ಕುದುರೆ, ಕತ್ತೆ, ಒಂಟೆ, ರಥ ಮತ್ತು ಗಾಡಿಗಳಲ್ಲಿ ಕುಳಿತುಕೊಂಡು ಬರುವರು. ಯೆಹೋವನ ಮಂದಿರದೊಳಗೆ ಶುದ್ಧವಾದ ತಟ್ಟೆಯ ಮೇಲೆ ಕಾಣಿಕೆಗಳನ್ನು ತರುವಂತೆಯೇ ನಿನ್ನ ಸಹೋದರಸಹೋದರಿಯರಾದ ಇಸ್ರೇಲರು ಬರುವರು.


ದೇವರು ಹೇಳುವುದೇನೆಂದರೆ: “ನಾನು ನಿನ್ನನ್ನು ತೊರೆದೆನು. ಆದರೆ ಸ್ವಲ್ಪ ಸಮಯಕ್ಕಾಗಿ ಮಾತ್ರ. ನಿನ್ನನ್ನು ಮತ್ತೆ ನನಗಾಗಿ ಒಟ್ಟುಗೂಡಿಸುವೆನು. ಆಗ ನಿನಗೆ ಅತ್ಯಂತ ದಯೆಯನ್ನು ತೋರಿಸುವೆನು.


“ಇಗೋ, ದೂರದೇಶಗಳಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ. ಉತ್ತರ, ಪಶ್ಚಿಮ ದಿಕ್ಕುಗಳಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ. ಈಜಿಪ್ಟಿನ ಅಸ್ವಾನಿನಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ.”


ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.


ಪರಿಶುದ್ಧ ನಗರವು ಪರಲೋಕದಿಂದ ದೇವರ ಬಳಿಯಿಂದ ಇಳಿದು ಬರುತ್ತಿರುವುದನ್ನು ನಾನು ನೋಡಿದೆನು. ಈ ಪರಿಶುದ್ಧ ನಗರವೇ ನೂತನ ಜೆರುಸಲೇಮ್. ವಧುವು ತನ್ನ ಪತಿಗಾಗಿ ಶೃಂಗರಿಸಿಕೊಳ್ಳುವಂತೆ ಅದನ್ನು ಸಿದ್ಧಪಡಿಸಿದ್ದರು.


ನಾನು ಇಸ್ರೇಲರನ್ನು ಉತ್ತರದ ದೇಶದಿಂದ ತರುವೆನು. ನಾನು ಜಗತ್ತಿನ ದೂರದೂರದ ಸ್ಥಳಗಳಿಂದ ಇಸ್ರೇಲರನ್ನು ಒಟ್ಟುಗೂಡಿಸುವೆನೆಂದು ತಿಳಿದುಕೊಳ್ಳಿರಿ. ಅವರಲ್ಲಿ ಕೆಲವರು ಕುರುಡರಾಗಿರುವರು; ಕುಂಟರಾಗಿರುವರು, ಕೆಲವು ಸ್ತ್ರೀಯರು ಗರ್ಭಿಣಿಯರಾಗಿದ್ದು ಹೆರಿಗೆಯ ದಿನಗಳು ತುಂಬಿದವರಾಗಿರುತ್ತಾರೆ. ಬಹಳಷ್ಟು ಜನರು ಹಿಂತಿರುಗಿಬರುತ್ತಾರೆ.


ಚೀಯೋನೇ, ಎಚ್ಚರಗೊಳ್ಳು, ಎದ್ದೇಳು! ನಿನ್ನ ಉಡುಪನ್ನು ಹಾಕಿಕೊ; ನಿನ್ನ ಪ್ರತಾಪವನ್ನು ಧರಿಸಿಕೊ. ಪರಿಶುದ್ಧ ಜೆರುಸಲೇಮೇ, ಎದ್ದುನಿಲ್ಲು. ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನಲ್ಲಿಗೆ ಮತ್ತೇ ಪ್ರವೇಶಿಸರು.


ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನಾನು ಜನಾಂಗಗಳಿಗೆ ಕೈಬೀಸಿ ಸನ್ನೆ ಮಾಡುವೆನು. ಎಲ್ಲಾ ಜನರು ನೋಡುವಂತೆ ನಾನು ನನ್ನ ಧ್ವಜವನ್ನು ಎತ್ತುವೆನು. ಆಗ ಅವರು ನಿನ್ನ ಮಕ್ಕಳನ್ನು ನಿನಗೆ ತಂದೊಪ್ಪಿಸುವರು. ಅವರು ನಿನ್ನ ಮಕ್ಕಳನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ತರುವರು. ತಮ್ಮ ಕೈಗಳಲ್ಲಿ ಅವರನ್ನು ಎತ್ತಿಕೊಂಡು ಬರುವರು.


“ನನ್ನ ಪರಾಕ್ರಮದಿಂದ ನಾನು ವಾಗ್ದಾನ ಮಾಡುತ್ತೇನೆ. ನನ್ನ ಆಜ್ಞೆಯು ನ್ಯಾಯವಾದದ್ದೂ ನೀತಿಯುಳ್ಳದ್ದೂ ಆಗಿದೆ. ಇಂಥದ್ದು ನಾನು ಆಜ್ಞಾಪಿಸಿದಂತೆಯೇ ಸಂಭವಿಸುವದು. ಎಲ್ಲಾ ಜನರು ನನ್ನ ಮುಂದೆ ಅಡ್ಡಬೀಳುವರೆಂದು ನಾನು ವಾಗ್ದಾನ ಮಾಡುತ್ತೇನೆ. ಪ್ರತಿಯೊಬ್ಬನೂ ನನ್ನನ್ನು ಹಿಂಬಾಲಿಸಲು ಪ್ರತಿಜ್ಞೆ ಮಾಡುವನು.


ಮೊಮ್ಮಕ್ಕಳು ವೃದ್ಧರಿಗೆ ಸಂತೋಷ. ಮಕ್ಕಳಿಗೆ ತಮ್ಮ ತಂದೆತಾಯಿಗಳ ಬಗ್ಗೆ ಹೆಮ್ಮೆ.


“ನೀನು ನನಗೋಸ್ಕರವಾಗಿ ನಿನ್ನ ಒಬ್ಬನೇ ಮಗನನ್ನು ವಧಿಸಲು ಸಿದ್ಧನಾಗಿದ್ದೆ. ಆದ್ದರಿಂದ ನಾನು ನಿನಗೆ ಈ ವಾಗ್ದಾನವನ್ನು ಮಾಡುತ್ತೇನೆ:


ಲೋಟನು ಹೊರಟುಹೋದ ಮೇಲೆ ಯೆಹೋವನು ಅಬ್ರಾಮನಿಗೆ, “ಸುತ್ತಲೂ ನೋಡು, ಉತ್ತರದಕ್ಷಿಣಗಳ ಕಡೆಗೂ ಪೂರ್ವಪಶ್ಚಿಮಗಳ ಕಡೆಗೂ ನೋಡು.


‘ಸುಗ್ಗಿಗೆ ಇನ್ನೂ ನಾಲ್ಕು ತಿಂಗಳು ಕಾಯಬೇಕು’ ಎಂದು ನೀವು ಹೇಳುವಿರಿ. ಆದರೆ ನಾನು ನಿಮಗೆ ಹೇಳುತ್ತೇನೆ, ನಿಮ್ಮ ಕಣ್ಣುಗಳನ್ನು ತೆರೆಯಿರಿ. ಹೊಲಗಳ ಸುತ್ತಲೆಲ್ಲಾ ನೋಡಿರಿ, ಅವು ಕೊಯ್ಲಿಗೆ ಬಂದಿವೆ.


ಆದಾಗ್ಯೂ ನನ್ನ ಜೀವದಾಣೆ ಮತ್ತು ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರಬೇಕೆಂಬುವ ನಿಶ್ಚಯ ವಾಕ್ಯದ ಆಣೆ,


ಈಜಿಪ್ಟಿನ ಸುಳ್ಳುದೇವರುಗಳ ಆಲಯದಲ್ಲಿ ನೆಬೂಕದ್ನೆಚ್ಚರನು ಬೆಂಕಿಯನ್ನು ಹೊತ್ತಿಸುವನು, ಅವನು ಆಲಯಗಳನ್ನು ಸುಟ್ಟು ಆ ವಿಗ್ರಹಗಳನ್ನು ತೆಗೆದುಕೊಂಡು ಹೋಗುವನು. ಕುರುಬನು ತನ್ನ ಬಟ್ಟೆಗಳಿಂದ ತಿಗಣೆ ಮತ್ತು ಹೇನುಗಳನ್ನು ತೆಗೆದುಹಾಕಿ ಸ್ವಚ್ಛಗೊಳಿಸುವಂತೆ ನೆಬೂಕದ್ನೆಚ್ಚರನು ಈಜಿಪ್ಟನ್ನು ಬಿಟ್ಟು ಹೋಗುವನು.


“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು